ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

'Burude' fight: ಬಿಜೆಪಿ-ಕಾಂಗ್ರೆಸ್ ನಡುವೆ 'ಬುರುಡೆ' ಜಗಳ

ಧರ್ಮಸ್ಥಳದಲ್ಲಿ ಅಸಹಜ ಸಾವುಗಳ ಆರೋಪ ಪ್ರಕರಣ ಸಂಬಂಧ ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ರಿಟ್ ಅರ್ಜಿಯಲ್ಲಿ ಪ್ರಸ್ತಾಪವಾದ ಹೆಸರುಗಳು ಹಾಗೂ ಕೋಟಿ ಕೋಟಿ ಹಣ ಬಳಕೆಯ ವಿಚಾರ ಸಂಬಂಧ ಸತ್ಯಾಸತ್ಯತೆ ಪರಿಶೀಲಿಸಬೇಕು ಎಂದು ಸರಕಾರ ಹೇಳಿದ್ದರೆ, ಎಸ್‌ಐಟಿ ತನಿಖಾ ವರದಿ ಬಹಿರಂಗಪಡಿಸಲಿ ಎಂದು ಬಿಜೆಪಿ ಪ್ರತಿ ಸವಾಲು ಎಸೆದಿದೆ.

'Burude' fight: ಬಿಜೆಪಿ-ಕಾಂಗ್ರೆಸ್ ನಡುವೆ 'ಬುರುಡೆ' ಜಗಳ

-

Profile
Ashok Nayak Jun 13, 2026 10:07 AM

ಸತ್ಯಾಸತ್ಯತೆ ಪರಿಶೀಲಿಸಿ ಕ್ರಮ: ಪ್ರಿಯಾಂಕ್

ಎಸ್‌ಐಟಿ ವರದಿ ಬಹಿರಂಗಪಡಿಸಿ: ಬಿಜೆಪಿ

ಬೆಂಗಳೂರು: ಧರ್ಮಸ್ಥಳದಲ್ಲಿ ಅಸಹಜ ಸಾವುಗಳ ಆರೋಪ ಪ್ರಕರಣ ಸಂಬಂಧ ಹೈಕೋ ರ್ಟ್‌ಗೆ ಸಲ್ಲಿಕೆಯಾಗಿರುವ ರಿಟ್ ಅರ್ಜಿಯಲ್ಲಿ ಪ್ರಸ್ತಾಪವಾದ ಹೆಸರುಗಳು ಹಾಗೂ ಕೋಟಿ ಕೋಟಿ ಹಣ ಬಳಕೆಯ ವಿಚಾರ ಸಂಬಂಧ ಸತ್ಯಾಸತ್ಯತೆ ಪರಿಶೀಲಿಸಬೇಕು ಎಂದು ಸರಕಾರ ಹೇಳಿದ್ದರೆ, ಎಸ್‌ಐಟಿ ತನಿಖಾ ವರದಿ ಬಹಿರಂಗಪಡಿಸಲಿ ಎಂದು ಬಿಜೆಪಿ ಪ್ರತಿ ಸವಾಲು ಎಸೆದಿದೆ.

ಪ್ರಕರಣದ ಪ್ರಮುಖ ಆರೋಪಿಯಾದ ಚಿನ್ನಯ್ಯ ಹೈಕೋರ್ಟ್‌ಗೆ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿರುವುದು ಕುತೂಹಲ ಕೆರಳಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಚಿನ್ನಯ್ಯ ಮಾಡಿರುವ ಆರೋಪಗಳು ಮತ್ತು ಆತನ ಹೇಳಿಕೆಯ ಸತ್ಯಾಸತ್ಯತೆ ಪರಿಶೀಲಿಸಬೇಕಿದೆ. ಆತ ಎಷ್ಟು ಸತ್ಯ ಹೇಳುತ್ತಿದ್ದಾನೆ ಅಥವಾ ಎಷ್ಟು ಸುಳ್ಳು ಹೇಳುತ್ತಿದ್ದಾನೆ ಎಂಬುದು ನಮಗೆ ಗೊತ್ತಿಲ್ಲ. ಕಾನೂನುಬದ್ಧವಾಗಿಯೇ ತನಿಖೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Burude Gang: ನೋಟಿಸ್‌ʼಗೆ ಮುನ್ನವೇ ‌ʼಆರೋಪʼ ಹೊತ್ತುಕೊಂಡ ಬುರುಡೆ ಗ್ಯಾಂಗ್

ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಮತ್ತು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ಮಾಹಿತಿ ಪ್ರಕಾರ ಸುಮಾರು 200 ಕೋಟಿ ರು. ಷಡ್ಯಂತ್ರದ ಆರೋಪ ಕೇಳಿಬಂದಿದೆ. ಈ ಬಗ್ಗೆ ನಿಖರತೆ ಇಲ್ಲಎಂದು ಪ್ರಿಯಾಂಕ್ ಹೇಳಿದರು.

ಎಸ್‌ಐಟಿಗೆ ಕೋರ್ಟ್ ಪ್ರಶ್ನೆ: ಪ್ರಕರಣದ ಸದ್ಯದ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ವಿಶೇಷ ತನಿಖಾ ದಳಕ್ಕೆ ನ್ಯಾಯಾಲಯವು ಕೆಲವು ಪ್ರಮುಖ ಪ್ರಶ್ನೆಗಳನ್ನು ಕೇಳಿದೆ. ಎಸ್‌ಐಟಿ ಮುಖ್ಯಸ್ಥರು ಆ ಎಲ್ಲಾ ಪ್ರಶ್ನೆಗಳಿಗೆ ನೇರವಾಗಿ ನ್ಯಾಯಾಲಯಕ್ಕೇ ಉತ್ತರ ನೀಡಲಿzರೆ. ಇದು ಅತ್ಯಂತ ಸೂಕ್ಷ್ಮಹಾಗೂ ಕಾನೂನು ಪ್ರಕ್ರಿಯೆ ಆಗಿರುವುದ ರಿಂದ ಇದನ್ನು ನಾವು ಸಾರ್ವಜನಿಕವಾಗಿ ಚರ್ಚೆ ಮಾಡಲು ಸಾಧ್ಯವಿಲ್ಲ. ನ್ಯಾಯಾಲಯಕ್ಕೆ ಅಧಿಕೃತವಾಗಿ ಉತ್ತರ ಸಲ್ಲಿಕೆಯಾದ ಬಳಿಕವೇ ಸರಕಾರ ಮತ್ತು ತನಿಖಾ ಸಂಸ್ಥೆ ಈ ಬಗ್ಗೆ ಮುಂದಿನ ಮಾಹಿತಿ ನೀಡಲಿದೆ ಎಂದು ತಿಳಿಸಿದರು.

ಹೆಸರು ಪ್ರಸ್ತಾಪವಾದ ತಕ್ಷಣ ಕ್ರಿಮಿನಲ್‌ಗಳಲ್ಲ: ನಟ ಪ್ರಕಾಶ್ ರಾಜ್ ಹೆಸರು ಕೇಳಿ ಬರುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈಗ ಆರೋಪ ಮಾಡುತ್ತಿರುವ ವ್ಯಕ್ತಿ (ಚಿನ್ನಯ್ಯ), ಈ ಹಿಂದೆ ಮತ್ತು ಈಗ ಬೇರೆ ಬೇರೆ ಹೇಳಿಕೆ ನೀಡುತ್ತಾ ಬಂದಿzನೆ. ಹೀಗಾಗಿ ಆತನ ಹಿಂದಿನ ಹಾಗೂ ಈಗಿನ ಹೇಳಿಕೆ ಗಳಲ್ಲಿ ಎಷ್ಟು ಸತ್ಯಾಂಶವಿದೆ ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಕೇವಲ ಒಂದು ಅರ್ಜಿಯಲ್ಲಿ ಯಾರದ್ದೇ ಹೆಸರು ಪ್ರಸ್ತಾಪವಾಯಿತು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ತನ್ನ ಪಾತ್ರ ಸುಳ್ಳು, ನಂಬಬೇಡಿ: ಪ್ರಕಾಶ್‌ರಾಜ್

ಇನ್ನು ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರು ಪ್ರಸಾರವಾಗುತ್ತಿದ್ದಂತೆ ಖ್ಯಾತ ನಟ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿ, ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಗಾಳಿ ಸುದ್ದಿಗಳನ್ನು ನಂಬಬೇಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲ ಪೋಸ್ಟ್ ಮಾಡಿರುವ ಅವರು, ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳ ಪ್ರಕರಣ ಕುರಿತಂತೆ ನನ್ನ ಬಗ್ಗೆ ಕೆಲವು ಸುದ್ದಿ ಚರ್ಚಿಸಲ್ಪಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಅತಿ ಸೂಕ್ಷ್ಮವಾದ ಮತ್ತು ಕೋಟ್ಯಂತರ ಭಕ್ತರ ನಂಬಿಕೆಗೆ ಧಕ್ಕೆ ತಂದಿರುವ ಪ್ರಕರಣವಾಗಿದೆ. ಆದ್ದರಿಂದ, ಈ ರೀತಿಯ ಅನುಮಾನಗಳಿಗೆ ಉತ್ತರಿಸಬೇಕಾಗಿರುವುದು ನನ್ನ ಕರ್ತವ್ಯವೂ ಆಗಿದೆ. ನಾನು ಸದ್ಯ ದೂರದೂರಿನಲ್ಲಿದ್ದೇನೆ. ಇನ್ನೆರಡು ದಿನಗಳಲ್ಲ ನಾನೇ ಸ್ವತಃ ಬಂದು ಮಾಧ್ಯಮ ಮಿತ್ರರ ಮೂಲಕ ಉತ್ತರಿಸುತ್ತೇನೆ. ಅಲ್ಲಿಯವರೆಗೆ ಗಾಳಿ ಮಾತುಗಳನ್ನು ಮತ್ತು ಕೆಲವು ದುರುಳರು ಈ ಸುದ್ದಿಗೆ ಕಟ್ಟಲೆತ್ನಿಸುತ್ತಿರುವ ರೆಕ್ಕೆಪುಕ್ಕಗಳನ್ನು ನಂಬದಿರಿ ಎಂದಿದ್ದಾರೆ.

ಎಸ್‌ಐಟಿ ವರದಿ ಬಿಡುಗಡೆಗೆ ಯಾಕೆ ತಡ?: ಸುನೀಲ್ ಕುಮಾರ್ ಕಿಡಿ

ಧರ್ಮಸ್ಥಳ ಪ್ರಕರಣದ ತನಿಖೆಗೆ ರಚಿಸಲಾಗಿರುವ ಎಸ್‌ಐಟಿಯ ವರದಿಯನ್ನು ಸರಕಾರ ತಕ್ಷಣ ಬಹಿರಂಗ ಮಾಡಬೇಕು ಎಂದು ಶಾಸಕ ವಿ.ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಸ್‌ಐಟಿ ರಚನೆ ಆಗಿ ಇಷ್ಟು ತಿಂಗಳು ಕಳೆದರೂ ವರದಿ ಬಹಿರಂಗ ಮಾಡಿಲ್ಲ. ಈ ಪ್ರಕರಣದ ಹಿಂದೆ ಯಾರ ಕೈವಾಡ ಇದೆಎಂದು ಸರಕಾರ ತಿಳಿಸಲಿ. ಹಿಂದೂ ಧಾರ್ಮಿಕ ಕ್ಷೇತ್ರ ಧರ್ಮಸ್ಥಳವನ್ನು ವಿನಾಕಾರಣ ಅವಹೇಳನ ಮಾಡಲಾಗು ತ್ತಿದೆ. ದೊಡ್ಡ ಷಡ್ಯಂತ್ರ ರೂಪಿಸಿದ್ದ ಗ್ಯಾಂಗಿನ ಆರೋಪಿ ಕೋರ್ಟ್‌ಗೆ ನೀಡಿರುವ ಹೇಳಿಕೆ ಆಘಾತ ಕಾರಿಯಾಗಿದೆ. ಪ್ರಕರಣದ ಬಗ್ಗೆ ವಿಧಾನಸಭೆ ಹಾಗೂ ಪಕ್ಷದ ವತಿಯಿಂದ ಬೇರೆ ಬೇರೆ ಸಂದರ್ಭ ದಲ್ಲಿ ಉಲ್ಲೇಖ ಮಾಡಿದ್ದೆವು. ಇದರ ಹಿಂದೆ ಕೇರಳದ ನಂಟಿದೆ, ಬೇರೆ ಬೇರೆ ರಾಜ್ಯಗಳ ನಂಟಿದೆ ಎಂದು ಹೇಳಿದ್ದೆವು ಎಂದರು. ಆರೋಪಿ ಎಸ್‌ಐಟಿ ಮುಂದೆ ಹೇಳಲಾಗದ್ದನ್ನು ನ್ಯಾಯಾ ಲಯದ ಮುಂದೆ ಹೇಳಿದ್ದಾನೆಂದರೆ ಎಸ್ಐಟಿ ಯಾವ ರೀತಿಯ ತನಿಖೆ ಮಾಡಿತ್ತು? ಎಂದು ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.

image

ಪ್ರಕರಣದಲ್ಲಿ ನೂರಾರು ಕೋಟಿ ತೊಡಗಿಸಿಕೊಂಡ ಕಾರಣ ವಿದೇಶಿ ಶಕ್ತಿಗಳ ಕೈವಾಡದ ತನಿಖೆಯೂ ಆಗಬೇಕಿದೆ. ಕಾಂಗ್ರೆಸ್ ಸರಕಾರವು ಇಂಥ ಷಡ್ಯಂತ್ರಗಳಿಗೆ ಶಕ್ತಿ ತುಂಬುವ ಕೆಲಸ ಮಾಡಿರುವುದು ನೋವು ತಂದಿದೆ. ಯಾರ್ಯಾರು ಇದರ ಹಿಂದಿದ್ದರು? ಅಂದಿನ ಸಿಎಂ ಯಾಕೆ ಕಣ್ಮುಚ್ಚಿ ಎಸ್‌ಐಟಿಗೆ ಕೊಟ್ಟರು? ಸತ್ಯಾಸತ್ಯತೆ ಹೊರಕ್ಕೆ ಬರಬೇಕು.

-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