ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bomb threat: ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿಗೆ ಬಾಂಬ್ ಬೆದರಿಕೆ; ಪ್ರಿನ್ಸಿಪಾಲ್‌ನ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಡುವುದಾಗಿ ಸಂದೇಶ

Bomb threat: ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿಗೆ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ಅಪರಿಚಿತ ವ್ಯಕ್ತಿ ಬೆದರಿಕೆ ಸಂದೇಶ ಕಳುಹಿಸಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಸಂಬಂಧ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿಗೆ ಬಾಂಬ್ ಬೆದರಿಕೆ!

Profile Prabhakara R Apr 29, 2025 3:17 PM

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿಗೆ ಬಾಂಬ್‌ ಬೆದರಿಕೆ (Bomb threat) ಸಂದೇಶ ಬಂದಿದ್ದು, ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿಡುವುದಾಗಿ ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ್ದಾನೆ. ಆಚಾರ್ಯ ಕಾಲೇಜಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇ-ಮೇಲ್ ಪರಿಶೀಲನೆ ವೇಳೆ ಬೆದರಿಕೆ ಸಂದೇಶ ಗಮನಕ್ಕೆ ಬಂದಿದ್ದು, ಈ ಸಂಬಂಧ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ | Pahalgam Terrorist Attack: ಪಹಲ್ಗಾಮ್ ದಾಳಿ ಹಿನ್ನೆಲೆ ನಾಳೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರಣಿ ಸಭೆ

ಬೆಂಗಳೂರು-ವಾರಾಣಸಿ ಇಂಡಿಗೋ ವಿಮಾನದಲ್ಲಿ ಬಾಂಬ್ ಇದೆ ಎಂಬ ಹುಸಿ ಬೆದರಿಕೆ ಬಂದ ಎರಡೇ ದಿನಗಳಲ್ಲಿ ಕಾಲೇಜಿಗೆ ಬೆದರಿಕೆ ಬಂದಿದೆ. ವಾರಣಾಸಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇದೆ ಎಂದು ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ಕೆನಡಾದ ಪ್ರಜೆಯೊಬ್ಬರನ್ನು ಬಂಧಿಸಲಾಗಿತ್ತು. ಶನಿವಾರ ರಾತ್ರಿ ಈ ಘಟನೆ ನಡೆದಿತ್ತು. ಕೆನಡಾದ ಪ್ರಜೆ ನಿಶಾಂತ್ ಯೋಹಾಂತನ್ ಎಂಬಾತ ಇದ್ದಕ್ಕಿದ್ದಂತೆ ತಮ್ಮ ಬ್ಯಾಗ್ ಒಳಗೆ ಬಾಂಬ್ ಇದೆ ಎಂದು ಕೂಗಿದ್ದರು. ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್‌ವೇಯಲ್ಲಿದ್ದಾಗ ಕೂಗಿಕೊಂಡಿದ್ದರಿಂದ ಆತಂಕದ ಸನ್ನಿವೇಶ ಸೃಷ್ಟಿಯಾಗಿತ್ತು. ನಂತರ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಿಸಿ ಪ್ರಯಾಣಿಕರ ಲಗೇಜ್‌ಗಳ ಜೊತೆಗೆ ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿತ್ತು. ನಂತರ ಅದು ಹುಸಿ ಬೆದರಿಕೆ ಎಂದು ದೃಢಪಟ್ಟಿತ್ತು.

ನಾನು ಭಾರತವನ್ನು ದ್ವೇಷಿಸುತ್ತೇನೆ; ಮಂಗಳೂರು ವೈದ್ಯೆ ಪೋಸ್ಟ್

ದಕ್ಷಿಣ ಕನ್ನಡ: ಮಂಗಳೂರಿನ ವೈದ್ಯೆ ಅಫೀಫಾ ಫಾತಿಮಾ ಎಂಬಾಕೆ ದೇಶ ವಿರೋಧಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ಆಕೆಯನ್ನು ವಜಾಗೊಳಿಸಿದೆ. ಆಸ್ಪತ್ರೆಯ ಹೆಚ್​ಆರ್ ಆಕೆಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಗಳೂರಿನ ವೈದ್ಯೆಯೊಬ್ಬಳು ದೇಶ ವಿರೋಧಿ ಪೋಸ್ಟ್‌ ಹಾಕಿದ್ದು, (Mangalore Doctor Controversy) ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ಆಕೆ ತನ್ನ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾಳೆ.

ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ವೈದ್ಯೆ ಈ ರೀತಿ ಪೋಸ್ಟ್ ಮಾಡಿರುವುದಕ್ಕೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ವೈದ್ಯೆ ಅಫೀಫ ಫಾತಿಮಾ ಎಂಬಾಕೆ ದೇಶ ವಿರೋಧಿ ಸಂದೇಶ ಪ್ರಕಟಿಸಿದ್ದು, ಸದ್ಯ ಆಕೆಯ ವಿರುದ್ಧ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಹೈಲ್ಯಾಂಡ್ ಆಸ್ಪತ್ರೆ ಹೆಚ್​ಆರ್​ ಮೊಹಮ್ಮದ್ ಅಸ್ಲಾಂ ದೂರು ಆಧರಿಸಿ ಬಿಎನ್​ಎಸ್​​ ಕಲಂ 196(1)(a), 353(2) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಪಹಲ್ಗಾಮ್​ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಆಡಳಿತ ಪಕ್ಷ ಹಾಗೂ ಗುಪ್ತಚರ ಇಲಾಖೆ ಮತ್ತು ಭದ್ರತಾಪಡೆಗಳ ವೈಫಲ್ಯ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ದೇಶದ್ರೋಹ ಕೇಸ್‌ ಹಾಕಲಾಗಿದೆ . ಗಾಯಕಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. 2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ 40 ಸಿಆರ್‌ಪಿಎಫ್ ಸಿಬ್ಬಂದಿ ಸಾವನ್ನಪ್ಪಿದ ನಂತರ, ಪ್ರಧಾನಿ ಮೋದಿ ಈಗ ಬಿಹಾರದಲ್ಲಿ ಪಹಲ್ಗಾಮ್ ದಾಳಿಯ ಹೆಸರಿನಲ್ಲಿ ಮತ ಯಾಚಿಸುತ್ತಾರೆ ಎಂಬ ಪೋಸ್ಟ್‌ನನ್ನು ಹಂಚಿಕೊಂಡಿದ್ದರು.

ಈ ಸುದ್ದಿಯನ್ನೂ ಓದಿ: Taliban foreign minister: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಆದ ಕೆಲವೇ ದಿನಗಳಲ್ಲಿ ತಾಲಿಬಾನ್‌ ವಿದೇಶಾಂಗ ಸಚಿವರನ್ನು ಭೇಟಿಯಾದ ಭಾರತೀಯ ರಾಯಭಾರಿ!

ಪಾಕಿಸ್ತಾನಿ ಪತ್ರಕರ್ತರ ಗುಂಪಿನಿಂದ ನಡೆಸಲ್ಪಡುವ ಎಕ್ಸ್ ಹ್ಯಾಂಡಲ್‌ನಿಂದ ಈ ವಿಡಿಯೋವನ್ನು ಮೊದಲು ಪೋಸ್ಟ್‌ ಮಾಡಲಾಗಿತ್ತು. ಇದೀಗ ನೇಹಾ ಅದನ್ನು ಮರುಪೋಸ್ಟ್‌ ಮಾಡಿದ್ದರು. ದೇಶದ್ರೋಹದ ಆರೋಪದ ಮೇಲೆ ಲಕ್ನೋದ ಹಜರತ್‌ಗಂಜ್‌ನಲ್ಲಿ ನೇಹಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗಾಯಕಿ ಈ ಹಿಂದೆ ಇದೇ ರೀತಿಯ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗಾಗಿ ವಿವಾದಗಳಿಗೆ ಸಿಲುಕಿದ್ದರು. ಉಗ್ರರ ದಾಳಿಯನ್ನು ಸಮರ್ಥಿಸಿಕೊಂಡಿದ್ದ ಅಸ್ಸಾಂ ಶಾಸಕರೊಬ್ಬರನ್ನು ಬಂಧಿಸಲಾಗಿದೆ.