ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

KPCC President Oath Ceremony: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಪದಗ್ರಹಣ; ಅಧಿಕಾರ ಹಸ್ತಾಂತರಿಸಿದ ಡಿಕೆಶಿ

ಕೆಪಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಶುಭ ಹಾರೈಸಿರುವ ಸಿಎಂ ಹಾಗೂ ಕೆಪಿಸಿಸಿ ನಿಕಟಪೂರ್ವ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು, ಇಡೀ ಸರ್ಕಾರ ಮತ್ತು ಇಡೀ ಪಕ್ಷ ಹರಿಪ್ರಸಾದ್ ಅವರ ಜೊತೆಯಲ್ಲಿರುತ್ತದೆ. ನಾವೆಲ್ಲರೂ ಒಟ್ಟಾಗಿ ಸಂಕಲ್ಪ ಮಾಡಿ, ಶ್ರಮವಹಿಸಿ ದುಡಿದು 2028ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ ಹಾಗೂ 2029ರಲ್ಲಿ ಶ್ರೀ ರಾಹುಲ್ ಗಾಂಧಿ ಅವರನ್ನು ಈ ದೇಶದ ಹೆಮ್ಮೆಯ ಪ್ರಧಾನಮಂತ್ರಿಯನ್ನಾಗಿ ಮಾಡಲು ನಾವೆಲ್ಲರೂ ಹೆಗಲಿಗೆ ಹೆಗಲು ಕೊಟ್ಟು ಶ್ರಮಿಸೋಣ ಎಂದು ಕರೆ ನೀಡಿದ್ದಾರೆ.

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ

ಬೆಂಗಳೂರಿನಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ ಅಧಿಕಾರ ಸ್ವೀಕಾರ. -

Prabhakara R
Prabhakara R Jun 21, 2026 4:11 PM

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಭಾನುವಾರ ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ಸಿಎಂ ಹಾಗೂ ಕೆಪಿಸಿಸಿ ನಿಕಟಪೂರ್ವ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನೂತನ ಅಧ್ಯಕ್ಷ ಹರಿಪ್ರಸಾದ್‌ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಪದಗ್ರಹಣ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿ ಕಾಂಗ್ರೆಸ್‌ನ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಭಾಗವಹಿಸಿದ್ದರು.

_KPCC President Oath Ceremony

ಈ ಸಮಾವೇಶದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಸಂಕಲ್ಪವನ್ನು ತೊಡಲಾಯಿತು. ರಾಜ್ಯದ ಕಾಂಗ್ರೆಸ್ ಸರ್ಕಾರ ಕಳೆದ 3 ವರ್ಷಗಳಲ್ಲಿ ಗ್ಯಾರಂಟಿ ಯೋಜನೆ ಹಾಗೂ ಜನಪರ ಕಾರ್ಯಕ್ರಮಗಳ ಮೂಲಕ ಉತ್ತಮ ಆಡಳಿತ ನೀಡಿದೆ. ಮುಂದೆಯೂ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡು ಜನಪರ ಜನಕಲ್ಯಾಣ ಯೋಜನೆಗಳನ್ನು ಜಾರಿ ಮಾಡಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪವನ್ನು ಕಾಂಗ್ರೆಸ್ ನಾಯಕರು ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾಡಿದರು.

_KPCC President Oath Ceremony (1)

71 ವರ್ಷದ ಬಿ.ಕೆ. ಹರಿಪ್ರಸಾದ್ ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ನಿಷ್ಠಾವಂತ ನಾಯಕರಲ್ಲಿ ಒಬ್ಬರಾಗಿದ್ದಾರೆ. ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ಅವರು, ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಶಾಶ್ವತ ಆಹ್ವಾನಿತ ಸದಸ್ಯರಾಗಿ ಹಾಗೂ ಹರಿಯಾಣ ರಾಜ್ಯದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು.

_KPCC President Oath Ceremony (3)

ಬಿ.ಕೆ. ಹರಿಪ್ರಸಾದ್ ಅವರ ಪರಿಚಯ

ಬಿ.ಕೆ. ಹರಿಪ್ರಸಾದ್ ಪೂರ್ಣ ಹೆಸರು ಬೈಚನಹಳ್ಳಿ ಕೆಂಪಯ್ಯ ಹರಿಪ್ರಸಾದ್. ಕಾಂಗ್ರೆಸ್‌ನ ಹಿರಿಯ ನಾಯಕರಾದ ಇವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ಪ್ರಮುಖ ಹುದ್ದೆಗಳನ್ನು ನಿರ್ವಹಿಸಿರುವ ಅನುಭವ ಹೊಂದಿದ್ದು, ಪ್ರಸ್ತುತ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದಾರೆ.

ಪಕ್ಷಕ್ಕೆ ದ್ರೋಹ ಬಗೆದವರನ್ನು ಪತ್ತೆ ಮಾಡಲು ಮಂಜುನಾಥನ ಮೊರೆ; ಧರ್ಮಸ್ಥಳದಲ್ಲಿ ಶಾಸಕರಿಂದ ಆಣೆ- ಪ್ರಮಾಣ ಮಾಡಿಸುತ್ತಾ ಬಿಜೆಪಿ?

ಬೆಂಗಳೂರಿನಲ್ಲಿ 1954ರ ಜುಲೈ 29ರಂದು ಜನಿಸಿದ ಹರಿಪ್ರಸಾದ್, ಎನ್‌ಎಸ್‌ಯುಐ (NSUI) ಸಂಘಟನೆಯ ಮೂಲಕ ರಾಜಕೀಯ ಪ್ರವೇಶಿಸಿದರು. 1989-1990ರಲ್ಲಿ ಅಖಿಲ ಭಾರತ ಯುವ ಕಾಂಗ್ರೆಸ್‌ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದರು. 1990, 2004, 2013 ಹಾಗೂ 2014ರಲ್ಲಿ ರಾಜ್ಯಸಭೆ ಸದಸ್ಯರಾಗಿದ್ದರು.