ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bengaluru Power Cut: ನಾಳೆ ಬೆಂಗಳೂರಿನ ಬಾಣಸವಾಡಿ, ಹೊರಮಾವು ಸೇರಿ ಹಲವೆಡೆ ವಿದ್ಯುತ್‌ ವ್ಯತ್ಯಯ

BESCOM News: 66/11 ಕೆ.ವಿ. ಬಾಣಸವಾಡಿಯ ಉಪಕೇಂದ್ರದ 66 ಕೆ.ವಿ. ಲೈನ್‌ನಲ್ಲಿ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜ.13ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

ನಾಳೆ ಬೆಂಗಳೂರಿನ ಬಾಣಸವಾಡಿ ಸೇರಿ ಹಲವೆಡೆ ವಿದ್ಯುತ್‌ ವ್ಯತ್ಯಯ

ಸಾಂದರ್ಭಿಕ ಚಿತ್ರ. -

Profile
Siddalinga Swamy Jan 12, 2026 8:42 PM

ಬೆಂಗಳೂರು, ಜ.12: 66/11 ಕೆ.ವಿ. ಬಾಣಸವಾಡಿಯ ಉಪಕೇಂದ್ರದ 66 ಕೆ.ವಿ. ಲೈನ್‌ನಲ್ಲಿ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜ.13ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಎಚ್ಆರ್‌ಬಿಆರ್ ಲೇಔಟ್ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಸರ್ವೀಸ್ ರೋಡ್, ಕಮ್ಮನಹಳ್ಳಿ ಮೇನ್ ರೋಡ್, ಸಿಎಂಆರ್ ರೋಡ್, ಬಾಬುಸಾಪಾಳ್ಯ, ಬಾಲಚಂದ್ರ ಲೇಔಟ್, ಫ್ಲವರ್ ಗಾರ್ಡನ್, ಎಂಎಂ ಗಾರ್ಡನ್, ಆರ್ಕಾವತಿ ಲೇಔಟ್, ಅಂಜನಾದ್ರಿ ಲೇಔಟ್ ಎನ್‌ಕ್ಲೇವ್, ದಿವ್ಯ ಉನ್ನತಿ ಲೇಔಟ್, ವಿಜಯೇಂದ್ರ ಗಾರ್ಡನ್, ಮಲ್ಲಪ್ಪ ಲೇಔಟ್, ಪ್ರಕೃತಿ ಟೌನ್‌ಶಿಪ್, ಬಾಲಾಜಿ ಲೇಔಟ್, ಜಿಎನ್ಆರ್ ಗಾರ್ಡನ್, ಚೆಲೆಕರೆ, ಚೆಲೆಕರೆ ವಿಲೇಜ್, ಸಮುದ್ರಿಕಾ ಎನ್ಕ್ಲೇವ್, 100 ಅಡಿ ರಸ್ತೆ, 80 ಅಡಿ ರಸ್ತೆ, ಸುಬ್ಬಯ್ಯನಪಾಳ್ಯ, ಹೊರಮಾವು, ಮುನಿರೆಡ್ಡಿ ಲೇಔಟ್, ವಿಜಯ ಬ್ಯಾಂಕ್ ಕಾಲೋನಿ, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಅಮರ್ ಏಜೆನ್ಸಿ ಲೇಔಟ್, ಪಿ & ಟಿ ಲೇಔಟ್, ಪಪ್ಪಯ್ಯ ಲೇಔಟ್, ಕೊಕನಟ್ ಗ್ರೋವ್ ಲೇಔಟ್, ಆಶೀರ್ವಾದ್ ಕಾಲೋನಿ, ಶಕ್ತಿ ನಗರ, ಹೆಣ್ಣೂರು ವಿಲೇಜ್, ಬೈರವೇಶ್ವರ ಲೇಔಟ್, ಚಿಕ್ಕಣ್ಣ ಲೇಔಟ್, ಸಿಎಂಆರ್ ಲೇಔಟ್, ಹೆಣ್ಣೂರು ಕ್ರಾಸ್, ಕೆಂಚಪ್ಪ ಗಾರ್ಡನ್, ಬೃಂದಾವನ ಲೇಔಟ್, ಹೊಯ್ಸಳ ನಗರ, ಬೃಂದಾವನ ಅವೆನ್ಯೂ ಹೆರಿಟೇಜ್‌ನಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ಅದೇ ರೀತಿ ವಿನಾಯಕ ಲೇಔಟ್, ಜಯಂತಿ ಗ್ರಾಮ, ಬಿಡಿಎ ಕಾಂಪ್ಲೆಕ್ಸ್ ಎದುರು, ನರೇಂದ್ರ ಟೆಂಟ್ ಹತ್ತಿರ, ಓಎಂಬಿಆರ್ ಲೇಔಟ್ (ಭಾಗ), ಕಸ್ತೂರಿ ನಗರ (ಭಾಗ), ಪಿಲ್ಲರೆಡ್ಡಿ ನಗರ (ಭಾಗ), ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜ್ಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿ ನಗರ ಮೇನ್ ರೋಡ್, ಬಿ. ಚನ್ನಸಂದ್ರ, ನಂಜಪ್ಪ ಗಾರ್ಡನ್, ಅಗಾರೆ ಮೇನ್ ರೋಡ್, ದೊಡ್ಡಯ್ಯ ಲೇಔಟ್, ಬ್ಯಾಂಕ್ ಅವೆನ್ಯೂ, ಆರ್.ಎಸ್. ಪಾಳ್ಯ, ಎಡಿಎಂಸಿ ಮಿಲಿಟರಿ ಗೇಟ್, ಮುನಿಸ್ವಾಮಿ ರಸ್ತೆ, ಮುನಿ ವೀರಪ್ಪ ರಸ್ತೆ, ಕುಳ್ಳಪ್ಪ ಸರ್ಕಲ್, ರಾಜಕುಮಾರ್ ಪಾರ್ಕ್, ಮೇಘನಾ ಪಾಳ್ಯ, ಮುನಿಸ್ವಾಮಪ್ಪ ಲೇಔಟ್, ಯೇಶ್ ಎನ್ಕ್ಲೇವ್, ಬಂಜಾರಾ ಲೇಔಟ್, ವಿಜಯಲಕ್ಷ್ಮೀ ಲೇಔಟ್, ಟ್ರಿನಿಟಿ ಎನ್ಕ್ಲೇವ್, ಸಂಕಲ್ಪ ಲೇಔಟ್, ಗ್ರೀನ್ ಗಾರ್ಡನ್ ಫೇಸ್–2, ಸಮೃದ್ಧಿ ಲೇಔಟ್, ಬೆಥೆಲ್ ಲೇಔಟ್, ಎಸ್ಎಲ್‌ವಿ ಲೇಔಟ್, ಎಸ್ಎಲ್ಎಸ್ ಸ್ಪೆನ್ಸರ್ ಅಪಾರ್ಟ್ಮೆಂಟ್ಸ್, ಡಿಎಸ್-ಮ್ಯಾಕ್ಸ್ ಅಪಾರ್ಟ್ಮೆಂಟ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯುತ್‌ ಸಮಸ್ಯೆಗಳಿಗೆ 1912 ಅಥವಾ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿಗೆ ದೂರು ದಾಖಲಿಸಿ: ಬೆಸ್ಕಾಂ

ಬೆಂಗಳೂರು: ರೈತರು ಹಾಗೂ ಸಾರ್ವಜನಿಕರು ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಶೀಘ್ರ ಪರಿಹಾರಕ್ಕೆ ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912 ಹಾಗೂ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳಿಗೆ (BESCOM Helpline) ದೂರು ದಾಖಲಿಸಲು ಬೆಸ್ಕಾಂ (BESCOM) ಮನವಿ ಮಾಡಿದೆ. ರೈತರ ಹೊಲ-ಗದ್ದೆಗಳಲ್ಲಿರುವ ವಿದ್ಯುತ್‌ ಪರಿವರ್ತಕಗಳು ವಿಫಲತೆ ಹೊಂದಿದಾಗ ಹಾಗೂ ವಿದ್ಯುತ್‌ ಸಂಬಂಧಿತ ದೂರುಗಳಿದ್ದಲ್ಲಿ ತಕ್ಷಣ 1912 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಲು ಬೆಸ್ಕಾಂ ತಿಳಿಸಿದೆ.

ಒಂದು ವೇಳೆ 1912 ಸಹಾಯವಾಣಿ ಸಂಖ್ಯೆ ಲಭ್ಯವಾಗದಿದ್ದಲ್ಲಿ ರೈತರು ತಮ್ಮ ಜಿಲ್ಲೆಗೆ ಸಂಬಂಧಿಸಿದ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳಿಗೆ ದೂರುಗಳನ್ನು ದಾಖಲಿಸಬಹುದಾಗಿದೆ. ಬೆಸ್ಕಾಂನ ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ, ಉತ್ತರ, ಪೂರ್ವ ಹಾಗು ಪಶ್ಚಿಮ ವೃತ್ತಗಳಿಗೆ 4 ವಾಟ್ಸ್‌ ಆ್ಯಪ್‌ ಸಹಾಯವಾಣಿ ಸಂಖ್ಯೆಗಳು ಹಾಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ , ಚಿಕ್ಕಬಳ್ಳಾಪುರ ಹಾಗು ಕೋಲಾರ ಜಿಲ್ಲೆಗಳ ಬೆಸ್ಕಾಂ ವೃತ್ತಗಳಿಗೆ ತಲಾ ಒಂದು ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ.

ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳ ವಿವರ

ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ: 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ: 8277884013, ಉತ್ತರ ವೃತ್ತ: 8277884014.

ಕೋಲಾರ ಜಿಲ್ಲೆ: 8277884015, ಚಿಕ್ಕಬಳ್ಳಾಪುರ ಜಿಲ್ಲೆ: 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದುರ್ಗ ಜಿಲ್ಲೆ : 8277884020, ದಾವಣಗರೆ ಜಿಲ್ಲೆ: 8277884021

Sankranti Shopping 2026: ಎಲ್ಲೆಡೆ ಸಂಕ್ರಾಂತಿಯ ಭರ್ಜರಿ ಶಾಪಿಂಗ್

ವಿದ್ಯುತ್ ಸಮಸ್ಯೆಗಳ ಕುರಿತು ರೈತರು ಹಾಗೂ ಸಾರ್ವಜನಿಕರು ದೂರುಗಳನ್ನು ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912 ಗಾಗಲಿ ಅಥವಾ ಸಂದೇಶಗಳನ್ನು ತಮ್ಮ ಪ್ರದೇಶಕ್ಕೆ ಸಂಬಂಧಿಸಿದ ʼವಾಟ್ಸ್‌ ಆ್ಯಪ್‌ʼ ಸಂಖ್ಯೆಗಳಿಗಾಗಲಿ ಕಳುಹಿಸಿದ ಕೂಡಲೇ, 1912 ಸಹಾಯವಾಣಿ ಕೇಂದ್ರದ ಗ್ರಾಹಕ ಸೇವಾ ಪ್ರತಿನಿಧಿಗಳು ದೂರುಗಳನ್ನು ಅಥವಾ ಸಂದೇಶಗಳನ್ನು ಸಂಬಂಧಿಸಿದ ಬೆಸ್ಕಾಂ ಉಪ ವಿಭಾಗಗಳಿಗೆ ರವಾನಿಸಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.