ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ; ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ!
CCB raids Parappana Agrahara Jail: ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ 10ಕ್ಕೂ ಹೆಚ್ಚು ಮೊಬೈಲ್ಗಳು ಪತ್ತೆಯಾಗಿವೆ. 90ಕ್ಕೂ ಹೆಚ್ಚು ಸಿಸಿಬಿ ಪೊಲೀಸರು ಪ್ರತಿ ಬ್ಯಾರಕ್‌ನಲ್ಲಿ ಪರಿಶೀಲನೆ ನಡೆಸಿದ್ದಾರೆ. ರೌಡಿಗಳು ಹೊರಗಿನ ರೌಡಿಗಳ ಜೊತೆ ಸಂಪರ್ಕದಲ್ಲಿರುವ ಮಾಹಿತಿ ಮತ್ತು ಜೈಲಿನಲ್ಲಿ ಅಕ್ರಮ ಚಟುವಟಿಕೆಗಳ ಆರೋಪ ಹಿನ್ನೆಲೆ ಸಿಸಿಬಿ ದಾಳಿ ನಡೆಸಿತ್ತು. ಪರಿಶೀಲನೆವೇಳೆ ಜೈಲಿನಲ್ಲಿ ಪತ್ತೆಯಾದ 10ಕ್ಕೂ ಹೆಚ್ಚು ಮೊಬೈಲ್ ಫೋನ್ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಸಂಗ್ರಹ ಚಿತ್ರ -
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ 10ಕ್ಕೂ ಹೆಚ್ಚು ಮೊಬೈಲ್ಗಳು ಪತ್ತೆಯಾಗಿವೆ. 90ಕ್ಕೂ (CCB raids Parappana Agrahara Jail) ಹೆಚ್ಚು ಸಿಸಿಬಿ ಪೊಲೀಸರು ಪ್ರತಿ ಬ್ಯಾರಕ್‌ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಬ್ಯಾಕರ್‌ನಲ್ಲಿಯೂ ಮೊಬೈಲ್ ಫೋನ್ ಪತ್ತೆಯಾಗಿದೆ.
ರೌಡಿಗಳು ಹೊರಗಿನ ರೌಡಿಗಳ ಜೊತೆ ಸಂಪರ್ಕದಲ್ಲಿರುವ ಮಾಹಿತಿ ಮತ್ತು ಜೈಲಿನಲ್ಲಿ ಅಕ್ರಮ ಚಟುವಟಿಕೆಗಳ ಆರೋಪ ಹಿನ್ನೆಲೆ ಸಿಸಿಬಿ ದಾಳಿ ನಡೆಸಿತ್ತು. ಪರಿಶೀಲನೆವೇಳೆ ಜೈಲಿನಲ್ಲಿ ಪತ್ತೆಯಾದ 10ಕ್ಕೂ ಹೆಚ್ಚು ಮೊಬೈಲ್ ಫೋನ್ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅತ್ಯಾಚಾರ ಪ್ರಕರಣದ ಸಜಾ ಕೈದಿಯಾಗಿ ಪ್ರತ್ಯೇಕ ಬ್ಯಾರಕ್‌ನಲ್ಲಿರುವ ವಿಐಪಿ ಸಜಾ ಕೈದಿ ಪ್ರಜ್ವಲ್ ರೇವಣ್ಣ ಬಳಿ ಆ್ಯಂಡ್ರಾಯ್ಡ್ ಫೋನ್ ಹೇಗೆ ಬಂತು? ಎಷ್ಟು ದಿನಗಳಿಂದ ಬಳಕೆ ಮಾಡುತ್ತಿದ್ದರು, ಪ್ರಜ್ವಲ್‌ಗೆ ಮೊಬೈಲ್ ತಂದು ಕೊಟ್ಟವರು ಯಾರು ಎಂಬುದರ ಬಗ್ಗೆ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
ಇನ್ನು ನಟ ದರ್ಶನ್ ಸೇರಿದಂತೆ ಹಲವು ಪ್ರಮುಖ ರೌಡಿಗಳು ಹಾಗೂ ವಿಐಪಿ ಕೈದಿಗಳ ಬ್ಯಾರಕ್‌ನಲ್ಲಿಯೂ ಶೋಧ ನಡೆಸಲಾಗಿದ್ದು, ಮೊಬೈಲ್ ಸೇರಿ ಯಾವುದೇ ವಸ್ತು ಆಸಿಗಲಿಲ್ಲ ಎಂದು ತಿಳಿದು ಬಂದಿದೆ. ಜೈಲಿನಲ್ಲಿ ನಿಷೇಧಿತ ವಸ್ತುಗಳ ಸಾಗಣೆ ವಿರುದ್ಧ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದರೂ ಪ್ರತಿರೋಧ ಎಂಬಂತೆ ವಾಮಮಾರ್ಗದಲ್ಲಿ ಕಾರಾಗೃಹದಲ್ಲಿ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳ ಪತ್ತೆಯಾಗುತ್ತಿದೆ.
ಬೆಳಗಾವಿ ಜೈಲಿನಿಂದ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್; ಸನ್ಮಾನ ಮಾಡಲು ಹೋದವರು ವಶಕ್ಕೆ!
ಈ ಹಿಂದೆಯೂ ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುವ ಮೂಲಕ ಸುದ್ದಿಯಲ್ಲಿತ್ತು. ಬೃಹತ್ ಕಾರ್ಯಾಚರಣೆ ವೇಳೆ ಕೈದಿಗಳ ಬಳಿ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾರ್ಜರ್‌ಗಳು, ಇಯರ್‌ಫೋನ್‌ಗಳು, ವಿವಿಧ ಬಗೆಯ ಶೂಗಳು, ದಿಂಬುಗಳು, ಪಾತ್ರೆಗಳು, ಅಡುಗೆ ಸಾಮಗ್ರಿಗಳು ಮತ್ತು ಚೇರ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಸುಮಾರು ಎರಡು ಟ್ರ್ಯಾಕ್ಟರ್ ಲೋಡ್‌ನಷ್ಟು ವಸ್ತುಗಳನ್ನು ಜಪ್ತಿ ಮಾಡಲಾಗಿತ್ತು. ಆದ ಡಿಜಿಪಿ ಅಲೋಕ್ ಕುಮಾರ್ ಅವರು ಜೈಲಿನ ಮೂವರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದರು.