ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮಾಜಿ ಸಿಎಂ ಸಿದ್ದರಾಮಯ್ಯಗೆ 79 ನೇ ಜನ್ಮ ದಿನದ ಸಂಭ್ರಮ; ಗಣ್ಯರಿಂದ ಶುಭಾಶಯ

Siddaramaiah Birthday: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು 79 ನೇ ಜನ್ಮದಿನದ ಸಂಭ್ರಮ. ಸಿದ್ದರಾಮಯ್ಯ ಅವರ ಹುಟ್ಟು ಹಬ್ಬಕ್ಕೆ ಅಭಿಮಾನಿಗಳು ರಾಜಕೀಯ ನಾಯಕರು ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ. ಆಗಸ್ಟ್ 3 ರಂದು 1948 ರಂದು ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿ ಗ್ರಾಮದಲ್ಲಿ ಜನಿಸಿದ ಸಿದ್ದರಾಮಯ್ಯ ಶಾರದಾ ವಿಲಾಸ ಕಾನೂನು ಕಾಲೇಜಿನಿಂದ 1972 ರಲ್ಲಿ ಕಾನೂನು ಪದವಿಯನ್ನು ಪಡೆದುಕೊಂಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯಗೆ 79 ನೇ ಜನ್ಮ ದಿನದ ಸಂಭ್ರಮ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Aug 3, 2026 10:10 AM

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು 79 ನೇ ಜನ್ಮದಿನದ ಸಂಭ್ರಮ. ಸಿದ್ದರಾಮಯ್ಯ ಅವರ ಹುಟ್ಟು ಹಬ್ಬಕ್ಕೆ ಅಭಿಮಾನಿಗಳು (Siddaramaiah Birthday) ರಾಜಕೀಯ ನಾಯಕರು ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ. ಆಗಸ್ಟ್ 3 ರಂದು 1948 ರಂದು ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿ ಗ್ರಾಮದಲ್ಲಿ ಜನಿಸಿದ ಸಿದ್ದರಾಮಯ್ಯ ಶಾರದಾ ವಿಲಾಸ ಕಾನೂನು ಕಾಲೇಜಿನಿಂದ 1972 ರಲ್ಲಿ ಕಾನೂನು ಪದವಿಯನ್ನು ಪಡೆದುಕೊಂಡಿದ್ದಾರೆ. ವಕೀಲ ವೃತ್ತಿಯಲ್ಲಿದ್ದರೂ ಇವರನ್ನು ಸೆಳೆದಿದ್ದು ಮಾತ್ರ ರಾಜಕೀಯ.

ಸಮಾಜವಾದಿ ಚಿಂತಕ ಡಾ. ರಾಮ್ ಮನೋಹರ್ ಲೋಹಿಯಾ ಅವರ ಸಿದ್ಧಾಂತಗಳಿಂದ ಪ್ರೇರಿತರಾಗಿ, ವಕೀಲಿ ವೃತ್ತಿ ಬಿಟ್ಟು ರೈತ ಚಳವಳಿಗಳ ಮೂಲಕ ಸಾರ್ವಜನಿಕ ಜೀವನಕ್ಕೆ ಬಂದರು. 1978 ರಲ್ಲಿ ಮೈಸೂರು ತಾಲೂಕು ಅಭಿವೃದ್ಧಿ ಮಂಡಳಿ ಸದಸ್ಯರಾಗಿ ಮೊದಲ ಬಾರಿಗೆ ಆಯ್ಕೆಯಾದರು. 1983 ರಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಭಾರತೀಯ ಲೋಕದಳ ಟಿಕೆಟ್‌ನಿಂದ ಸ್ಪರ್ಧಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು. 2008 ರಿಂದ 2013 ರವರೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದರು.

2013 ರ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದಾಗ ರಾಜ್ಯದ 16 ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಎರಡನೇ ಬಾರಿಗೆ 2023 ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಗೆದ್ದು, ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದಂತೆ ಎರಡನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಸುಮಾರು 12 ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಿ 9 ಬಾರಿ ಜಯಗಳಿಸಿರುವ ಸಿದ್ದರಾಮಯ್ಯ ಅವರು, ಮೇ 28, 2026 ರಂದು ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

8 ವರ್ಷಗಳ ವರ್ಷಗಳಿಗೂ ಹೆಚ್ಚು ಕಾಲ ಅಧಿಕಾರ ನಡೆಸುವ ಮೂಲಕ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. ಮೊದಲ ಅವಧಿಯಲ್ಲಿ 13 ಮೇ 2013 ರಿಂದ 15 ಮೇ 2018 ರವರೆಗೆ ಅವರು ಸಿಎಂ ಆಗಿ 5 ವರ್ಷಗಳ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರೆ, ಎರಡನೇ ಅವಧಿಯಲ್ಲಿ 20 ಮೇ 2023 ರಿಂದ 3 ಜೂನ್ 2026 ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.