ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

CM surprise visit to APMC: ಎಪಿಎಂಸಿಗೆ ಸಿಎಂ ಡಿಕೆ ಹಠಾತ್ ಭೇಟಿ: ನಾಲ್ವರು ಅಂಗಡಿ ಮಾಲೀಕರ ಬಂಧನ, 4 ಕೇಸ್ ದಾಖಲು:‌ 29 ಬಾಲಕಾರ್ಮಿಕರ ರಕ್ಷಣೆ

ಯಶವಂತಪುರ ಎಪಿಎಂಸಿಗೆ ಮಂಗಳವಾರ ದಿಢೀರ್ ಭೇಟಿ ನೀಡಿದ ಸಿಎಂ, ಅಲ್ಲಿ ಬಂದಿದ್ದ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ, ತೆಂಗು ಬೆಳೆಗಾರರು, ವರ್ತಕರು ಹಾಗೂ ಮಂಡಿ ಮಾಲೀಕರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಆಲಿಸಿದರು. ಮಕ್ಕಳಿಂದ ಕೆಲಸ ಮಾಡಿಸುವುದನ್ನು ತಕ್ಷಣದಿಂದಲೇ ನಿಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಎಪಿಎಂಸಿಗೆ ಸಿಎಂ ಡಿಕೆ ಹಠಾತ್ ಭೇಟಿ

-

Profile
Ashok Nayak Sep 9, 2026 8:40 AM

ಬೆಂಗಳೂರು: ಎಪಿಎಂಸಿಯಲ್ಲಿ ಬಾಲಕಾರ್ಮಿಕ ಪದ್ದತಿ ತಕ್ಷಣ ದಿಂದಲೇ ನಿಲ್ಲಿಸುವಂತೆ ಸೂಚಿಸ ಲಾಗಿದೆ. ಬಾಲಕಾರ್ಮಿಕರಿಂದ ದುಡಿಸುತ್ತಿರುವವರನ್ನು ತಕ್ಷಣವೇ ಬಂಧಿಸಿ ಪ್ರಕರಣ ದಾಖಲಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚಿಸಿದ ಬೆನ್ನಲ್ಲೇ 29 ಬಾಲ ಕಾರ್ಮಿಕರನ್ನು ಮಂಗಳವಾರ ರಕ್ಷಿಸಲಾಗಿದೆ.

ಯಶವಂತಪುರ ಎಪಿಎಂಸಿಗೆ ಮಂಗಳವಾರ ದಿಢೀರ್ ಭೇಟಿ ನೀಡಿದ ಸಿಎಂ, ಅಲ್ಲಿ ಬಂದಿದ್ದ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ, ತೆಂಗು ಬೆಳೆಗಾರರು, ವರ್ತಕರು ಹಾಗೂ ಮಂಡಿ ಮಾಲೀಕರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಆಲಿಸಿದರು. ಮಕ್ಕಳಿಂದ ಕೆಲಸ ಮಾಡಿಸುವುದನ್ನು ತಕ್ಷಣದಿಂದಲೇ ನಿಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: CM DK Shivakumar: ಸಿಎಂ ಡಿ.ಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು; ವಿಧಾನಸೌಧದಲ್ಲೇ ಚಿಕಿತ್ಸೆ

ಎಪಿಎಂಸಿ ಮಾರುಕಟ್ಟೆಗೆ ಅನಿರೀಕ್ಷಿತ ಭೇಟಿ ನೀಡಿ ಸಿಎಂ ಪರಿಶೀಲನೆ ನಡೆಸಿದ್ದ ವೇಳೆ ಮಾರುಕಟ್ಟೆ ಯಲ್ಲಿ ಮಕ್ಕಳು ಕೂಲಿ ಕೆಲಸ ಮಾಡುತ್ತಿರುವುದನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮಕ್ಕಳ ಭವಿಷ್ಯವನ್ನು ಹಾಳು ಮಾಡಿ ದುಡಿಮೆಗೆ ಹಚ್ಚಿರುವ ಮಾಲೀಕರನ್ನು ಸಂಜೆಯೊಳಗೆ ಬಂಧಿಸುವಂತೆ ಸೂಚಿಸಿದ್ದರು. ಈ ಬೆನ್ನ ಅಲರ್ಟ್ ಆದ ಪೊಲೀಸರು ಬೀದಿಬದಿ ಸೇರಿದಂತೆ ಎಪಿಎಂಸಿಯಲ್ಲಿ ಕೆಲಸ ಮಾಡುತ್ತಿದ್ದ ಹೊರ ರಾಜ್ಯದ 29 ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.

APMC

4 ಕೇಸ್ ದಾಖಲಿಸಿ ನಾಲ್ವರು ಶಾಪ್ ಮಾಲೀಕರನ್ನು ಬಂಧಿಸಲಾಗಿದೆ. ಬೆಂಗಳೂರು ನಗರ ಉತ್ತರ ವಿಭಾಗದ ಪೊಲೀಸರು ಮಾರುಕಟ್ಟೆಯಾದ್ಯಂತ ವಿಶೇಷ ರಕ್ಷಣಾ ಕಾರ್ಯಾಚರಣೆ ಮಾಡಿದ್ದಾರೆ. ಐದು ಪ್ರತ್ಯೇಕ ಪೊಲೀಸ್ ತಂಡ ರಚಿಸಿ ಅಂಗಡಿಗಳು ಮತ್ತು ಗೋಡೌನ್‌ಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಈ ವೇಳೆ ಹೊರ ರಾಜ್ಯದ ಮಕ್ಕಳು ಸೇರಿದಂತೆ ಎಪಿಎಂಸಿಯಲ್ಲಿ ಕೆಲಸ ಮಾಡುತ್ತಿದ್ದ 19 ಬಾಲಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಈ ಸಂಬಂಧ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ನಾಲ್ವರು ಅಂಗಡಿ ಮಾಲೀಕ ರನ್ನು ಬಂಧಿಸಲಾಗಿದೆ. ಇದೇ ವೇಳೆ ಮಾರುಕಟ್ಟೆಯ ಸುತ್ತಮುತ್ತಲಿನ ರಸ್ತೆಬದಿಯ ವ್ಯಾಪಾರ ಹಾಗೂ ಸಣ್ಣಪುಟ್ಟ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಇನ್ನೂ 10 ಮಕ್ಕಳನ್ನ ರಕ್ಷಣೆ ಮಾಡಲಾಗಿದೆ.