ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bhairathi Basavaraj: ಬೈರತಿ ಬಸವರಾಜುಗೆ ಹೃದಯ ಸಮಸ್ಯೆ, ಬೌರಿಂಗ್‌ ಆಸ್ಪತ್ರೆಗೆ ದಾಖಲು

ಗುರುವಾರ ಸಂಜೆ ಬಂಧನಕ್ಕೊಳಗಾಗಿದ್ದ ಬೈರತಿ ಬಸವರಾಜುರನ್ನು ಸಿಐಡಿ ಅಧಿಕಾರಿಗಳು, ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ಜನಪ್ರ ತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ಹಾಜರುಪಡಿಸಿದರು. ಆಗ ಬೌರಿಂಗ್ ಆಸ್ಪತ್ರೆ ವೈದ್ಯರ ವರದಿಯಲ್ಲಿ ಇಸಿಜಿಯಲ್ಲಿ ವ್ಯತ್ಯಾಸ ಉಲ್ಲೇಖವಾಗಿತ್ತು.

ಬೈರತಿ ಬಸವರಾಜುಗೆ ಹೃದಯ ಸಮಸ್ಯೆ, ಬೌರಿಂಗ್‌ ಆಸ್ಪತ್ರೆಗೆ ದಾಖಲು

ಬೈರತಿ ಬಸವರಾಜು -

ಹರೀಶ್‌ ಕೇರ
ಹರೀಶ್‌ ಕೇರ Feb 14, 2026 8:09 AM

ಬೆಂಗಳೂರು, ಫೆ.14 : ಹೃದಯ ಸಮಸ್ಯೆ (Heart problem) ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ನ್ಯಾಯಾಲಯದ ಸೂಚನೆಯಂತೆ ಕೆ. ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜು (Bhairathi Basavaraj: ) ಅವರನ್ನು ಶುಕ್ರವಾರ ನಗರದ ಜಯದೇವ ಹೃದ್ರೋಗ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅವರನ್ನು ಭಾರತಿ ನಗರದ ರೌಡಿ ಶಿವಪ್ರಕಾಶ್ ಆಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (rowdy sheeter biklu shiva murder case) ಸಂಬಂಧಿಸಿ ಬಂಧಿಸಲಾಗಿತ್ತು.

ಗುರುವಾರ ಸಂಜೆ ಬಂಧನಕ್ಕೊಳಗಾಗಿದ್ದ ಬೈರತಿ ಬಸವರಾಜುರನ್ನು ಸಿಐಡಿ ಅಧಿಕಾರಿಗಳು, ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ಜನಪ್ರ ತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ಹಾಜರುಪಡಿಸಿದರು. ಆಗ ಬೌರಿಂಗ್ ಆಸ್ಪತ್ರೆ ವೈದ್ಯರ ವರದಿಯಲ್ಲಿ ಇಸಿಜಿಯಲ್ಲಿ ವ್ಯತ್ಯಾಸ ಉಲ್ಲೇಖವಾಗಿತ್ತು. ಈ ಸಂಗತಿಯನ್ನು ನ್ಯಾಯಾಲಯದ ಗಮನಕ್ಕೆ ತಂದು ಹೆಚ್ಚಿನ ಚಿಕಿತ್ಸೆಗೆ ಶಾಸಕರ ಪರ ವಕೀಲರು ಮನವಿ ಮಾಡಿದರು.

ಈ ಮನವಿ ಪುರಸ್ಕರಿಸಿದ ನ್ಯಾಯಾಲಯ, ಆರೋಪಿ ಬಸವರಾಜು ಅವರಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಿ ಶನಿವಾರ ಗೃಹ ಕಚೇರಿಯಲ್ಲಿ ಹಾಜರುಪಡಿಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಿತು. ಅಂತೆಯೇ ರಾತ್ರಿ 7 ಗಂಟೆಗೆ ಸುಮಾರಿಗೆ ಜಯನಗರದ 9ನೇ ಹಂತದಲ್ಲಿರುವ ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಾಸಕರನ್ನು ಕರೆದೊಯ್ದು ಅಧಿಕಾರಿಗಳು ದಾಖಲಿಸಿದ್ದಾರೆ. ಪ್ರಸುತ್ತ ವೈದ್ಯೋಪಚಾರಕ್ಕೆ ಶಾಸಕರು ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಂದು ಕುರುಬ ಸಮುದಾಯದ ಪ್ರಭಾವಿ ಮುಖಂಡ; ಇಂದು ಕೊಲೆ ಪ್ರಕರಣದ 5ನೇ ಆರೋಪಿ: ಬಿಜೆಪಿ ಶಾಸಕ ಬೈರತಿ ಬಸವರಾಜು ಸಿಕ್ಕಿ ಬಿದ್ದಿದ್ದು ಹೇಗೆ?