ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಮದ್ದೂರು ರಸ್ತೆ ಅಗಲೀಕರಣ; ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ

Maddur road widening: ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ಯೋಜನಾ ವರದಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಸ್ತೆಯನ್ನು 80 ಅಡಿ ವಿಸ್ತರಿಸಲು ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮದ್ದೂರು ರಸ್ತೆ ಅಗಲೀಕರಣ; ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ

ಮದ್ದೂರು ರಸ್ತೆ ಅಗಲೀಕರಣ ಕುರಿತು ಸಿಎಂ ಸಿದ್ದರಾಮಯ್ಯ ಸಭೆ. -

Prabhakara R
Prabhakara R Dec 2, 2025 4:36 PM

ಬೆಂಗಳೂರು, ಡಿ.2: ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವಿಷಯ ಕುರಿತು ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಸಭೆ ನಡೆಯಿತು. 2025-26ನೇ ಸಾಲಿನ ವಾರ್ಷಿಕ ಬಜೆಟ್‌ನಲ್ಲಿ ಮದ್ದೂರು ನಗರದಲ್ಲಿ ರಸ್ತೆ ಅಗಲೀಕರಣಕ್ಕಾಗಿ ವಿಸ್ತೃತ ಯೋಜನಾ ವರದಿಗಳನ್ನು ತಯಾರಿಸಲು ಘೋಷಿಸಲಾಗಿತ್ತು. ಅದರಂತೆ ಲೋಕೋಪಯೋಗಿ ಇಲಾಖೆಯಿಂದ ವಿಸ್ತೃತ ಯೋಜನಾ ವರದಿಯನ್ನೂ ತಯಾರಿಸಲಾಗಿದೆ.

ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆಯು ಜನನಿಬಿಡ ಹಾಗೂ ವಾಣಿಜ್ಯ ಚಟುವಟಿಕೆಯುಳ್ಳ ಜಿಲ್ಲಾ ಮುಖ್ಯ ರಸ್ತೆಯಾಗಿದೆ. ಅಧಿಕ ವಾಹನ ಸಂಚಾರವುಳ್ಳ ಈ ರಸ್ತೆ ಪುರಸಭೆಯ ಸುಪರ್ದಿಯಲ್ಲಿದೆ. ಬಿಎಂಐಸಿಎಪಿಎ ಅವರು ತಯಾರಿಸಿರುವ ಯೋಜನ ನಕ್ಷೆಯಲ್ಲಿ ಇದನ್ನು 100 ಅಡಿ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಗುರುತಿಸಲಾಗಿದೆ.

ರಸ್ತೆ ಅಗಲೀಕರಣ ಕಾಮಗಾರಿ ಯೋಜನಾ ವರದಿ ಪರಿಶೀಲಿಸಿದ ಮುಖ್ಯಮಂತ್ರಿಗಳು, ಈ ರಸ್ತೆಯನ್ನು 80 ಅಡಿ ವಿಸ್ತರಿಸಲು ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬ್ರೇಕ್‌ಫಾಸ್ಟ್ ಮಾಡುತ್ತಾ ಸಿಎಂ, ಡಿಸಿಎಂ ಕಾಲಹರಣ: ಬೊಮ್ಮಾಯಿ ಕಿಡಿ

ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮದ್ದೂರು ಶಾಸಕರಾದ ಕೆ.ಎಂ. ಉದಯ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಾನು ಹಾಗೂ ಡಿ.ಕೆ.ಶಿವಕುಮಾರ್‌ ಸಹೋದರರು, ಭಿನ್ನಾಭಿಪ್ರಾಯಗಳಿಲ್ಲ: ಸಿಎಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ನಡುವೆ ಮಂಗಳವಾರ ಮತ್ತೊಂದು ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆದಿದೆ. ಈ ಬಾರಿ ಸಿಎಂ ಸಿದ್ದರಾಮಯ್ಯ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ನಿವಾಸಕ್ಕೆ ಉಪಾಹಾರಕ್ಕೆ ಆಹ್ವಾನಿಸಿದ್ದರು.

ಉಪಾಹಾರ ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ. 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು ಎಂದು ಹೇಳಿದರು.

ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿ ನೀಡಿದೆ. ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದರು.

ಶಾಸಕರು ಹಾಗೂ ಸಚಿವರಿಗೆ ಇದನ್ನೇ ಹೇಳುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ, ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ. ಸಿಎಲ್‌ಪಿ ಸಭೆ ಕರೆದಾಗ ಎಲ್ಲರೂ ಊಟಕ್ಕೆ ಸೇರುತ್ತೇವೆ. ಹೈ ಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಮೊನ್ನೆ ಹಾಗೂ ಇಂದೂ ಕೂಡ ಚರ್ಚಿಸಲಾಗಿದೆ. ಉಪಮುಖ್ಯಮಂತ್ರಿಗಳ ಮನೆಯ ಉಪಾಹಾರದಲ್ಲಿ ಮಾಂಸಾಹಾರವಿತ್ತು, ನಮ್ಮ ಮನೆಯಲ್ಲಿ ಸಸ್ಯಾಹಾರದ ಉಪಾಹಾರವಿತ್ತು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಪರಮೇಶ್ವರ್ ಅವರು ಸಿಎಂ ಹಾಗೂ ಡಿಸಿಎಂ ಅವರನ್ನು ಉಪಾಹಾರಕ್ಕೆ ಕರೆಯುವುದಾಗಿ ಹೇಳಿರುವ ಬಗ್ಗೆ ಮಾತನಾಡಿ, ಅದನ್ನು ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸುತ್ತಾರೆ ಎಂದು ಹೇಳಿದರು.

ಸಿಎಂ ಜತೆ ಬ್ರೇಕ್‌ಫಾಸ್ಟ್‌ ಮೀಟಿಂಗ್‌; ಅಧಿವೇಶನದ ಕಾರ್ಯತಂತ್ರಗಳ ಬಗ್ಗೆ ಚರ್ಚೆ ಎಂದ ಡಿಕೆಶಿ

ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ. ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಧಿವೇಶನ ನಡೆಯುತ್ತಿದೆ. ಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ. ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.