Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ, ನಾಡಿದ್ದು ಕರೆಂಟ್ ಇರಲ್ಲ
BESCOM News: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆ.ವಿ ಸೋಲದೇವನಹಳ್ಳಿ (66 ಸ್ಥಾವರ (ಪುಟ್ಟೇನಹಳ್ಳಿ) ಪೀಣ್ಯ 1 2 ಲೈನ್) ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜ.10ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತ್ತು ಜ.11 ರಂದು ಭಾನುವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ. -
ಬೆಂಗಳೂರು, ಜ.9: ಕೆಪಿಟಿಸಿಎಲ್ ವತಿಯಿಂದ (KPTCL) ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆ.ವಿ ಸೋಲದೇವನಹಳ್ಳಿ (66 ಸ್ಥಾವರ (ಪುಟ್ಟೇನಹಳ್ಳಿ) ಪೀಣ್ಯ 1 2 ಲೈನ್) ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜ.10ರಂದು ಶನಿವಾರ ಬೆಳಗ್ಗೆ 10ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತ್ತು ಜ.11 ರಂದು ಭಾನುವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು
ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್, ಸಾಸುವೆಘಟ್ಟ, ಬಜ್ಜಪ್ಪ ಲೇಔಟ್, ಶಿವಕುಮಾರ ಸ್ವಾಮೀಜಿ ಲೇಔಟ್, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ, ಡ್ಯಾನಿಶ್ ಫಾರ್ಮ್, ಕೆಎಂಎಫ್, ಪಶುಸಂಗೋಪನೆ, ಗುಣಿ ಅಗ್ರಹಾರ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಕೆರೆಗುಡ್ ಲೈನ್, ಫೀಡರ್, ಹುರುಳಿಚಿಕ್ಕನಹಳ್ಳಿ, ಕೆ.ಟಿ.ಪುರ, ಐಐಎಚ್ಆರ್, ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ರಾಜ್ಯ ಮೀನುಗಾರಿಕೆ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಮಧುಗಿರಿವೇಹಳ್ಳಿ, ಹುರುಳಿಚಿಕ್ಕನಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯರಸ್ತೆ, ಅಚ್ಯುತ್ ನಗರ, ಸೋಲದೇವನ ಹಳ್ಳಿ, ಸಾಸುವೆಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯುತ್ ಸಮಸ್ಯೆಗಳಿಗೆ 1912 ಅಥವಾ ʼವಾಟ್ಸ್ ಆ್ಯಪ್ʼ ಸಹಾಯವಾಣಿಗೆ ದೂರು ದಾಖಲಿಸಿ: ಬೆಸ್ಕಾಂ
ಬೆಂಗಳೂರು: ರೈತರು ಹಾಗೂ ಸಾರ್ವಜನಿಕರು ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಶೀಘ್ರ ಪರಿಹಾರಕ್ಕೆ ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912 ಹಾಗೂ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ʼವಾಟ್ಸ್ ಆ್ಯಪ್ʼ ಸಹಾಯವಾಣಿ ಸಂಖ್ಯೆಗಳಿಗೆ (BESCOM Helpline) ದೂರು ದಾಖಲಿಸಲು ಬೆಸ್ಕಾಂ (BESCOM) ಮನವಿ ಮಾಡಿದೆ. ರೈತರ ಹೊಲ-ಗದ್ದೆಗಳಲ್ಲಿರುವ ವಿದ್ಯುತ್ ಪರಿವರ್ತಕಗಳು ವಿಫಲತೆ ಹೊಂದಿದಾಗ ಹಾಗೂ ವಿದ್ಯುತ್ ಸಂಬಂಧಿತ ದೂರುಗಳಿದ್ದಲ್ಲಿ ತಕ್ಷಣ 1912 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಲು ಬೆಸ್ಕಾಂ ತಿಳಿಸಿದೆ.
ಒಂದು ವೇಳೆ 1912 ಸಹಾಯವಾಣಿ ಸಂಖ್ಯೆ ಲಭ್ಯವಾಗದಿದ್ದಲ್ಲಿ ರೈತರು ತಮ್ಮ ಜಿಲ್ಲೆಗೆ ಸಂಬಂಧಿಸಿದ ʼವಾಟ್ಸ್ ಆ್ಯಪ್ʼ ಸಹಾಯವಾಣಿ ಸಂಖ್ಯೆಗಳಿಗೆ ದೂರುಗಳನ್ನು ದಾಖಲಿಸಬಹುದಾಗಿದೆ. ಬೆಸ್ಕಾಂನ ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ, ಉತ್ತರ, ಪೂರ್ವ ಹಾಗು ಪಶ್ಚಿಮ ವೃತ್ತಗಳಿಗೆ 4 ವಾಟ್ಸ್ ಆ್ಯಪ್ ಸಹಾಯವಾಣಿ ಸಂಖ್ಯೆಗಳು ಹಾಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ , ಚಿಕ್ಕಬಳ್ಳಾಪುರ ಹಾಗು ಕೋಲಾರ ಜಿಲ್ಲೆಗಳ ಬೆಸ್ಕಾಂ ವೃತ್ತಗಳಿಗೆ ತಲಾ ಒಂದು ʼವಾಟ್ಸ್ ಆ್ಯಪ್ʼ ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ.
ʼವಾಟ್ಸ್ ಆ್ಯಪ್ʼ ಸಹಾಯವಾಣಿ ಸಂಖ್ಯೆಗಳ ವಿವರ
ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ: 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ: 8277884013, ಉತ್ತರ ವೃತ್ತ: 8277884014.
ಕೋಲಾರ ಜಿಲ್ಲೆ: 8277884015, ಚಿಕ್ಕಬಳ್ಳಾಪುರ ಜಿಲ್ಲೆ: 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದುರ್ಗ ಜಿಲ್ಲೆ : 8277884020, ದಾವಣಗರೆ ಜಿಲ್ಲೆ: 8277884021
ಒತ್ತುವರಿ ಮಳಿಗೆಗಳಿಗೆ ನಿಯಮ ಬಾಹಿರ ವಿದ್ಯುತ್ ಸಂಪರ್ಕ; ಕ್ರಮಕ್ಕೆ ಆಗ್ರಹ
ವಿದ್ಯುತ್ ಸಮಸ್ಯೆಗಳ ಕುರಿತು ರೈತರು ಹಾಗೂ ಸಾರ್ವಜನಿಕರು ದೂರುಗಳನ್ನು ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912 ಗಾಗಲಿ ಅಥವಾ ಸಂದೇಶಗಳನ್ನು ತಮ್ಮ ಪ್ರದೇಶಕ್ಕೆ ಸಂಬಂಧಿಸಿದ ʼವಾಟ್ಸ್ ಆ್ಯಪ್ʼ ಸಂಖ್ಯೆಗಳಿಗಾಗಲಿ ಕಳುಹಿಸಿದ ಕೂಡಲೇ, 1912 ಸಹಾಯವಾಣಿ ಕೇಂದ್ರದ ಗ್ರಾಹಕ ಸೇವಾ ಪ್ರತಿನಿಧಿಗಳು ದೂರುಗಳನ್ನು ಅಥವಾ ಸಂದೇಶಗಳನ್ನು ಸಂಬಂಧಿಸಿದ ಬೆಸ್ಕಾಂ ಉಪ ವಿಭಾಗಗಳಿಗೆ ರವಾನಿಸಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.