Bengaluru Power Cut: ಗಮನಿಸಿ; ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್ ಇರಲ್ಲ
BESCOM News: 66/11 ಕೆವಿ ಕುಂಬಳಗೋಡು ಸ್ಟೇಷನ್‌ನಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಡಿ.23ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.
ಸಾಂದರ್ಭಿಕ ಚಿತ್ರ. -
ಬೆಂಗಳೂರು, ಡಿ.23: 66/11 ಕೆವಿ ಕುಂಬಳಗೋಡು ಸ್ಟೇಷನ್‌ನಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಡಿ.23ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು
ಭೀಮನಕುಪ್ಪೆ ವಿಲೇಜ್, ವಿನಾಯಕ ನಗರ, ಫೀಶ್ ಫ್ಯಾಕ್ಟರಿ, ಗೇರುಪಾಳ್ಯ, ಒಂದನೇ ಮೈಲುಕಲ್ಲು, ಡೆಕ್ಕನ್ ಹೆರಾಲ್ಡ್, ಅಂಚೆಪಾಳ್ಯ, ಪ್ರಾವಿಡೆಂಟ್, ಹೊಸಪಾಳ್ಯ, ಕಣ್‌ಮಿಣಿಕೆ, ಕುಂಬಳಗೋಡು ಇಂಡಸ್ಟ್ರೀಯಲ್ ಏರಿಯಾ, ಕಂಬಿಪುರ, ಕಾರುಬೆಲೆ, ತಗಚಗುಪ್ಪೆ, ಗುಡಿಮಾವು, ದೇವಗೆರೆ, ಗಂಗಸಂದ್ರ, ಆನೆಪಾಳ್ಯ, ದೊಡ್ಡಿಪಾಳ್ಯ, ಗೋಣಿಪುರ, ಗೊಲ್ಲಹಳ್ಳಿ, ತಿಟ್ಟೂರು, ಚಿನ್ನಕುರ್ಚಿ, ಅಂಚೆಪಾಳ್ಯ, ಬಾಬಸಾಬ್‌ಪಾಳ್ಯ, ದೊಡ್ಡಬೆಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಗಗನಕ್ಕೇರಿದ ಚಿನ್ನದ ಬೆಲೆ; ಒಂದೇ ದಿನ ಇಷ್ಟೊಂದು ಹೆಚ್ಚಳ!
220/66 ಕೆ.ವಿ ‘ಎ’ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಡಿ.23ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:
ಟಿಸಿಎಸ್, ಹಾಲಿಡೇ ಇನ್, ಶೇಷಾದ್ರಿ ರಸ್ತೆ, ಕುರುಬರ ಸಂಘ ವೃತ್ತ, ಗಾಂಧಿನಗರ 1ನೇ ಮುಖ್ಯ ರಸ್ತೆ, 1ನೇ ಮತ್ತು 2ನೇ ಕ್ರಾಸ್ನ ಭಾಗ, ಕ್ರೆಸೆಂಟ್ ರಸ್ತೆ, ಇಂಧನ ಹಾಗೂ ಗೃಹ ಸಚಿವರ ನಿವಾಸಗಳು, ವೆಸ್ಟ್ ಎಂಡ್ ಹೋಟೆಲ್, ಕರ್ನಾಟಕ ಪವರ್ ಕಾರ್ಪೊರೇಷನ್, ಫರ‍್ಫೀಲ್ಡ್ ಲೇಔಟ್, ಎಲ್ಎಲ್ಆರ್ ಬಿ.ಡಬ್ಲ್ಯು.ಎಸ್.ಎಸ್.ಬಿ, ಶಿವಾನಂದ ಉದ್ಯಾನ, ಶೇಷಾದ್ರಿಪುರಂ, ವಿನಾಯಕ ವೃತ್ತ, ಕುಮಾರ ಪಾರ್ಕ್ ಈಸ್ಟ್, ಕಾವೇರಿ ಭವನ, ಕೆಎಚ್ಬಿ, ಬಿ.ಡಬ್ಲ್ಯು.ಎಸ್.ಎಸ್.ಬಿ, ಕಂದಾಯ ಭವನ, ಗಾಂಧಿನಗರದ ಸಿನೆಮಾ ಚಿತ್ರಮಂದಿರಗಳು, ಟ್ಯಾಂಕ್ ಬಂಡ್ ರಸ್ತೆ, ಎಸ್.ಸಿ. ರಸ್ತೆ, ಕೆ.ಜಿ. ರಸ್ತೆಯ ಭಾಗ, ಆಸ್ಪತ್ರೆ ರಸ್ತೆಯ ಭಾಗ, ಕುಬ್ಬನ್‌ಪೇಟೆ 6ನೇ ಹಾಗೂ 10ನೇ ಕ್ರಾಸ್, ಲೋಡ್ ಡಿಸ್ಪ್ಯಾಚ್ ಸೆಂಟರ್, ಆನಂದ ರಾವ್ ವೃತ್ತದಲ್ಲಿರುವ ಕೆಪಿಟಿಸಿಎಲ್ ಕಚೇರಿಗಳು, ಅವಿನಾಶ್ ಪೆಟ್ರೋಲ್ ಬಂಕ್ ಪ್ರದೇಶ, ವಸಂತನಗರ, ಪಿಡಬ್ಲ್ಯುಡಿ ಕಚೇರಿ ಹಾಗೂ ಪೊಲೀಸ್ ವಸತಿ ಪ್ರದೇಶ, ಬ್ರಿಗೇಡ್ ಪ್ಲಾಜಾ, ಖನಿಜ ಭವನ, ಚಾಲುಕ್ಯ ವೃತ್ತ, ಬಿ.ಡಬ್ಲ್ಯು.ಎಸ್.ಎಸ್.ಬಿ ನೀರು ಪಂಪ್, ಹೈ ಗ್ರೌಂಡ್ಸ್, ಮಾಧವನಗರ, ತುಳಸಿತೋಟ, ಬಿವಿಕೆ ಐಯಂಗಾರ್ ರಸ್ತೆ, ಚಿಕ್ಕಪೇಟೆ, ಮಜೆಸ್ಟಿಕ್, ಕಾಟನ್‌ಪೇಟೆ, ಆರ್.ಟಿ. ರಸ್ತೆ, ಕೆ.ಆರ್. ವೃತ್ತ, ನೃಪತುಂಗ ರಸ್ತೆ, ಬನ್ನಪ್ಪ ಪಾರ್ಕ್, ಸಿ.ಟಿ. ರಸ್ತೆ, ಚೌಲಗಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯುತ್ ಸಮಸ್ಯೆಗಳಿಗೆ 1912 ಅಥವಾ ʼವಾಟ್ಸ್ ಆ್ಯಪ್ʼ ಸಹಾಯವಾಣಿಗೆ ದೂರು ದಾಖಲಿಸಿ: ಬೆಸ್ಕಾಂ
ಬೆಂಗಳೂರು: ರೈತರು ಹಾಗೂ ಸಾರ್ವಜನಿಕರು ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಶೀಘ್ರ ಪರಿಹಾರಕ್ಕೆ ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912 ಹಾಗೂ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ʼವಾಟ್ಸ್ ಆ್ಯಪ್ʼ ಸಹಾಯವಾಣಿ ಸಂಖ್ಯೆಗಳಿಗೆ (BESCOM Helpline) ದೂರು ದಾಖಲಿಸಲು ಬೆಸ್ಕಾಂ (BESCOM) ಮನವಿ ಮಾಡಿದೆ. ರೈತರ ಹೊಲ-ಗದ್ದೆಗಳಲ್ಲಿರುವ ವಿದ್ಯುತ್ ಪರಿವರ್ತಕಗಳು ವಿಫಲತೆ ಹೊಂದಿದಾಗ ಹಾಗೂ ವಿದ್ಯುತ್ ಸಂಬಂಧಿತ ದೂರುಗಳಿದ್ದಲ್ಲಿ ತಕ್ಷಣ 1912 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಲು ಬೆಸ್ಕಾಂ ತಿಳಿಸಿದೆ.
ಒಂದು ವೇಳೆ 1912 ಸಹಾಯವಾಣಿ ಸಂಖ್ಯೆ ಲಭ್ಯವಾಗದಿದ್ದಲ್ಲಿ ರೈತರು ತಮ್ಮ ಜಿಲ್ಲೆಗೆ ಸಂಬಂಧಿಸಿದ ʼವಾಟ್ಸ್ ಆ್ಯಪ್ʼ ಸಹಾಯವಾಣಿ ಸಂಖ್ಯೆಗಳಿಗೆ ದೂರುಗಳನ್ನು ದಾಖಲಿಸಬಹುದಾಗಿದೆ. ಬೆಸ್ಕಾಂನ ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ, ಉತ್ತರ, ಪೂರ್ವ ಹಾಗು ಪಶ್ಚಿಮ ವೃತ್ತಗಳಿಗೆ 4 ವಾಟ್ಸ್ ಆ್ಯಪ್ ಸಹಾಯವಾಣಿ ಸಂಖ್ಯೆಗಳು ಹಾಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ , ಚಿಕ್ಕಬಳ್ಳಾಪುರ ಹಾಗು ಕೋಲಾರ ಜಿಲ್ಲೆಗಳ ಬೆಸ್ಕಾಂ ವೃತ್ತಗಳಿಗೆ ತಲಾ ಒಂದು ʼವಾಟ್ಸ್ ಆ್ಯಪ್ʼ ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ.
ʼವಾಟ್ಸ್ ಆ್ಯಪ್ʼ ಸಹಾಯವಾಣಿ ಸಂಖ್ಯೆಗಳ ವಿವರ
ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ: 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ: 8277884013, ಉತ್ತರ ವೃತ್ತ: 8277884014.
ಕೋಲಾರ ಜಿಲ್ಲೆ: 8277884015, ಚಿಕ್ಕಬಳ್ಳಾಪುರ ಜಿಲ್ಲೆ: 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದುರ್ಗ ಜಿಲ್ಲೆ : 8277884020, ದಾವಣಗರೆ ಜಿಲ್ಲೆ: 8277884021
Star Fashion 2025: ಲೆಹೆಂಗಾಗೆ ಶೂ ಧರಿಸಿ ಸ್ಟೈಲಿಂಗ್ ರೂಲ್ಸ್ ಬ್ರೇಕ್ ಮಾಡಿದ ಕೀರ್ತಿ ಸುರೇಶ್
ವಿದ್ಯುತ್ ಸಮಸ್ಯೆಗಳ ಕುರಿತು ರೈತರು ಹಾಗೂ ಸಾರ್ವಜನಿಕರು ದೂರುಗಳನ್ನು ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912 ಗಾಗಲಿ ಅಥವಾ ಸಂದೇಶಗಳನ್ನು ತಮ್ಮ ಪ್ರದೇಶಕ್ಕೆ ಸಂಬಂಧಿಸಿದ ʼವಾಟ್ಸ್ ಆ್ಯಪ್ʼ ಸಂಖ್ಯೆಗಳಿಗಾಗಲಿ ಕಳುಹಿಸಿದ ಕೂಡಲೇ, 1912 ಸಹಾಯವಾಣಿ ಕೇಂದ್ರದ ಗ್ರಾಹಕ ಸೇವಾ ಪ್ರತಿನಿಧಿಗಳು ದೂರುಗಳನ್ನು ಅಥವಾ ಸಂದೇಶಗಳನ್ನು ಸಂಬಂಧಿಸಿದ ಬೆಸ್ಕಾಂ ಉಪ ವಿಭಾಗಗಳಿಗೆ ರವಾನಿಸಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.