Bengaluru Stampede: ಬೆಂಗಳೂರು ಕಾಲ್ತುಳಿತ ಪ್ರಕರಣ; CIDಗೆ ಕೇಸ್ ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ಆದೇಶ
ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ನಡೆದ ಕಾಲ್ತುಳಿತ (Bengaluru Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ (Government) ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ (RCB) ಮಾರ್ಕೆಟಿಂಗ್ ಹೆಡ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.


ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ನಡೆದ ಕಾಲ್ತುಳಿತ (Bengaluru Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ಮಾರ್ಕೆಟಿಂಗ್ ಹೆಡ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಇದೀಗ ಪ್ರಕರಣದ ಹೆಚ್ಚಿನ ತನಿಖೆಗೆ ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ಒಳಪಡಿಸಿದೆ. ಗುರುವಾರ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್‌ಸಿಬಿಯ ಸಂಭ್ರಮಾಚರಣೆಯ ವೇಳೆ 11 ಮಂದಿ ಸಾವಿಗೀಡಾಗಿರುವ ಪ್ರಕರಣದ ಬಗ್ಗೆ ತೆಗೆದುಕೊಂಡ ನಿರ್ಧಾರಗಳನ್ನು ತಿಳಿಸಿದರು.
ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಮತ್ತೊಂದು ಕಡೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿಕುನ್ಹಾ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ಮಾಡಲಾಗಿದೆ. ಕೆಎಸ್‌ಸಿಎ, ಆರ್‌ಸಿಬಿ, ಡಿಎನ್‌ಎ ಎಂಟರ್‌ಟೈನ್ಮೆಂಟ್‌ನ ಮ್ಯಾನೇಜ್ಮೆಂಟ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ನಾಲ್ವರು ಆಯೋಜಕರನ್ನು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ , ಕಿರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Bengaluru Stampede: ಕಾಲ್ತುಳಿತ ಪ್ರಕರಣ; ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ-ಕೆಎಸ್‌ಸಿಎ
ಘಟನೆಗೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತುಗೊಳಿಸಲಾಗಿದೆ. ಇದಾಗಿ ಕಲವೇ ಗಂಟೆಗಳಲ್ಲಿ ರಾಜ್ಯ ಸರ್ಕಾರ, ಹೊಸ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ನೇಮಕ ಮಾಡಿದೆ. ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರಿಗೆ ನೂತನ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಲಾಗಿದೆ.