ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆ.16,17 ರಂದು ವಿದ್ಯುತ್‌ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಆಡುಗೋಡಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಸೆ.16 ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆ.16,17 ರಂದು ವಿದ್ಯುತ್‌ ವ್ಯತ್ಯಯ

-

Profile Siddalinga Swamy Sep 15, 2025 5:54 PM

ಬೆಂಗಳೂರು: ಕೆಪಿಟಿಸಿಎಲ್‌ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಆಡುಗೋಡಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಸೆ.16 ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.

ವಿದ್ಯುತ್‌ ವ್ಯತ್ಯಯವಾಗುವ ಪ್ರದೇಶಗಳು

ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಂ.ಎಫ್‌, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡೈರಿ, ಫೋರಾಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾರ್ಡನ್‌, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ಟ್ರೇಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಲಾಲ್ ಜಿ ನಗರ, ಶಾಮಣ್ಣ ಗಾರ್ಡನ್, ಎನ್‌ಡಿಆರ್‌ಐ, ಪೊಲೀಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲ ಪ್ರದೇಶಗಳು.

ಸೆ.17 ರಂದು ವಿದ್ಯುತ್‌ ವ್ಯತ್ಯಯ

66/11 ಕೆವಿ ರಾಜನಕುಂಟೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಸೆ.17ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್‌ ವ್ಯತ್ಯಯವಾಗುವ ಪ್ರದೇಶಗಳು

ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್ಪುರ, ರ‍್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನೂ ಓದಿ | Dasara Shopping Trend 2025: ಮಾರುಕಟ್ಟೆಗೆ ಮರಳಿದ ದಸರಾ ಗೊಂಬೆಗಳು