ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಿಐಡಿಯಿಂದ ದೂರುದಾರರ ಹೇಳಿಕೆ ದಾಖಲು: ‌ಕೆಪಿಎಸ್ʼಸಿ ಹಗರಣ, ಸಾಹುಕಾರ್‌ ಸಹಿತ 29 ಮಂದಿಗೆ ನೋಟಿಸ್

ಹಾಸನ ಮೂಲದ ದೂರುದಾರ ಮಂಜುನಾಥ್ ಅವರನ್ನು ಸಿಐಡಿ ಕಚೇರಿಯಲ್ಲಿ ವಿಚಾರಣೆ ನಡೆಸಿದ ತನಿಖಾಧಿಕಾರಿಗಳು ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ವೇಳೆ ಮಂಜುನಾಥ್ ಅವರು ಮಧ್ಯವರ್ತಿಗಳು ಹಾಗೂ ಅಭ್ಯರ್ಥಿಗಳ ನಡುವಿನ ಧ್ವನಿಮುದ್ರಿಕೆ ಸೇರಿದಂತೆ ಹಲವು ಪ್ರಮುಖ ದಾಖಲೆಗಳನ್ನು ತನಿಖಾ ತಂಡಕ್ಕೆ ಒದಗಿಸಿದ್ದಾರೆ.

ಕೆಪಿಎಸ್ʼಸಿ ಹಗರಣ, ಸಾಹುಕಾರ್‌ ಸಹಿತ 29 ಮಂದಿಗೆ ನೋಟಿಸ್

-

Profile
Ashok Nayak Aug 6, 2026 9:02 AM

ಬೆಂಗಳೂರು: ಪಶುವೈದ್ಯರ ನೇಮಕ ಪ್ರಕರಣಕ್ಕೆ ಸಂಬಂಧಿಸಿ ದೂರುದಾರರ ವಿಚಾರಣೆ ಪೂರ್ಣ ಗೊಂಡಿದ್ದು, ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕ ರಪ್ಪ ಸಾಹುಕಾರ್ ಸೇರಿದಂತೆ ಅಕ್ರಮವಾಗಿ ಆಯ್ಕೆಯಾಗಿದ್ದಾರೆ ಎನ್ನಲಾದ 29 ಮಂದಿ ಅಭ್ಯರ್ಥಿಗಳಿಗೆ ಶೀಘ್ರವೇ ನೋಟಿಸ್ ಜಾರಿಗೊಳಿಸಲು ಸಿಐಡಿ ಅಧಿಕಾರಿಗಳು ಸಜ್ಜಾಗಿದ್ದಾರೆ.

ಹಾಸನ ಮೂಲದ ದೂರುದಾರ ಮಂಜುನಾಥ್ ಅವರನ್ನು ಸಿಐಡಿ ಕಚೇರಿಯಲ್ಲಿ ವಿಚಾರಣೆ ನಡೆಸಿದ ತನಿಖಾಧಿಕಾರಿಗಳು ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ವೇಳೆ ಮಂಜುನಾಥ್ ಅವರು ಮಧ್ಯವರ್ತಿಗಳು ಹಾಗೂ ಅಭ್ಯರ್ಥಿಗಳ ನಡುವಿನ ಧ್ವನಿಮುದ್ರಿಕೆ ಸೇರಿದಂತೆ ಹಲವು ಪ್ರಮುಖ ದಾಖಲೆಗಳನ್ನು ತನಿಖಾ ತಂಡಕ್ಕೆ ಒದಗಿಸಿದ್ದಾರೆ.

ಪಶುವೈದ್ಯಾಧುಕಾರಿ ಹುದ್ದೆ ಪಡೆದಿರುವ 29 ಮಂದಿ ಅಭ್ಯರ್ಥಿಗಳ ಪೈಕಿ ಹಲವರ ಮೇಲೆ ಗಂಭೀರ ಅನುಮಾನಗಳಿವೆ. ಪರೀಕ್ಷೆ ನಡೆಯುವ ಹಿಂದಿನ ದಿನ ಈ ಅಭ್ಯರ್ಥಿಗಳು ತಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ‌ಹೀಗಾಗಿ, ಆ ನಿರ್ಣಾಯಕ ದಿನದಂದು ಇವರು ಎಲ್ಲಿದ್ದರು? ಯಾರನ್ನು ಭೇಟಿಯಾಗಿದ್ದರು ಎಂಬ ಬಗ್ಗೆ ಸಿಐಡಿ ಮಾಹಿತಿ ಕಲೆಹಾಕಿದೆ.

ಮಾಜಿ ಅಧ್ಯಕ್ಷರಿಗೆ ಕುತ್ತು: ಕೆಪಿಎಸ್‌ಸಿ ಕಚೇರಿ ಮೇಲೆ ನಡೆಸ ಲಾದ ದಾಳಿಯ ವೇಳೆ ವಶಪಡಿಸಿ ಕೊಳ್ಳಲಾದ ಓಎಂಆರ್ ಶೀಟ್‌ಗಳ ಪರಿಶೀಲನೆ ಈಗ ಅಂತಿಮ ಹಂತದಲ್ಲಿದೆ. ಈ ವರದಿ ಹಾಗೂ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಎರಡು ಮೂರು ದಿನಗಳಲ್ಲಿ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಯಲು ನಿರ್ಧರಿಸಲಾಗಿದೆ.

ಪ್ರಕರಣದ ಹಿನ್ನೆಲೆ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮಂಜುನಾಥ್ ಅವರು, ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ಹಾಗೂ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದರು. ಈ ಸಂಬಂಧ ಕೆಪಿಎಸ್‌ಸಿ ಅಧ್ಯಕ್ಷರು, ಸದಸ್ಯರು ಹಾಗೂ ಅಕ್ರಮವಾಗಿ ಹುದ್ದೆ ಗಿಟ್ಟಿಸಿಕೊಂಡಿರುವ 29 ಅಭ್ಯರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಎಫ್ಐಆರ್ ಆಧರಿಸಿ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳು, ಮೇಲಟ್ಟದ ಪ್ರಭಾವಿಗಳು ಹಾಗೂ ಅಕ್ರಮದಲ್ಲಿ ಭಾಗಿ ಯಾದವರ ಪಾತ್ರದ ಬಗ್ಗೆ ತನಿಖೆಯನ್ನು ಚುರುಕುಗೊಳಿಸಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಸ್ಫೋಟಕ ಮಾಹಿತಿ ಹೊರಬರುವ ನಿರೀಕ್ಷೆಯಿದೆ.

ಒಎಂಆರ್ ಶೀಟ್ ಪರಿಶೀಲನೆ: ಸಿಐಡಿ ಪಶುವೈದ್ಯರ ನೇಮಕಾತಿಯಲ್ಲಿ ಹಗರಣ ಪ್ರಕರಣದಲ್ಲಿ ಅಸಲಿ ಸತ್ಯ ತಿಳಿಯಲು ಸಿಐಡಿ ಮುಂದಾಗಿದೆ. ಕೆಪಿಎಸ್‌ಸಿ ಕಚೇರಿಯಲ್ಲಿ ಶೋಧ ಕಾರ‍್ಯ ನಡೆಸಿ ರುವ ಸಿಐಡಿ ಪರೀಕ್ಷಾ ದಾಖಲಾತಿ, ಒಎಂಆರ್ ಶೀಟ್, ಸಿಸಿಟಿವಿ ದೃಶ್ಯಗ ಳನ್ನು ವಶಕ್ಕೆ ಪಡೆದಿದೆ. ಒಎಂಆರ್ ಶೀಟ್ ತಿದ್ದುಪಡಿ ಮಾಡಿದ್ದಾರೆಂಬ ಆರೋಪ ಹಿನ್ನೆಲೆ ಯಲ್ಲಿ ಒಎಂಆರ್ ಶೀಟ್‌ಗಳು ಮತ್ತು ಸಿಸಿಟಿವಿ ದೃಶ್ಯಾವಳಿ ಎಫ್ಎಸ್‌ಎಲ್‌ಗೆ ರವಾನೆ ಮಾಡಲಾ ಗಿದೆ. ದೂರುದಾರ ಮಂಜುನಾಥ್ ಅವರು ಒದಗಿಸಿರುವ ಸಾಕ್ಷ್ಯ ಮತ್ತು ದಾಖಲೆಗಳನ್ನೂ ಎಫ್ಎಸ್‌ಎಲ್‌ಗೆ ಕಳುಹಿಸಲಾಗಿದೆ.