ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಬಿಗ್‌ ರಿಲೀಫ್‌; ಬಿಜೆಪಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್

Corruption Rate Card ad case: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ'40% ಕಮಿಷನ್ ಸರ್ಕಾರ' ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ವಿವಾದಾತ್ಮಕ 'ರೇಟ್ ಕಾರ್ಡ್' ಜಾಹೀರಾತು ನೀಡಿದ್ದರಿಂದ ಬಿಜೆಪಿಯಿಂದ ಖಾಸಗಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು.

ರೇಟ್ ಕಾರ್ಡ್ ಜಾಹೀರಾತು ಕೇಸ್‌; ಸಿದ್ದರಾಮಯ್ಯ, ಡಿಕೆಶಿಗೆ ಬಿಗ್‌ ರಿಲೀಫ್‌

-

Prabhakara R
Prabhakara R Nov 4, 2026 4:56 PM

ಬೆಂಗಳೂರು: 'ರೇಟ್ ಕಾರ್ಡ್' ಜಾಹೀರಾತು ಪ್ರಕರಣದಲ್ಲಿ (rate card advertisement case)ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಬಿಜೆಪಿ ದಾಖಲಿಸಿದ್ದ ಖಾಸಗಿ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ'40% ಕಮಿಷನ್ ಸರ್ಕಾರ' ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ 'ರೇಟ್ ಕಾರ್ಡ್' ಜಾಹೀರಾತು ನೀಡಿದ್ದರಿಂದ ಬಿಜೆಪಿಯಿಂದ ಖಾಸಗಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು.

ಖಾಸಗಿ ದೂರು ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ದೂರನ್ನು ರದ್ದುಪಡಿಸಿ ಆದೇಶಿಸಿದೆ. ಈ ಹಿಂದೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ವಿಚಾರಣೆ ನಡೆಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವಂತೆ ಸಮನ್ಸ್‌ ಜಾರಿಗೊಳಿಸಿತ್ತು. ಈ ಸಮನ್ಸ್ ಹಾಗೂ ಖಾಸಗಿ ದೂರಿನ ಸಿಂಧುತ್ವವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್‌ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಿದೆ.

ಕಾಂಗ್ರೆಸ್ ಸರ್ಕಾರದ ವೈಫಲ್ಯಗಳಿಗೆ ಬಡಜನರ ಮೇಲೆ ಮತ್ತೊಂದು ದರ ಏರಿಕೆಯ ಬರೆ: ಬಸ್‌ ಟಿಕೆಟ್‌ ದರ ಏರಿಕೆಗೆ ವಿಜಯೇಂದ್ರ ಕಿಡಿ

ಏನಿದು ಪ್ರಕರಣ?

2023ರ ಚುನಾವಣೆಯ ಮತದಾನಕ್ಕೆ ಕೇವಲ ಒಂದು ದಿನ ಬಾಕಿ ಇರುವಾಗ ಕಾಂಗ್ರೆಸ್ ಪಕ್ಷವು ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ 'ಕರಪ್ಷನ್ ರೇಟ್ ಕಾರ್ಡ್' (Corruption Rate Card) ಹೆಸರಿನಲ್ಲಿ ಜಾಹೀರಾತುಗಳನ್ನು ಪ್ರಕಟಿಸಿತ್ತು. ಈ ಜಾಹೀರಾತುಗಳು ಸಂಪೂರ್ಣವಾಗಿ ಆಧಾರರಹಿತವಾಗಿದ್ದು, ತಮ್ಮ ಪಕ್ಷದ ವರ್ಚಸ್ಸಿಗೆ ಭಾರಿ ಧಕ್ಕೆ ತರುವ ದುರುದ್ದೇಶಪೂರಿತ ಅಪಪ್ರಚಾರವಾಗಿದೆ ಎಂದು ರಾಜ್ಯ ಬಿಜೆಪಿ ಘಟಕ ಆಕ್ಷೇಪಿಸಿತ್ತು. ಬಿಜೆಪಿ ಮುಖಂಡ ಕೇಶವ ಪ್ರಸಾದ್ ಅವರು ಕಾಂಗ್ರೆಸ್‌ನ ಪ್ರಮುಖ ನಾಯಕರ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಾನನಷ್ಟ ಪ್ರಕರಣವನ್ನು ದಾಖಲಿಸಿದ್ದರು. ಪ್ರಸ್ತುತ ಹೈಕೋರ್ಟ್ ನೀಡಿರುವ ಈ ಆದೇಶದಿಂದಾಗಿ ಕಾಂಗ್ರೆಸ್‌ನ ಹಿರಿಯ ನಾಯಕರಿಗೆ ರಿಲೀಫ್‌ ಸಿಕ್ಕಂತಾಗಿದೆ.