Bengaluru Power Cut: ಜೂನ್ 22ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
Bengaluru Power Cut: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆವಿ ಮತ್ತಿಕೆರೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜೂನ್ 22ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ. -
ಬೆಂಗಳೂರು, ಜೂ.20: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆವಿ ಮತ್ತಿಕೆರೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜೂನ್ 22ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಲೊಟ್ಟೆಗೊಲ್ಲಹಳ್ಳಿ, ಮುನಿಹನುಮಯ್ಯ ಕಾಲೋನಿ, ಆರ್.ಕೆ. ಉದ್ಯಾನ, ಸಂಜೀವಪ್ಪ ಕಾಲೋನಿ, ಎಂಎಲ್ಎ ಲೇಔಟ್, ನೇತಾಜಿ ನಗರ, ಪೈಪ್‌ಲೈನ್ ರಸ್ತೆ, ಮತ್ತಿಕೆರೆ, ಮೋಹನ್ ಕುಮಾರ್ ನಗರ, ಜೆಪಿ ಪಾರ್ಕ್, ಅಕ್ಕಿಯಪ್ಪ ಉದ್ಯಾನ, ಬಿಕೆ ನಗರ, ಎಲ್ಐಸಿ ಕಾಲೋನಿ, ಪಂಪ ನಗರ, ಮತ್ತಿಕೆರೆ, 1ನೇ ಮುಖ್ಯ ರಸ್ತೆ ಯಶವಂತಪುರ, ಎಚ್ಎಂಟಿ ಲೇಔಟ್, ಎಲ್ಸಿಆರ್ ಶಾಲಾ ರಸ್ತೆ, ಗೋಕುಲ 1ನೇ ಹಂತ, ಗುರುಮೂರ್ತಿ ರೆಡ್ಡಿ ಕಾಲೋನಿ, ಕೆಎನ್ ವಿಸ್ತರಣೆ, ಮತ್ತಿಕೆರೆ, ಎಸ್‌ಬಿಎಂ ಕಾಲೋನಿ, ಬೃಂದಾವನ ನಗರ, ಎಚ್ಎಂಟಿ ಮುಖ್ಯ ರಸ್ತೆ, ಎಂರ‍್ಜೆ ಕಾಲೋನಿ, ಸಂಜೀವಪ್ಪ ಕಾಲೋನಿ, 3ನೇ ಮುಖ್ಯ ರಸ್ತೆ, ಮತ್ತಿಕೆರೆ 2ನೇ ಮುಖ್ಯ ರಸ್ತೆಯಿಂದ 10ನೇ ಮುಖ್ಯ ರಸ್ತೆ, ವಿಆರ್ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಜೆಪಿ ಪಾರ್ಕ್, ಎಸ್ಬಿಎಂ ಕಾಲೋನಿ, ಬೃಂದಾವನ ನಗರ, ಎಚ್ಎಂಟಿ ಲೇಔಟ್, ಮತ್ತಿಕೆರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಕೆವಿ ಐಐಎಸ್‌ಸಿ ಉಪಕೇಂದ್ರ ವ್ಯಾಪ್ತಿಯ ವಿವಿಧೆಡೆ ಕರೆಂಟ್ ಇರಲ್ಲ
66/11 ಕೆವಿ ಐಐಎಸ್‌ಸಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜೂನ್ 22ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ ಮತ್ತು ಸುತ್ತಮುತ್ತ ಪ್ರದೇಶಗಳು.
HBR ಲೇಔಟ್ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
66/11KV HBR ಲೇಔಟ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜೂನ್ 22ರಂದು ಸೋಮವಾರ ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: LRP ಕಚೇರಿ, ಜಯಕುಮಾರ್ RMU, ದಿವ್ಯ ಶಾಂತಿ, ಗೋವಿಂದಪುರ, ಕಾರ್ಲೆ, ಬೃಂದಾವನ ನಗರ, ಟೈಟಾನ್ ಗ್ಯಾರೇಜ್, ಗಾಂಧಿನಗರ, ಭೈರವಿ ಅಪಾರ್ಟ್‌ಮೆಂಟ್‌ಗಳು, ಹೆಗ್ಡೆ ನಗರ, ಚಂದ್ರಿಕಾ ಸೋಪ್ ಫ್ಯಾಕ್ಟರಿ, BMTC ಡಿಪೋ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಬೆಂಗಳೂರು ನಗರದ ಹಲವೆಡೆ ವಿದ್ಯುತ್ ಕಡಿತ
66/11 ಕೆವಿ ‘ಬಿ’ ಸ್ಟೇಷನ್- 20 ಎಂವಿಎ ಪವರ್ ಟ್ರಾನ್ಸ್‌ಫಾರ್ಮರ್-01 ರಲ್ಲಿ ತ್ರೈಮಾಸಿಕ ನಿರ್ವಹಣೆಯನ್ನು ಕೈಗೊಳ್ಳಲು KPTCL ನಿಂದ ಲೈನ್ ಕ್ಲಿಯರ್ ಪಡೆದಿರುವುದರಿಂದ ಬೆಂಗಳೂರು ನಗರದ ಹಲವೆಡೆ ಜೂನ್ 22ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಐ.ಎನ್.ಜಿ. ವೈಶ್ಯ ಬ್ಯಾಂಕ್, ನ್ಯೂ ಪ್ರೆಸ್ಟೀಜ್ (ಕಟ್ಟಡ), ಗಂಗಾಧರ್ ಚೆಟ್ಟಿ ರಸ್ತೆ, ಎಂವಿ ಗಾರ್ಡನ್, ಸೇಂಟ್ ಸ್ಟ್ರೀಟ್, ಪಿಎಂ ಸ್ಟ್ರೀಟ್, ನಾಲಾ ರಸ್ತೆ, ಎಂಜಿ ರಸ್ತೆ ಸಾರ್ವಜನಿಕ ಉಪಯುಕ್ತತೆ ಕಟ್ಟಡ, ಜೋಗುಪಾಳ್ಯ ಮುಖ್ಯ ರಸ್ತೆ, ಕೇಂಬ್ರಿಡ್ಜ್ ಲೇಔಟ್, ರೆಸಿಡೆನ್ಸಿ ರಸ್ತೆ, ವಿಶ್ರಾಂತಿ ಗೃಹ ರಸ್ತೆ, ಮ್ಯೂಸಿಯಂ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಹೇಯ್ಸ್ ರಸ್ತೆ, ಕಾನ್ವೆಂಟ್ ರಸ್ತೆ, ಕ್ರೆಸೆಂಟ್ ರಸ್ತೆ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಸಾಯಿಬಾಬಾ ದೇವಾಲಯ ರಸ್ತೆ, ಜೀವಕೇಂದ್ರ ಲೇಔಟ್, ಕೇಂಬ್ರಿಡ್ಜ್ ಲೇಔಟ್, ಗೌತಮ್‌ಪುರ ಆರ್ಟಿಲರಿ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
BESCOM Online Services: ಸಾಫ್ಟ್‌ವೇರ್ ಅಳವಡಿಕೆ: 20 ಪಟ್ಟಣಗಳಲ್ಲಿ ಬೆಸ್ಕಾಂ ಆನ್‌ಲೈನ್ ಸೇವೆ ಅಲಭ್ಯ
ಜೂನ್ 22 ಮತ್ತು 23ರಂದು ವಿದ್ಯುತ್ ವ್ಯತ್ಯಯ
ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ಸೊಲ್ಲದೇವನಹಳ್ಳಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜೂನ್ 22 ಮತ್ತು 23ರಂದು ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 8 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್, ಸಾಸುವೆಘಟ್ಟ, ಬಜ್ಜಪ್ಪ ಲೇಔಟ್, ಶಿವಕುಮಾರಸ್ವಾಮೀಜಿ ಲೇಔಟ್, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ, ಡ್ಯಾನಿಶ್ ಫರ‍್ಮ್, ಕೆಎಂಎಫ್, ಪಶುಸಂಗೋಪನೆ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಕೆರೆಗುಡ್ ಲೈನ್. ಫೀಡರ್, ಹುರುಳಿಚಿಕ್ಕನಹಳ್ಳಿ, ಕೆ.ಟಿ.ಪುರ, ಐಐಎಚ್‌ಆರ್, ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ರಾಜ್ಯ ಮೀನುಗಾರಿಕೆ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಮಧುಗಿರಿವೇಹಳ್ಳಿ, ಹುರುಳಿಚಿಕ್ಕನಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ, ಸಾಸುವೆಘಟ್ಟ ಮತ್ತು ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.