ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru Power Cut: ನಾಳೆ ಬೆಂಗಳೂರು ನಗರದ ಹಲವೆಡೆ ವಿದ್ಯುತ್‌ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆವಿ ಆರ್.ಬಿ.ಐ, ಮತ್ತು ಆಡುಗೋಡಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜೂನ್‌ 23ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ನಾಳೆ ಬೆಂಗಳೂರು ನಗರದ ಹಲವೆಡೆ ವಿದ್ಯುತ್‌ ವ್ಯತ್ಯಯ

ಸಾಂದರ್ಭಿಕ ಚಿತ್ರ. -

Profile
Siddalinga Swamy Jun 22, 2026 4:53 PM

ಬೆಂಗಳೂರು, ಜೂ.22: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆವಿ ಆರ್.ಬಿ.ಐ, ಮತ್ತು ಆಡುಗೋಡಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜೂನ್‌ 23ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಆರ್.ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ, 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬುಸವಾರಿ ದಿಣ್ಣೆ, ಚುಂಚಗಟ್ಟ, ಬ್ರೀಗೆಡ್ ಮಿಲೇನಿಯಮ್ ಮತ್ತು ಬ್ರೀಗೆಡ್ ಗರ‍್ಡೇನಿಯ ಅಪಾರ್ಟ್‌ಮೆಂಟ್, ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಂ.ಎಫ್‌, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ಫೋರಂ, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾರ್ಡನ್‌, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ಟ್ರೇಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದಾವನ ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾರ್ಡನ್, ಎನ್ ಡಿ ರ್ ಐ, ಪೊಲೀಸ್ ವಸತಿ ಗೃಹಗಳು ಮತ್ತು ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಸಾಫ್ಟ್‌ವೇರ್‌ ಅಳವಡಿಕೆ: 20 ಪಟ್ಟಣಗಳಲ್ಲಿ ಬೆಸ್ಕಾಂ ಆನ್‌ಲೈನ್‌ ಸೇವೆ ಅಲಭ್ಯ

ಬೆಂಗಳೂರು: ಸಮಗ್ರ ವಿದ್ಯುತ್‌ ಅಭಿವೃದ್ದಿ ಯೋಜನೆಯ (ಐಪಿಡಿಎಸ್‌) ಹಂತ-2 ರ ಅಡಿಯಲ್ಲಿ ಬೆಸ್ಕಾಂ ವ್ಯಾಪ್ತಿಯ (BESCOM) ನಗರ ಪ್ರದೇಶದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಐಪಿಡಿಎಸ್‌ ಐಟಿ ಅಪ್ಲಿಕೇಶನ್‌ ಅನ್ನು ಬೆಸ್ಕಾಂ ವ್ಯಾಪ್ತಿಯ 20 ಐಪಿಡಿಎಸ್‌ ಪಟ್ಟಣ ಪ್ರದೇಶಗಳಲ್ಲಿ ಅಳವಡಿಸಿಕೊಳ್ಳಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ವಿವಿಧ ಪಟ್ಟಣ ಪ್ರದೇಶಗಳಲ್ಲಿ ಜೂನ್‌ 30ರವರೆಗೆ ಬೆಸ್ಕಾಂನ ಆನ್‌ಲೈನ್‌ ಸೇವೆಗಳು ಲಭ್ಯ ವಿರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಈ ಬಗ್ಗೆ ಬೆಸ್ಕಾಂ ಪ್ರಕಟಣೆ ಹೊರಡಿಸಿದ್ದು, ಪ್ರಸ್ತುತ ಚಾಲ್ತಿಯಲ್ಲಿರುವ ಟಿಆರ್‌ಎಂ ಸಾಫ್ಟ್‌ವೇರ್‌ ಬದಲಿಗೆ ಐಪಿಡಿಎಸ್‌ ಐಟಿ ಅಪ್ಲಿಕೇಶನ್‌ ಅಳವಡಿಸಿಕೊಳ್ಳುವುದರಿಂದ ದತ್ತಾಂಶ ವರ್ಗಾವಣೆ ಮಾಡುವ ಸಲುವಾಗಿ 21 ದಿನಗಳ ಕಾಲ ಆನ್‌ಲೈನ್‌ ಸೇವೆಗಳಾದ ಹೊಸ ಸಂಪರ್ಕ, ಹೆಸರು ವರ್ಗಾವಣೆ, ಲೋಡ್‌ ಹೆಚ್ಚಳ, ಬಿಲ್‌ ಪಾವತಿ, ಸೇರಿದಂತೆ ಆನ್‌ಲೈನ್‌ ಸೇವೆಗಳು ಸ್ಥಗಿತಗೊಳ್ಳಲಿದೆ. ಗ್ರಾಹಕರು ಥರ್ಡ್‌ ಪಾರ್ಟಿ ಬಿಲ್‌ ಪಾವತಿ ವ್ಯವಸ್ಥೆಗಳಾದ ಗೂಗಲ್‌ ಪೇ, ಫೋನ್‌ ಪೇ ಮೂಲಕ ಬಿಲ್‌ ಪಾವತಿ ಮಾಡಲು ಅವಕಾಶವಿರುತ್ತದೆ ಎಂದು ಮಾಹಿತಿ ನೀಡಿದೆ.

