Bengaluru Power Cut: ಜು.22, 23ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜು.22ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.


ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜು.22ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪಾರ್ಟ್‌ಮೆಂಟ್, 8ನೇ ಮೈಲ್ ರಸ್ತೆ, ರಾಮಯ್ಯ ಲೇಔಟ್, ಹಾವನೂರು ಎಕ್ಸ್ಟೆನ್. ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ರಿಲಯನ್ಸ್ ಫ್ರೆಶ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾ ನಗರ, ಡಿಫೆನ್ಸ್ ಕಾಲೋನಿ, ಮಂಜುನಾಥ್ ನಗರ, ಮಹಾಲಕ್ಷ್ಮಿ ನಗರ, ಕಾಟರಾಯ ನಗರ, ಸೋಪ್ ಫ್ಯಾಕ್ಟರಿ ಲೇಔಟ್, ವಿಜಯಲಕ್ಷ್ಮಿ ಲೇಔಟ್, ಅಂದಾನಪ್ಪ ಲೇಔಟ್, ಬಿಟಿಎಸ್ ಲೇಔಟ್, ಸಿದ್ದೇಶ್ವರ ಲೇಔಟ್, ಸಾಸುವೆಘಟ್ಟ, ಸೋಲದೇವನಹಳ್ಳಿಯ ಭಾಗಶಃ, ತರಬನಹಳ್ಳಿ ಮುಖ್ಯ ರಸ್ತೆ, ಹಾವನೂರು ಎಕ್ಸ್ಟೆನ್, ಹೆಸರಘಟ್ಟ ಮುಖ್ಯ ರಸ್ತೆ, ಸಿಡೇದಹಳ್ಳಿ, ಭಾಗಶಃ ವಿಶ್ವೇಶರಯ್ಯ ಲೇಔಟ್, ರಾಯಲ್ ಎನ್‌ಕ್ಲೇವ್, ಬೈರವೇಶ್ವರ ವೃತ್ತ. ಮತ್ತು ಸುತ್ತಮುತ್ತಲಿನ ಪ್ರದೇಶಗಳು.
66/11 ಕೆ.ವಿ. ಸಹಕಾರ ನಗರ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜು.23ರಂದು ಬುಧವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್ಎಸ್ ಲೇಔಟ್, ಸೂರ್ಯೋದಯ ನಗರ. 2, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರಜಕ್ಕೂರು, ವಿಆರ್‌ಎಲ್ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸುದ್ದಿಯನ್ನೂ ಓದಿ | Celebrity Fashion 2025: ಮಾನ್ಸೂನ್ ಲುಕ್‌ಗೆ ಸೈ ಎಂದ ಮಾಡೆಲ್ ಕಮ್ ನಟ ವಿನಯ್ ಸಿಂಧ್ಯಾ