Bidadi Township: ಬಿಡದಿ ಟೌನ್‌ಶಿಪ್ ಕುರಿತು ಚರ್ಚೆಗೆ ಸಿದ್ಧ; ಜೂ.26ಕ್ಕೆ ವಿಧಾನಸೌಧಕ್ಕೆ ಬರುವಂತೆ ಕುಮಾರಸ್ವಾಮಿಗೆ ಸಿಎಂ ಡಿಕೆಶಿ ಆಹ್ವಾನ
CM DK Shivakumar: ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಿಡದಿ ಟೌನ್‌ಶಿಪ್ ವಿಚಾರವಾಗಿ ಎಚ್.ಡಿ. ಕುಮಾರಸ್ವಾಮಿ ಪರವಾಗಿ ಜೆಡಿಎಸ್‌ನವರು ಅಧಿವೇಶನದಲ್ಲಿ ಚರ್ಚೆ ಮಾಡಲಿ, ಉತ್ತರ ಕೊಡೋಣ ಎಂದು ತಿಳಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಸಿಎಂ ಡಿ.ಕೆ.ಶಿವಕುಮಾರ್. -
ಬೆಂಗಳೂರು, ಜೂ.22: ಬಿಡದಿ ಟೌನ್‌ಶಿಪ್ ಯೋಜನೆ ಸಂಬಂಧಿಸಿ ಕೇಂದ್ರ ಸಚಿವ ಎಚ್.ಡಿ. ಅವರ ಸವಾಲನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ವೀಕರಿಸಿದ್ದಾರೆ. ಬಿಡದಿ ಟೌನ್‌ಶಿಪ್ ಬಗ್ಗೆ ಚರ್ಚಿಸಲು ಜೂನ್ 26ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧಕ್ಕೆ ಬನ್ನಿ ಎಂದು ಕೇಂದ್ರ ಸಚಿವರಿಗೆ ಸಿಎಂ ಡಿಕೆಶಿ ಅವರು ಆಹ್ವಾನ ನೀಡಿದ್ದಾರೆ.
ಈ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಅವರು, ತಾವು ಪ್ರಾರಂಭಿಸಿದ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ, ತಮ್ಮ ಜೊತೆ ನಾನು ಚರ್ಚಿಸಲು ಉತ್ಸುಕನಾಗಿದ್ದು, ಜೂನ್ 26ರಂದು ಬೆಳಗ್ಗೆ 11ಗಂಟೆಗೆ ವಿಧಾನಸೌಧಕ್ಕೆ ತಾವು ಮತ್ತು ತಮ್ಮ ತಂಡದ ಐದು ಪ್ರತಿನಿಧಿಗಳೊಂದಿಗೆ ನನ್ನ ಕಚೇರಿಗೆ ಆಗಮಿಸುವಂತೆ ತಮ್ಮನ್ನು ಕೋರುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಇದೀಗ ಡಿಕೆಶಿ ಅವರ ಆಹ್ವಾನಕ್ಕೆ ಕುಮಾರಸ್ವಾಮಿ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಅಧಿವೇಶನದಲ್ಲಿ ಚರ್ಚೆ ಮಾಡಲಿ, ಉತ್ತರ ಕೊಡೋಣ
ಇದಕ್ಕೂ ಮೊದಲು ಬಿಡದಿ ಟೌನ್‌ಶಿಪ್ (Bidadi Township) ವಿಚಾರವಾಗಿ ಪ್ರತಿಕ್ರಿಯಿಸಿದ್ದ ಸಿಎಂ ಡಿ.ಕೆ.ಶಿವಕುಮಾರ್ ಅವರು, ಎಚ್.ಡಿ. ಕುಮಾರಸ್ವಾಮಿ ಪರವಾಗಿ ಜೆಡಿಎಸ್‌ನವರು ಅಧಿವೇಶನದಲ್ಲಿ ಚರ್ಚೆ ಮಾಡಲಿ, ಉತ್ತರ ಕೊಡೋಣ ಎಂದು ತಿಳಿಸಿದ್ದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಅವರು ಪ್ರತಿಕ್ರಿಯೆ ನೀಡಿದ್ದರು.
ಬೈರಮಂಗಲಕ್ಕೆ ಚರ್ಚೆಗೆ ಬರಲಿ ಎಂದು ಎಚ್.ಡಿ. ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರಲ್ಲಾ ಎಂದು ಕೇಳಿದಾಗ, ʼನಾನು ಈಗ ಏನನ್ನೂ ಮಾತನಾಡುವುದಿಲ್ಲ. ಹಿಂದೆಯೇ ಚರ್ಚೆಗೆ ಕರೆದಿದ್ದೆ. ಆದರೆ ಬರಲಿಲ್ಲ. ಮುಂದಿನ ಅಧಿವೇಶನದಲ್ಲಿ ಅವರ ಪಕ್ಷದ, ಇತರ ಅನುಭವಿ ರಾಜಕಾರಣಿಗಳ ಮೂಲಕ ಚರ್ಚೆ ಮಾಡಿಸಲಿʼ ಎಂದು ಹೇಳಿದ್ದರು.
ಎಚ್.ಡಿ. ಕುಮಾರಸ್ವಾಮಿ ದಾಖಲೆ ಬಿಡುಗಡೆ ಮಾಡಿದ್ದಾರೆ ಎಂದು ಕೇಳಿದಾಗ, ʼI ವಿಷ್ ಹಿಮ್ All the Bestʼ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದರು.
ಉದ್ಯೋಗಿಯಾಗುವ ಬದಲು ಉದ್ಯೋಗದಾತರಾಗುವುದು ನಿಮ್ಮ ಗುರಿಯಾಗಲಿ: ಸಿಎಂ ಡಿ.ಕೆ. ಶಿವಕುಮಾರ್
ಸದಾಶಿವನಗರ ನಿವಾಸಕ್ಕೆ ಯಾರೂ ಬರಬೇಡಿ; ಗೃಹಕಚೇರಿ ಕೃಷ್ಣಾದಲ್ಲಿ ಭೇಟಿಯಾಗಲು ಸಿಎಂ ಡಿಕೆಶಿ ಮನವಿ
ಬೆಂಗಳೂರು: ಇನ್ನುಮುಂದೆ ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಮುಖ್ಯಮಂತ್ರಿಗಳ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಇಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ ಹಾಗೂ ಅನ್ಯಥಾ ಭಾವಿಸಬೇಡಿ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.