Bengaluru Power Cut: ಜುಲೈ 24ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ; ವರದಿ ಇಲ್ಲಿದೆ
Bengaluru Power Cut: 66/11 ಕೆವಿ ಯಲಹಂಕ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದ ಹಲವೆಡೆ ಜುಲೈ 24ರಂದು ಬುಧವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ. -
ಬೆಂಗಳೂರು, ಜು.23: 66/11 ಕೆವಿ ಯಲಹಂಕ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದ ಹಲವೆಡೆ ಜುಲೈ 24ರಂದು ಬುಧವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಕೆಎಂಎಫ್, ವೈಎನ್‌ಕೆ ನ್ಯೂ ಟೌನ್ 208, 407, 'ಬಿ' ಸೆಕ್ಟರ್, ಸಿಬಿ ಸಾಂದ್ರ, ಅಲ್ಲಾಳಸಂದ್ರ, ಶಾರದನಗರ, ಜನಪ್ರಿಯ, ಅನ್ರಿಯಾ, ಮಾರುತಿನಗರ, ಕೋಗಿಲು, ಬಿಬಿ ರಸ್ತೆ ಯಲಹಂಕ ಇತ್ಯಾದಿ.ಬಾಗಲೂರು ಕ್ರಾಸ್, ವೆಂಕಟಾಲ್, ನಿಟ್ಟೆ ಕಾಲೇಜು, ಬಿಎಸ್‌ಎಫ್, ಐಎಎಫ್, ಇಂಟರ್‌ನ್ಯಾಶನಲ್ ಸ್ಕೂಲ್, ಕಾಗೆನ್‌ಅಡ್ಯಾನ್‌ಕಾಲೇಜ್, ಕಾಗೆನ್‌ಅಡ್ಯಾನ್‌ಕಾಲೇಜ್, ರಾಯಣ್ಣನ ಶಾಲೆ ಪಾಲನಹಳ್ಳಿ, ದ್ವಾರಖಾನಗರ ಇತ್ಯಾದಿ.ಪೂರ್ವಂಕರ RMZ ಗ್ಯಾಲೇರಿಯಾ ಹಾಗೂ ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
BESCOM: ಗೃಹ ಜ್ಯೋತಿ ಮನೆ-ಮನೆ ಪರಿಶೀಲನೆ ಕಾರ್ಯ: ಜುಲೈ ತಿಂಗಳಿನಲ್ಲಿ ಗ್ರಾಹಕರಿಗೆ ಬೆಸ್ಕಾಂನಿಂದ ಸರಾಸರಿ ಬಿಲ್
ಗೃಹ ಜ್ಯೋತಿ (Gruha Jyothi Scheme) ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯಕ್ಕೆ ಬೆಸ್ಕಾಂ (BESCOM) ಮೀಟರ್ ರೀಡರ್‌ಗಳು ನಿಯೋಜನೆಗೊಂಡಿರುವುದರಿಂದ ಜುಲೈ ತಿಂಗಳ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ, ಗ್ರಾಹಕರಿಗೆ ಸರಾಸರಿ (Average Bills) ಬಿಲ್‌ಗಳನ್ನು ನೀಡಲಾಗುತ್ತದೆ. ಜುಲೈ ತಿಂಗಳ ಬಿಲ್ಲಿಂಗ್ ಅವಧಿಯಲ್ಲಿ ಗ್ರಾಹಕರಿಗೆ ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧಾರದ ಮೇಲೆ ಸರಾಸರಿ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.
ಆದರೆ ಎಚ್‌ಟಿ ಗ್ರಾಹಕರು, 40 HP ಮತ್ತು ಅದಕ್ಕಿಂತ ಹೆಚ್ಚಿನ ಮಂಜೂರಾದ ಲೋಡ್ ಹೊಂದಿರುವ ಲೋ ಟೆನ್ಷನ್ (LT) ಗ್ರಾಹಕರು, ಸೋಲಾರ್ ರೂಫ್ಟಾಪ್ (SRTPV) ಗ್ರಾಹಕರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಗ್ರಾಹಕರಿಗೆ ನೈಜ ಮೀಟರ್ ರೀಡಿಂಗ್ ಆಧಾರದ ಮೇಲೆ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.
Ashada Sale 2026: ಎಲ್ಲೆಡೆ ಆಷಾಢ ಸೇಲ್ ಅಬ್ಬರ; ಸೀರೆ, ಜ್ಯುವೆಲರಿ ಖರೀದಿಗಿದು ಸಕಾಲ
ಜುಲೈ ತಿಂಗಳ ಸರಾಸರಿ ಬಿಲ್‌ಗಳನ್ನು ಗ್ರಾಹಕರಿಗೆ ಎಸ್‌ಎಂಎಸ್ ಮತ್ತು ಇಮೇಲ್ ಮೂಲಕ ಕಳುಹಿಸಲಾಗುವುದು. ಗೃಹ ಬಳಕೆದಾರರಿಗೆ ಆಗಸ್ಟ್ ತಿಂಗಳಿನಿಂದ ಯಥಾಪ್ರಕಾರ ನಿಯಮಿತ ಮೀಟರ್ ರೀಡಿಂಗ್ ಮತ್ತು ನೈಜ ವಿದ್ಯುತ್ ಬಳಕೆಯ ಆಧಾರದಮೇಲೆ ಬಿಲ್ ನೀಡಲಾಗುವುದು. ಸರಾಸರಿ ಬಿಲ್ಲಿಂಗ್ ಅವಧಿಯಲ್ಲಿನ ವ್ಯತ್ಯಾಸದ ಯೂನಿಟ್‌ಗಳನ್ನು, ನೈಜ ಮೀಟರ್ ರೀಡಿಂಗ್ ಆರಂಭವಾದ ನಂತರ ಮುಂದಿನ ಬಿಲ್ಗಳಲ್ಲಿ ಸೂಕ್ತವಾಗಿ ಹೊಂದಾಣಿಕೆ ಮಾಡಲಾಗುವುದು. ಗ್ರಾಹಕರು ಜುಲೈ ಬಿಲ್‌ನ ಪಾವತಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಎಲ್ಲಾ ಪಾವತಿ ವಿಧಾನಗಳನ್ನು(ಉಪ ವಿಭಾಗದ ನಗದು ಕೌಂಟರ್‌ಗಳು, ಬೆಸ್ಕಾಂ ವೆಬ್‌ಸೈಟ್, ಬೆಸ್ಕಾಂ ಮಿತ್ರ ಆಪ್ ಹಾಗೂ ಥರ್ಡ್ ಪಾರ್ಟಿ ಆಪ್) ಬಳಸಿಕೊಳ್ಳಬಹುದು ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.