ಆನ್‌ಲೈನ್‌ ಸೇವೆ ಸ್ಥಗಿತಗೊಳ್ಳುವ ಪಟ್ಟಣಗಳು

ಬಾಗೇಪಲ್ಲಿ, ದೇವನಹಳ್ಳಿ, ಗುಡಿಬಂಡೆ, ಮಾಗಡಿ, ಮಾಲೂರು, ನೆಲಮಂಗಲ, ಶ್ರೀನಿವಾಸಪುರ, ವಿಜಯಪುರ, ಚನ್ನಗಿರಿ, ಚಿಕ್ಕನಾಯಕನಹಳ್ಳಿ, ಗುಬ್ಬಿ, ಹೊಳಲ್ಕೆರೆ, ಹೊನ್ನಾಳಿ, ಹೊಸದುರ್ಗ, ಜಗಳೂರು, ಕೊರಟಗೆರೆ, ಮಧುಗಿರಿ, ಮೊಳಕಾಲ್ಮೂರು, ಪಾವಗಡ ಹಾಗೂ ತುರುವೇಕೆರೆ.

ನಾಯಿ-ಬೆಕ್ಕುಗಳಿಗೀಗ ವಿಐಪಿ ಟ್ರೀಟ್‌ಮೆಂಟ್‌, ಸಾಕು ಪ್ರಾಣಿಗಳ ಆರೈಕೆಯಲ್ಲಿ ಬೆಂಗಳೂರಿಗರೇ ನಂಬರ್ 1!

ಐಪಿಡಿಎಸ್‌ ಪಟ್ಟಣ ಪ್ರದೇಶಗಳಿಗೆ ಹೊಸ ಐಟಿ ಅಪ್ಲಿಕೇಶನ್ಅನ್ನು ವಿಸ್ತರಿಸುವ ಸಲುವಾಗಿ ಈ ಪಟ್ಟಣ ಪ್ರದೇಶಗಳ ಉಪ ವಿಭಾಗಗಳಲ್ಲಿ ಸದ್ಯ ಚಾಲ್ತಿಯಲ್ಲಿರುವ ಟಿಆರ್‌ಎಂ ಅಪ್ಲಿಕೇಶನ್‌ ಅನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಲಾಗಿದೆ. ಐಪಿಡಿಎಸ್‌ ಸಾಫ್ಟ್‌ವೇರ್‌ ಅಳವಡಿಕೆ ಹಿನ್ನೆಲೆಯಲ್ಲಿಆನ್‌ಲೈನ್‌ ಸೇವೆ ಅಲಭ್ಯವಿರುವುದರಿಂದ ಈ 20 ಪಟ್ಟಣ ಪ್ರದೇಶಗಳ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಕೋರಿದೆ.