Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆ.18ರಂದು ಕರೆಂಟ್ ಇರಲ್ಲ
Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಸಾರಕ್ಕಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಸೆ.18ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

-

ಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಸಾರಕ್ಕಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಸೆ.18ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು
ಶಾಕಂಬರಿ ನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಠ, ಜೆ.ಪಿ ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೆ, ಸಲಾರ್‌ಪುರಿಯಾ ಅಪಾರ್ಟ್ಮೆಂಟ್, ನಾಗರ್ಜುನ ಅಪಾರ್ಟ್‌ಮೆಂಟ್ ಪುಟ್ಟೇನಹಳ್ಳಿ, ಜಯನಗರ 8, 5, 7 ನೇ ಬ್ಲಾಕ್, ಐಟಿಐ ಲೇಔಟ್, ಎಸ್‌ಬಿಐ ಕಾಲೋನಿ, ಅರ್.ವಿ. ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು, 24ನೇ ಮೇನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೋನಿ, ಕೆ.ಆರ್. ಲೇಔಟ್, ವೆಂಕಟಾದ್ರಿ ಲೇಔಟ್, ಜಿ.ಪಿ.ನಗರ 5ನೇ ಹಂತ, ಸಾಯಿ ನರ್ಸರಿ ರಸ್ತೆ, ಜಿ.ಪಿ.ನಗರ 6ನೇ ಹಂತ, 15ನೇ ಕ್ರಾಸ್, 16 & 12 ನೇ ಕ್ರಾಸ್, ಆದರ್ಶ ರೆಸಿಡೆನ್ಸಿ ಅಪಾರ್ಟ್ಮೆಂಟ್, ಬನ್ನೇರಘಟ್ಟ ರೋಡ್, ಡಾಲರ್ಸ್ ಲೇಔಟ್, ಕಲ್ಯಾಣಿ ಮ್ಯಾಗ್ನಮ್ ಅಪಾರ್ಟ್ಮೆಂಟ್, ಕಲ್ಯಾಣಿ ಕೃಷ್ಣ ಮ್ಯಾಗ್ನಮ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಸೆ.17 ರಂದು ವಿದ್ಯುತ್ ವ್ಯತ್ಯಯ
66/11 ಕೆವಿ ಕಟ್ಟಿಗೇನಹಳ್ಳಿ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದ ಹಲವೆಡೆ ಸೆ.17ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4.30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ನಾರ್ಥ್ ಗೇಟ್ 1,2,3, ಫಿಲಿಪ್ಸ್ ಕಂಪನಿ, ದ್ವಾರಕಾನಗರ, ಬಾಬಾನಗರ, ಕಟ್ಟಿಗೇನಹಳ್ಳಿ ಸುತ್ತಮುತ್ತ, ಬಾಗಲೂರು ಕ್ರಾಸ್, ಮತ್ತು ಬಾಗಲೂರು ಮುಖ್ಯ ರಸ್ತೆ, ಮಣಿಪಾಲ ಕಾಲೇಜು, BSF, PDMS, ಬಾಗಲೂರು ಕ್ರಾಸ್ ವಿನಾಯಕನಗರ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಸುದ್ದಿಯನ್ನೂ ಓದಿ | Navaratri Saree Trend 2025: ಎಲ್ಲೆಡೆ ಹೆಚ್ಚಾಯ್ತು ನವರಂಗಿನ ಸೀರೆಗಳ ಖರೀದಿ
66/11 ಕೆವಿ ರಾಜನಕುಂಟೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಸೆ.17ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು
ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್ಪುರ, ರ‍್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸುದ್ದಿಯನ್ನೂ ಓದಿ | Navaratri/Dasara Trend 2025: ಫೆಸ್ಟೀವ್ ಸೀಸನ್‌ಗೂ ಮುನ್ನವೇ ಎಂಟ್ರಿ ಕೊಟ್ಟ ನವರಾತ್ರಿ ಟ್ರೆಡಿಷನಲ್ ವೇರ್ಸ್