ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕೆಪಿಎಸ್‌ಸಿ: ಇಬ್ಬರ ಸಿಐಡಿ ತನಿಖೆ ಅಂತ್ಯ, ವಶಕ್ಕೆ ನೀಡಲು ಕೋರ್ಟ್‌ಗೆ ಇಡಿ ಅರ್ಜಿ

ಜಾಮೀನು ಅರ್ಜಿಯ ವಿಚಾರಣೆಯೂ ಗುರುವಾರ ನಡೆಯಲಿದೆ. ಶಾಂತ ಹೊಸಮನಿ ಮನೆಗಳಲ್ಲಿ ಸಿಐಡಿ ಶೋಧ ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಮತ್ತೊಬ್ಬ ಆರೋಪಿ ಶಾಂತ ಹೊಸಮನಿ ಅವರ ನಗರದ ಹೊಸಕೆರೆಹಳ್ಳಿ ಹಾಗೂ ನಾಗರಬಾವಿಯಲ್ಲಿರುವ ನಿವಾಸಗಳ ಮೇಲೆ ಸಿಐಡಿ ಅಧಿಕಾರಿಗಳು ಬುಧವಾರ ಶೋಧ ನಡೆಸಿದರು. ದಾಳಿ ಸಂದರ್ಭದಲ್ಲಿ ಶಾಂತ ಹೊಸಮನಿ ಮನೆಯಲ್ಲಿ ಇರಲಿಲ್ಲ.

ಸಿಐಡಿ ಮುಗೀತು, ಇನ್ನು ಜ್ಞಾನೇಂದ್ರ, ಕನ್ನಾಳೆಗೆ ಇಡಿ ಬಿಸಿ

-

Profile
Ashok Nayak Sep 10, 2026 9:34 AM

ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ(KPSC Recruitment Scam) ಪರೀಕ್ಷೆ ಯಲ್ಲಿನ ಅಕ್ರಮಕ್ಕೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಪ್ರಕರಣದ ಆರೋಪಿಗಳಾದ ಜ್ಞಾನೇಂದ್ರ ಕುಮಾರ್ ಮತ್ತು ಬಸವರಾಜ್ ಕನ್ನಾಳೆ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವನ್ನು ವಿಚಾರಣಾ ನ್ಯಾಯಾಲಯ ವಿಧಿಸಿದೆ. ಸಿಐಡಿ ವಿಚಾರಣೆ ಅಂತ್ಯಗೊಳ್ಳುತ್ತಿರುವುದರಿಂದ, ಇಬ್ಬರನ್ನೂ ನಮಗೆ ಒಪ್ಪಿಸಿ ಎಂದು ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.

ಇದೇ ವೇಳೆ, ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನು ನೀಡುವಂತೆ ಜ್ಞಾನೇಂದ್ರ ಕುಮಾರ್ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಆ.31ರಂದು ಇಬ್ಬರು ಆರೋಪಿಗಳನ್ನು ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದ ಸಿಐಡಿ ಅಧಿಕಾರಿಗಳು, ಕಳೆದ 10 ದಿನಗಳಿಂದ ವಿಚಾರಣೆ ನಡೆಸಿದ್ದರು. ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬುಧವಾರ ಬೆಂಗಳೂರಿನ ಒಂದನೇ ಎಸಿಜೆಎಂ ನ್ಯಾಯಾ ಲಯಕ್ಕೆ ಹಾಜರುಪಡಿಸಿ ದರು. ಹೆಚ್ಚಿನ ವಿಚಾರಣೆಗೆ ಸದ್ಯ ಕಸ್ಟಡಿ ಅಗತ್ಯವಿಲ್ಲ ಎಂದು ಸಿಐಡಿ ಪರ ವಾದಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯವು ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಇಡಿ ಅರ್ಜಿ: ಪ್ರಕರಣದಲ್ಲಿ ಹಣಕಾಸಿನ ವಹಿವಾಟು ಸೇರಿದಂತೆ ಹಲವು ಅಂಶಗಳ ಕುರಿತು ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು, ಇಬ್ಬರನ್ನೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ದಲ್ಲಿಯೇ ವಿಚಾರಣೆ ನಡೆಸಲು ಅವಕಾಶ ಕಲ್ಪಿಸುವಂತೆ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: KPSC ಹಗರಣ; ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡ್ರಾ IAS ಅಧಿಕಾರಿ ಜ್ಞಾನೇಂದ್ರ ಕುಮಾರ್?

ಈ ಹಿಂದೆ ಇಡಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಯಾಗಿದ್ದ ಹಿನ್ನೆಲೆಯಲ್ಲಿ, ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಸಾಕ್ಷ್ಯಗಳನ್ನು ನಾಶಪಡಿಸುವ ಅಥವಾ ತನಿಖೆಗೆ ಅಡ್ಡಿಪಡಿಸುವ ಸಾಧ್ಯತೆಗಳ ಬಗ್ಗೆಯೂ ತನಿಖಾ ಸಂಸ್ಥೆ ಅನುಮಾನ ವ್ಯಕ್ತಪಡಿಸಿದೆ. ಇದೇ ವೇಳೆ ಪ್ರಕರಣದಲ್ಲಿ ಬಸವರಾಜು ಕನ್ನಾಳೆ ಅವರ ಪಾತ್ರವೂ ತನಿಖೆಯ ವ್ಯಾಪ್ತಿಗೆ ಬಂದಿರುವು ದರಿಂದ ಇಬ್ಬರನ್ನೂ ವಿಚಾರಣೆ ನಡೆಸುವುದು ಅಗತ್ಯ ಎಂದು ಇಡಿ ತಿಳಿಸಿದೆ.

ಅನಾರೋಗ್ಯದ ನೆಪ: ಮಧ್ಯಂತರ ಜಾಮೀನಿಗೆ ಅರ್ಜಿ ಇದೇ ಪ್ರಕರಣದ ಐದನೇ ಆರೋಪಿ ಜ್ಞಾನೇಂದ್ರ ಕುಮಾರ್ ಅವರು ಅನಾರೋಗ್ಯದ ಕಾರಣ ಮುಂದಿಟ್ಟುಕೊಂಡು ಮಧ್ಯಂತರ ಜಾಮೀನು ಕೋರಿ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಬೆನ್ನು ನೋವು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವುದಾಗಿ ಅರ್ಜಿಯಲ್ಲಿ ಉಲ್ಲೇಖಿಸಿರುವ ಅವರು, ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ ಮಧ್ಯಂತರ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಜಾಮೀನು ಅರ್ಜಿಯ ವಿಚಾರಣೆಯೂ ಗುರುವಾರ ನಡೆಯಲಿದೆ. ಶಾಂತ ಹೊಸಮನಿ ಮನೆಗಳಲ್ಲಿ ಸಿಐಡಿ ಶೋಧ ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಮತ್ತೊಬ್ಬ ಆರೋಪಿ ಶಾಂತ ಹೊಸಮನಿ ಅವರ ನಗರದ ಹೊಸಕೆರೆಹಳ್ಳಿ ಹಾಗೂ ನಾಗರಬಾವಿಯಲ್ಲಿರುವ ನಿವಾಸಗಳ ಮೇಲೆ ಸಿಐಡಿ ಅಧಿಕಾರಿಗಳು ಬುಧವಾರ ಶೋಧ ನಡೆಸಿದರು. ದಾಳಿ ಸಂದರ್ಭದಲ್ಲಿ ಶಾಂತ ಹೊಸಮನಿ ಮನೆಯಲ್ಲಿ ಇರಲಿಲ್ಲ.

ಹೀಗಾಗಿ, ಆಕೆಯ ಅನುಪಸ್ಥಿತಿಯಲ್ಲಿಯೇ ಅಧಿಕಾರಿಗಳು ಮನೆಗಳನ್ನು ಪರಿಶೀಲಿಸಿದ್ದು, ಪ್ರಕರಣದ ತನಿಖೆಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಶಾಂತ ಹೊಸಮನಿ ಅವರು ಪ್ರಸ್ತುತ ನಾಪತ್ತೆಯಾಗಿದ್ದು, ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಅವರ ಚಲನವಲನ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಅವರ ಪಾತ್ರದ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ಮುಂದು ವರಿಸಿದ್ದಾರೆ.