Bengaluru Power Cut: ಗಮನಿಸಿ; ಡಿ.27, 28ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯ
BESCOM News: ಸೋಲದೇವನಹಳ್ಳಿ ಸಬ್‌ಸ್ಟೇಷನ್‌ನಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್- 9ಉಪ ವಿಭಾಗದ ಹಲವೆಡೆ ಡಿ.27 ಮತ್ತು 28 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ
ಸಾಂದರ್ಭಿಕ ಚಿತ್ರ. -
ಬೆಂಗಳೂರು, ಡಿ.25: ಸೋಲದೇವನಹಳ್ಳಿ ಸಬ್‌ಸ್ಟೇಷನ್‌ನಲ್ಲಿ ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್- 9ಉಪ ವಿಭಾಗದ ಹಲವೆಡೆ ಡಿ.27 ಮತ್ತು 28 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿ ಜಾಜಿ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್, ಸಾಸುವೆಘಟ್ಟ, ಬಜ್ಜಪ್ಪ ಲೇಔಟ್, ಶಿವಕುಮಾರ ಸ್ವಾಮೀಜಿ ಲೇಔಟ್, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ, ಡ್ಯಾನಿಶ್ ಫಾರ್ಮ್, ಕೆಎಂಎಫ್, ಪಶುಸಂಗೋಪನೆ, ಗುಣಿ ಅಗ್ರಹಾರ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಕೆರೆಗುಡ್ ಲೈನ್. ಫೀಡರ್, ಹುರುಳಿಚಿಕ್ಕನಹಳ್ಳಿ, ಕೆ.ಟಿ.ಪುರ, ಐಐಎಚ್‌ಆರ್, ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ರಾಜ್ಯ ಮೀನುಗಾರಿಕೆ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಮಧುಗಿರಿವೇಹಳ್ಳಿ, ಹುರುಳಿಚಿಕ್ಕನಹಳ್ಳಿ, ಕುರುಬರಹಳ್ಳಿ, ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ, ಸಾಸುವೆಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಪೀಣ್ಯ ವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬೆಂಗಳೂರು: 220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್‌ನಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗದ ಹಲವೆಡೆ ಡಿ.27ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಪೀಣ್ಯ ಗ್ರಾಮ, ಎಸ್‌ಆರ್‌ಎಸ್ ರಸ್ತೆ, 4ನೇ ಬ್ಲಾಕ್, 2ನೇ ಬ್ಲಾಕ್, ಎಂಇಐ ಫ್ಯಾಕ್ಟರಿ, ರಾಜಗೋಪಾಲ ನಗರ, ಕಸ್ತೂರಿ ಬಡವಾಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10ನೇ ಕ್ರಾಸ್, 1ನೇ ಹಂತದ ಪೀಣ್ಯ ಕೈಗಾರಿಕಾ ಪ್ರದೇಶ, 3ನೇ ಕ್ರಾಸ್, 4ನೇ ಕ್ರಾಸ್, 1ನೇ ಸ್ಟೇಜ್ ಪೀಣ್ಯ ಕೈಗಾರಿಕಾ ಪ್ರದೇಶ, ಅಜೆಕ್ಸ್ ರಸ್ತೆ, ಸ್ಲಮ್ ರಸ್ತೆ, ಅನುಸೋಲಾರ್ ರಸ್ತೆ, ಚೈರ್ ಫ್ಯಾಕ್ಟರಿ ರಸ್ತೆ, ಜನರಲ್ ಮೆಟಲ್ ಸರ್ಕಲ್, ಸ್ನೋ ವೈಟ್ ರಸ್ತೆ, ಜನರಲ್ ಮೆಟಲ್ ರಸ್ತೆ, ಮೈಸೂರು ಎಂಜಿನಿಯರ್, ರಸ್ತೆ, ಸನ್‌ರೈಸ್ ಕಾಸ್ಟಿಂಗ್ ರಸ್ತೆ, 3ನೇ ಹಂತ. ವೈಷ್ಣವಿ ಮಾಲ್ + ಕ್ಯಾವೆರಿ ಮಾಲ್, ಗೃಹಲಕ್ಷ್ಮಿ-ಅಪಾರ್ಟ್‌ಮೆಂಟ್, ಎಸ್‌ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ ಪೀಣ್ಯ 4ನೇ ಹಂತ, 4ನೇ ಮುಖ್ಯ, 8ನೇ ಅಡ್ಡ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ನಾಳೆ ಬೆಂಗಳೂರಿನ ಹಲವೆಡೆ ಕರೆಂಟ್ ಇರಲ್ಲ
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆ.ವಿ. ಚಂದ್ರಾಲೇಔಟ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಡಿ.26ರಂದು ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಆರ್.ಪಿ.ಸಿ. ಲೇಔಟ್, ರೆಮ್ಕೋ ಲೇಔಟ್, ಕಲ್ಯಾಣ್ ಲೇಔಟ್, ಸುಬ್ಬಣ್ಣ ಗಾರ್ಡನ್, ವಿಡಿಯಾ ಲೇಔಟ್, ಎಂ.ಆರ್.ಸಿ.ಆರ್. ಲೇಔಟ್, ಚಂದ್ರಾ ಲೇಔಟ್, ಬಾಪೂಜಿ ಲೇಔಟ್, ವಿನಾಯಕ ಲೇಔಟ್, ಮೂಡಲಪಾಳ್ಯ, ಸ್ಕೈಲೈನ್ ಅಪಾರ್ಟ್ಮೆಂಟ್, ಕೆನರಾ ಬ್ಯಾಂಕ್ ಕಾಲೋನಿ, ವಿದ್ಯಾಗಿರಿ ಲೇಔಟ್, ಗಂಗೊಂಡನಹಳ್ಳಿ, ಸುವರ್ಣ ಲೇಔಟ್, ಬಿಡಿಎ 13ನೇ ಮತ್ತು 14ನೇ ಬ್ಲಾಕ್, ಕೆಂಗುಂಟೆ, ಭೈರವೇಶ್ವರನಗರ, ನಾಗರಬಾವಿ ಕೊಕನಟ್ ಗಾರ್ಡನ್, ಕಾವೇರಿ ಲೇಔಟ್, ಎಸ್.ವಿ.ಜಿ.ಗಾರ್ಡನ್, ಸಂಜೀವಿನಿ ನಗರ, ಎನ್.ಜಿ.ಇ.ಎಫ್ ಲೇಔಟ್, ಕಲ್ಯಾಣನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿಸೆಂಬರ್ 26ರಂದು ಕರೆಂಟ್ ಇರಲ್ಲ
ಕಟ್ಟಿಗೇನಹಳ್ಳಿ ವ್ಯಾಪ್ತಿಯಲ್ಲಿಯೂ ಕರೆಂಟ್ ಇರಲ್ಲ
66/11 ಕೆ.ವಿ. ಕಟ್ಟಿಗೇನಹಳ್ಳಿ ವಿದ್ಯುತ್ ಕೇಂದ್ರ ವ್ಯಾಪ್ತಿಯ ಹಲವೆಡೆಯೂ ಡಿ.26ರಂದು ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ ಅಪರಾಹ್ನ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಉತ್ತರ ಗೇಟ್ 1,2,3, ರಾಯಭಾರ ಕಚೇರಿ, ಫಿಲಿಪ್ಸ್ ಕಂಪನಿ, ದ್ವಾರಕಾನಗರ, ಬಾಬಾನಗರ, ಕಟ್ಟಿಗೇನಹಳ್ಳಿ ಸರ್ಡಿಂಗ್, ಬಾಗಲೂರು ಕ್ರಾಸ್, ಮತ್ತು ಬಾಗಲೂರು ಮುಖ್ಯ ರಸ್ತೆ, ಮಣಿಪಾಲ ಕಾಲೇಜು, ಬಿಎಸ್‌ಎಫ್, ಪಿಡಿಎಂಎಸ್,ಬಾಗಲೂರು ಕ್ರಾಸ್ ವಿನಾಯಕನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಉತ್ತರ ಗೇಟ್ 1, 2,3, ರಾಯಭಾರ ಕಚೇರಿ, ಫಿಲಿಪ್ಸ್ ಕಂಪನಿ, ದ್ವಾರಕಾನಗರ, ಬಾಬಾನಗರ, ಕಟ್ಟಿಗೇನಹಳ್ಳಿ ಸುತ್ತಮುತ್ತ, ಬಾಗಲೂರು ಕ್ರಾಸ್, ಮತ್ತು ಬಾಗಲೂರು ಮುಖ್ಯ ರಸ್ತೆ, ಮಣಿಪಾಲ ಕಾಲೇಜು, ಬಿಎಸ್‌ಎಫ್, ಪಿಡಿಎಂಎಸ್, ಬಾಗಲೂರು ಕ್ರಾಸ್ ವಿನಾಯಕನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.