ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆ.15ರಿಂದ 29ರವರೆಗೆ ವಿದ್ಯುತ್‌ ವ್ಯತ್ಯಯ

Bengaluru Power Cut: 66/11 ಕೆವಿ ಸಹಕಾರ ನಗರ ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-8 ಉಪ ವಿಭಾಗದ ಹಲವೆಡೆ ಸೆ.15ರಿಂದ ಸೆ.29ರವರೆಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆ.15ರಿಂದ 29ರವರೆಗೆ ವಿದ್ಯುತ್‌ ವ್ಯತ್ಯಯ

ಸಾಂದರ್ಭಿಕ ಚಿತ್ರ. -

Profile Siddalinga Swamy Sep 13, 2025 3:25 PM

ಬೆಂಗಳೂರು: 66/11 ಕೆವಿ ಸಹಕಾರ ನಗರ ಸ್ಟೇಷನ್ ಕೆಪಿಟಿಸಿಎಲ್‌ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-8 ಉಪ ವಿಭಾಗದ ಹಲವೆಡೆ ಸೆ.15ರಿಂದ ಸೆ.29ರವರೆಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ವಿದ್ಯುತ್‌ ವ್ಯತ್ಯಯವಾಗುವ ಪ್ರದೇಶಗಳು

ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಔಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್, ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್‌ಎಸ್ ಲೇಔಟ್, ಸೂರ್ಯೋದಯ ನಗರ. 2, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರ ಜಕ್ಕೂರು, ವಿಆರ್‌ಎಲ್ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನೂ ಓದಿ | Karnataka Grameena Bank Recruitment 2025: ಪದವೀಧರರಿಗೆ ಗುಡ್‌ನ್ಯೂಸ್‌; ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿದೆ 1,425 ಹುದ್ದೆ

School Holidays: ಸೆ.20ರಿಂದ ರಾಜ್ಯದ ಶಾಲೆಗಳಿಗೆ ದಸರಾ ರಜೆ: ಎಷ್ಟು ದಿನ? ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ದಸರಾ ರಜೆ (Dasara holidays) ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಒಟ್ಟು 18 ದಿನಗಳು ರಜೆ (School Holidays) ಸಿಗಲಿದೆ. ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಸರಾ ರಜೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ.

2025-26ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಸೆಪ್ಟೆಂಬರ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7 ರವರೆಗೆ ಇರಲಿದೆ. ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 18 ದಿನ ಇರಲಿದೆ. ದಸರಾ ರಜೆ ಇದ್ದರೂ ಅಕ್ಟೋಬರ್ 2ರಂದು ಶಾಲೆ ತೆರೆಯಲು ಸೂಚಿಸಲಾಗಿದೆ. ಈ ದಿನ ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಇರುವ ಕಾರಣ ಕಡ್ಡಾಯವಾಗಿ ಮಕ್ಕಳು ಶಾಲೆಗೆ ಹಾಜರಾಗುಂತೆ ಹಾಗೆ ಶಿಕ್ಷಕರು ಶಾಲೆಯಲ್ಲಿ ಈ ದಿನ ಆಚರಿಸುವಂತೆ ಸೂಚಿಸಲಾಗಿದೆ.

ಅಕ್ಟೋಬರ್ 8 ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2026ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2025- 2026ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಶಾಲೆಗಳ ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

ರಾಜ್ಯದಲ್ಲಿ ಈ ಬಾರಿ ಅತ್ಯಧಿಕ ಮಳೆಯಾಗಿದೆ. ಹಾಗೆ ಮಳೆಯ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ಅತ್ಯಧಿಕ ರಜೆ ನೀಡಲಾಗಿದೆ. ಕೆಲವು ಕಡೆ ಬರೋಬ್ಬರಿ 10ಕ್ಕೂ ಹೆಚ್ಚು ದಿನ ಮಳೆ ಕಾರಣದಿಂದ ರಜೆ ನೀಡಲಾಗಿದೆ. ಹೀಗಾಗಿ ಶೈಕ್ಷಣಿಕ ವರ್ಷದಲ್ಲಿ ತರಗತಿಗಳು ಕೂಡ ಕಡಿಮೆಯಾಗಿವೆ.

ಅಕ್ಟೋಬರ್‌ನಲ್ಲಿ ಸಾಲು ಸಾಲು ರಜೆಗಳಿವೆ, ಅದ್ರಲ್ಲೂ ವಾಲ್ಮೀಕಿ ಜಯಂತಿ 7ರಂದು ರಜೆ ಇದೆ. ಇದಾದ ಬಳಿಕ ದೀಪಾವಳಿ ಸಂದರ್ಭದಲ್ಲಿ ಅಕ್ಟೋಬರ್ 20 ನರಕ ಚತುರ್ದಶಿ, ಅಕ್ಟೋಬರ್‌ 22 ಕ್ಕೆ ಬಲಿಪಾಡ್ಯ ಸಾರ್ವಜನಿಕ ರಜೆ ಇದೆ. ಅಕ್ಟೋಬರ್‌ನಲ್ಲಿ ಸತತ ರಜೆಗಳಿವೆ.

ಈ ಸುದ್ದಿಯನ್ನೂ ಓದಿ | 31‌ DAYS Movie: ನಿರಂಜನ್ ಶೆಟ್ಟಿ ಅಭಿನಯದ ʼ31‌ DAYSʼ ಚಿತ್ರತಂಡದಿಂದ ಸಕ್ಸಸ್ ಮೀಟ್‌