ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಚಾರ್ಟರ್ಡ್ ಸಹಕಾರಿ ಬ್ಯಾಂಕ್ ದೇಶದಲ್ಲೇ ಮಾದರಿ ಬ್ಯಾಂಕ್: ಮಾಧವ ರೆಡ್ಡಿ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕ್ ನ ಅಧ್ಯಕ್ಷ ಎಂ.ಮುನಿರೆಡ್ಡಿ ʼಕೇವಲ 1.29 ಕೋಟಿ ರೂಪಾ ಯಿ ಬಂಡವಾಳದೊಂದಿಗೆ ಆರಂಭವಾದ ಬ್ಯಾಂಕ್ 445 ಕೋಟಿ ರೂಪಾಯಿ ವಹಿವಾಟು ನಡೆಸುವ ಹಂತಕ್ಕೆ ಬೆಳೆದಿದೆ. ಆರು ಸಾವಿರಕ್ಕೂ ಹೆಚ್ಚು ಗ್ರಾಹಕರನ್ನು ಹೊಂದಿದೆ. ಬ್ಯಾಂಕಿನ ಗ್ರಾಹಕರೇ ಈ ಸಾಧನೆಯ ಹಿಂದಿನ ಕಾರಣಕರ್ತರುʼ ಎಂದರು

ಚಾರ್ಟರ್ಡ್ ಸಹಕಾರಿ ಬ್ಯಾಂಕ್ ದೇಶದಲ್ಲೇ ಮಾದರಿ ಬ್ಯಾಂಕ್

Ashok Nayak Ashok Nayak Aug 19, 2025 9:51 PM

ಬೆಂಗಳೂರು: ʼಸಹಕಾರಿ ಬ್ಯಾಂಕುಗಳು ಮುಚ್ಚುತ್ತಿರುವ ಸಂದರ್ಭದಲ್ಲಿ ಚಾರ್ಟರ್ಡ್ ಸಹಕಾರಿ ಬ್ಯಾಂಕ್ ಗ್ರಾಹಕರ ವಿಶ್ವಾಸ ಗಳಿಸುತ್ತಾ ಲಾಭದಾಯಕವಾಗಿ ಮುನ್ನಡೆಯುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿʼ ಎಂದು ಸಹಕಾರ ಅಭಿವೃದ್ಧಿ ಅಧಿಕಾರಿ ಮಾಧವರೆಡ್ಡಿ ಪ್ರಶಂಸೆ ವ್ಯಕ್ತಪಡಿಸಿ ದರು.

ಕೋರಮಂಗಲದಲ್ಲಿ ನಡೆದ ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನ ರಜತ ಮಹೋತ್ಸವವನ್ನು ಉದ್ಘಾಟಿಸಿ, ಸ್ಮರಣಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮಾತನಾಡಿದ ಅವರು, ʼಚಾರ್ಟರ್ಡ್ ಬ್ಯಾಂಕ್ 2022ನೇ ಸಾಲಿನ ದೇಶದ ಅತ್ಯುತ್ತಮ ಬ್ಯಾಂಕ್ ಎಂಬ ಪ್ರಶಸ್ತಿಗೆ ಭಾಜನ ವಾಗಿದೆ. ಜತೆಗೆ ಶೂನ್ಯ ಎನ್ ಪಿಎ ಹೊಂದಿದ ಸಾಧನೆ ಮಾಡುವುದು ಸುಲಭದ ಮಾತಲ್ಲ. ಇಂಥ ದ್ದೊಂದು ಸಾಧನೆಗೈದ ಸಹಕಾರಿ ಬ್ಯಾಂಕ್ ದೇಶಕ್ಕೆ ಮಾದರಿಯಾಗಿದೆʼ ಎಂದರು.

ಇದನ್ನೂ ಓದಿ: Bengaluru Tunnel Road: ಎಸ್ಟೀಮ್ ಮಾಲ್‌ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆವರೆಗೆ 1.5 ಕಿ.ಮೀ. ಉದ್ದದ ನೂತನ ಸುರಂಗ ರಸ್ತೆ: ಡಿಕೆಶಿ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕ್ ನ ಅಧ್ಯಕ್ಷ ಎಂ.ಮುನಿರೆಡ್ಡಿ ʼಕೇವಲ 1.29 ಕೋಟಿ ರೂಪಾಯಿ ಬಂಡವಾಳದೊಂದಿಗೆ ಆರಂಭವಾದ ಬ್ಯಾಂಕ್ 445 ಕೋಟಿ ರೂಪಾಯಿ ವಹಿವಾಟು ನಡೆಸುವ ಹಂತಕ್ಕೆ ಬೆಳೆದಿದೆ. ಆರು ಸಾವಿರಕ್ಕೂ ಹೆಚ್ಚು ಗ್ರಾಹಕರನ್ನು ಹೊಂದಿದೆ. ಬ್ಯಾಂಕಿನ ಗ್ರಾಹಕರೇ ಈ ಸಾಧನೆಯ ಹಿಂದಿನ ಕಾರಣಕರ್ತರುʼ ಎಂದರು.

ಉಪಾಧ್ಯಕ್ಷ ನಾರಾಯಣ ಎಸ್ ಭಟ್, ಸಂಸ್ಥಾಪಕ ಅಧ್ಯಕ್ಷ ಎಂ.ನಾಗರಾಜ್, ವಿಜಯರಾಘವ ರೆಡ್ಡಿ, ಬ್ಯಾಂಕಿನ ಸಿಇಓ ಕೆ.ಬಿ.ಶಿವಣ್ಣ, ಆಡಳಿತ ಮಂಡಳಿ ಸದಸ್ಯರಾದ ಮುನಿವೆಂಕಟಪ್ಪ, ವೆಂಕಟೇಶ್ ಅಯ್ಯರ್ ಇದ್ದರು. ರಜತ ಮಹೋತ್ಸವದ ನೆನಪಿಗಾಗಿ ಸ್ಮರಣೆ ಸಂಚಿಕೆ ಬಿಡುಗಡೆ ಮಾಡಲಾಯಿತು.