ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Cauvery river Tragedy: ಕಾವೇರಿ ನದಿ ದುರಂತ; ಮೃತ 6 ಮಂದಿಯ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಮೈಸೂರು ಜಿಲ್ಲೆಯ ಕೆ.ಆರ್‌.ನಗರದ ಪ್ರಸಿದ್ಧ ಅರ್ಕೇಶ್ವರ ದೇವಸ್ಥಾನದ ಸಮೀಪದ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಮಂದಿ ಭಾನುವಾರ ಮೃತಪಟ್ಟಿದ್ದರು. ದರ್ಗಾಕ್ಕೆ ಭೇಟಿ ನೀಡಲು ಹೋಗಿದ್ದ ಪ್ರವಾಸಿಗರು, ಅರ್ಕೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದಾಗ ದುರಂತ ಸಂಭವಿಸಿತ್ತು.

ಕಾವೇರಿ ನದಿ ದುರಂತ; ಮೃತರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಸಿಎಂ ಸಿದ್ದರಾಮಯ್ಯ. -

Prabhakara R
Prabhakara R Apr 19, 2026 11:18 PM

ಬೆಂಗಳೂರು: ಮೈಸೂರು ಜಿಲ್ಲೆಯ ಕೆ.ಆರ್. ನಗರದ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಆರು ಮಂದಿ ಮೃತಪಟ್ಟ ಘಟನೆಗೆ ಸಿಎಂ ಸಿದ್ಧರಾಮಯ್ಯ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಧನವನ್ನು ಅವರು ಘೋಷಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಅವರು, ಮೈಸೂರಿನ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ನೀರುಪಾಲಾದ ವಿಚಾರ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

ಕುಟುಂಬ ಸದಸ್ಯರನ್ನು ಕಳೆದುಕೊಂಡು ನೊಂದಿರುವ ಜೀವಗಳಿಗೆ ಆರ್ಥಿಕ ಸವಾಲುಗಳು ಮತ್ತಷ್ಟು ಬಾಧಿಸದಿರಲಿ ಎಂಬ ಮಾನವೀಯ ಕಾಳಜಿಯೊಂದಿಗೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ದುರ್ಘಟನೆಯಲ್ಲಿ ರಕ್ಷಿಸಲ್ಪಟ್ಟು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಿ ತಮ್ಮವರನ್ನು ಕೂಡಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.



ಏನಿದು ಘಟನೆ?

ಮೈಸೂರು: ಜಿಲ್ಲೆಯ ಕೆ.ಆರ್‌.ನಗರದ (KR Nagar) ಪ್ರಸಿದ್ಧ ಅರ್ಕೇಶ್ವರ ದೇವಸ್ಥಾನದ ಸಮೀಪದ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಮಂದಿ ಭಾನುವಾರ ಮೃತಪಟ್ಟಿದ್ದರು. ದರ್ಗಾಕ್ಕೆ ಭೇಟಿ ನೀಡಲು ಹೋಗಿದ್ದ ಪ್ರವಾಸಿಗರು, ಅರ್ಕೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದಾಗ ಪ್ರವಾಸಿಗರು ಮೃತಪಟ್ಟಿದ್ದರು. ಮೃತರೆಲ್ಲರೂ ಒಂದೇ ಕುಟುಂಬದವರೆಂದು ತಿಳಿದುಬಂದಿದೆ.

ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ; 13 ಮಂದಿ ಸಾವು

ಮೃತಪಟ್ಟವರನ್ನು ಯಾಸೀನ್ (23), ಫಾತಿಮ್ (30), ನೇಹಾನ್ (19), ಆಲೀಂ (13), ಹುಮಾಯೂನ್ (7) ಸೇರಿ ಆರು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಕೆ.ಆರ್. ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿದ್ದಾರೆ. ಸ್ಥಳೀಯ ಈಜುಗಾರರ ನೆರವಿನೊಂದಿಗೆ ನದಿಯಿಂದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸಲಾಗಿದೆ.