ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದೇವರ ದಯೆಯಿಂದ ನನ್ನ‌ ಆರೋಗ್ಯ ಈಗ ಸ್ಥಿರವಾಗಿದೆ: ಡಿಸಿಎಂ ಪರಮೇಶ್ವರ್‌

DCM G Parameshwar: ಬೆಂಗಳೂರಿನ ವಸಂತನಗರದ ಬ್ಯಾಡ್ಮಿಂಟನ್ ಅಸೋಸಿಯೇಷನ್​​​ನಲ್ಲಿ ಆಯೋಜಿಸಲಾಗಿದ್ದ ಇಂಡಿಯಾ ಇಂಟರ್​​ನ್ಯಾಷನಲ್​​ ಚಾಲೆಂಜ್ ಉದ್ಘಾಟನಾ ಸಮಾರಂಭದಲ್ಲಿ ಮಂಗಳವಾರ ಮಧ್ಯಾಹ್ನ ಭಾಗಿಯಾಗಿದ್ದ ವೇಳೆ ಡಿಸಿಎಂ ಪರಮೇಶ್ವರ್​ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಕೂಡಲೇ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ದೇವರ ದಯೆಯಿಂದ ನನ್ನ‌ ಆರೋಗ್ಯ ಸ್ಥಿರವಾಗಿದೆ: ಡಿಸಿಎಂ ಪರಮೇಶ್ವರ್‌

-

Prabhakara R
Prabhakara R Oct 27, 2026 7:04 PM

ಬೆಂಗಳೂರು: ಡಿಸಿಎಂ ಡಾ. ಜಿ. ಪರಮೇಶ್ವರ್ (DCM G. Parameshwara) ಆರೋಗ್ಯದಲ್ಲಿ ಏರುಪೇರಾಗಿದ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾಹ್ನ ಅವರು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ.

ಈ ಬಗ್ಗೆ ಪರಮೇಶ್ವರ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನವರು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ವೇಳೆ ಹೃದಯಬಡಿತ ತುಸು ಹೆಚ್ಚಾದ ಕಾರಣ ತಕ್ಷಣವೇ ಆಸ್ಪತ್ರೆಗೆ ತೆರಳಿ‌ ಅಗತ್ಯ ಚಿಕಿತ್ಸೆ ಪಡೆದಿದ್ದೇನೆ.

ನನ್ನ ಮೇಲಿನ ಕಾಳಜಿಯಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೇರಿದಂತೆ ಬಹಳಷ್ಟು ಮಂದಿ‌ ಹಿತೈಷಿಗಳು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಇನ್ನು ಹಲವರು ದೂರವಾಣಿ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ. ತಮ್ಮೆಲ್ಲರ ಪ್ರೀತಿ - ಕಾಳಜಿಗೆ ಧನ್ಯವಾದಗಳು.

ಯಾರೂ ಆತಂಕ ಪಡುವ ಅಗತ್ಯವಿಲ್ಲ. ದೇವರ ದಯೆಯಿಂದ ನನ್ನ‌ ಆರೋಗ್ಯವೀಗ ಸ್ಥಿರವಾಗಿದೆ. ಆಸ್ಪತ್ರೆಯಲ್ಲಿರುವ ಇತರೆ ರೋಗಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ನನ್ನನ್ನು ಭೇಟಿ ಮಾಡಲು ದಯವಿಟ್ಟು ಆಸ್ಪತ್ರೆ ಬಳಿ ಬರಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ಡಿಸಿಎಂ ತಿಳಿಸಿದ್ದಾರೆ.



ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ವೈದೇಹಿ ಆಸ್ಪತ್ರೆಗೆ ಪುತ್ರ, ಸಚಿವ ಯತೀಂದ್ರ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯ ವಿಚಾರಿಸಿದ್ದಾರೆ. ನಂತರ ಮಾತನಾಡಿದ ಸಿದ್ದರಾಮಯ್ಯ ಅವರು, ಪರಮೇಶ್ವರ್ ಚೆನ್ನಾಗಿದ್ದಾರೆ, ಹಾರ್ಟ್‌ಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ. ನಾನು ಒಂದು ಎರಡು ದಿನ ರೆಸ್ಟ್ ಮಾಡಪ್ಪ ಎಂದಿದ್ದೇನೆ ಎಂದು ಹೇಳಿದರು.

ಪರಮೇಶ್ವರ್ ಅವರ ಆರೋಗ್ಯ ಸ್ಥಿರವಾಗಿದೆ. ಪಲ್ಸ್ ರೇಟ್ ಜಾಸ್ತಿಯಾಗಿತ್ತು ಅಂತ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಎಲ್ಲಾ ನಾರ್ಮಲ್ ಆಗಿದೆ. ಪರಮೇಶ್ವರ್ ಹಾರ್ಟ್‌ಗೇನೂ ತೊಂದರೆ ಇಲ್ಲ, ಅವರು ಇವತ್ತು ಸಂಜೆ ಡಿಸ್ಚಾರ್ಜ್ ಆಗೋಕೆ ಸಿದ್ಧರಿದ್ದರು. ಆದರೆ ನಾನು ಇವತ್ತು ಒಂದು ದಿನ ಇರಿಸಿಕೊಳ್ಳಿ ಎಂದು ವೈದ್ಯರಿಗೆ ಹೇಳಿದ್ದೇನೆ ಎಂದು ತಿಳಿಸಿದರು.