Cylinder Blast: ಸಿಲಿಂಡರ್ ಸ್ಫೋಟ: ಹಾನಿಗೀಡಾದ ಮನೆಗಳ ದುರಸ್ತಿಗೆ ಸಿಎಂ ಸೂಚನೆ
CM Siddaramaiah: ಮೃತ ಮುಬಾರಕ್ ಕುಟುಂಬದವರಿಗೆ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಸುತ್ತ ಗಾಯಗಳಾಗಿರುವ ಕಸ್ತೂರಮ್ಮ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. 13 ಮನೆಗಳು ಹಾನಿಗೀಡಾಗಿದ್ದು ಅದನ್ನು ದುರಸ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


ಬೆಂಗಳೂರು: ಸಿಲಿಂಡರ್ ಸ್ಫೋಟದಲ್ಲಿ ಹಾನಿಗೀಡಾಗಿರುವ ಮನೆಗಳನ್ನು ಕೂಡಲೇ ದುರಸ್ತಿ ಮಾಡಿಕೊಡುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಲಾಗಿದೆ. ಅವಘಡದಲ್ಲಿ ಒಬ್ಬ ಬಾಲಕ ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಆಡುಗೋಡಿ ಬಳಿಯ ಚಿನ್ನಯ್ಯನ ಪಾಳ್ಯದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದ ಬಗ್ಗೆ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು.
ದುರದೃಷ್ಟಕರ ಘಟನೆ ನಡೆದಿದೆ. ಮೇಲ್ನೋಟಕ್ಕೆ ಸಿಲಿಂಡರ್ ಸ್ಫೋಟವಾಗಿರಬಹುದು ಎಂದು ಕಂಡುಬಂದಿದೆ. ಪೊಲೀಸರು ಹಾಗೂ ಬಿಬಿಎಂಪಿಯವರ ವರದಿಯೂ ಕೂಡ ಅದೇ ಹೇಳಿದೆ. ಇಲ್ಲಿನ ಜನ ಸಣ್ಣ ಸಣ್ಣ ಮನೆಗಳಲ್ಲಿ ವಾಸ ಮಾಡುತ್ತಿದ್ದಾರೆ. ಕಸ್ತೂರಮ್ಮ ಅವರಿಗೆ ಸುಟ್ಟ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನರಸಮ್ಮ, ಫಾತಿಮಾ, ಪ್ರಮೀಳಾ (38), ರಾಜೇಶ್ (40), ಸಂಜಯ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಮುಬಾರಕ್ ಎಂಬ ಬಾಲಕ ತೀರಿಕೊಂಡಿದ್ದಾನೆ. ಸಬ್ರಿನಾ ಬಾನು, ಕಯಾಲಾ, ಇಂದಿರಾಗಾಂಧಿ ಆಸ್ಪತ್ರೆಯಲ್ಲಿದ್ದು, ಸುಬ್ರಮಣಿ (62 ವರ್ಷ) ಅಗಡಿ ಆಸ್ಪತ್ರೆ, ಶೇಖಾ, ನಜೀದುಲ್ಲಾ,(37 ವರ್ಷ) ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮುಖ್ಯಮಂತ್ರಿಗಳು ವಿವರಿಸಿದರು.
ಸಿಲಿಂಡರ್ ಸ್ಪೋಟ: ಮೃತರ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ
ಮೃತ ಮುಬಾರಕ್ ಕುಟುಂಬದವರಿಗೆ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಸುತ್ತ ಗಾಯಗಳಾಗಿರುವ ಕಸ್ತೂರಮ್ಮ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. 13 ಮನೆಗಳು ಹಾನಿಗೀಡಾಗಿದ್ದು ಅದನ್ನು ದುರಸ್ತಿ ಮಾಡಲಾಗುವುದು. ನರಸಮ್ಮ ಬದುಕುಳಿಯುವ ಸಾಧ್ಯತೆಗಳಿವೆ ಎಂದು ಮುಖ್ಯಮಂತ್ರಿಗಳು ಭರವಸೆ ವ್ಯಕ್ತಪಡಿಸಿದರು.
ಈ ಸುದ್ದಿಯನ್ನೂ ಓದಿ | Viral Video: ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಯುವಕನಿಗೆ ಕಾದಿತ್ತು ಶಾಕ್; ಆಚಾನಕ್ಕಾಗಿ ಸ್ಫೋಟಗೊಂಡ ಕೇಕ್!
ಪೊಲೀಸರು, ಅಗ್ನಿ ಶಾಮಕ ದಳ, ಗೃಹ ಇಲಾಖೆಯವರು ಪರಿಶೀಲಿಸುತ್ತಿದ್ದು, ತ್ಯಾಜ್ಯ ವಿಲೇವಾರಿಯಾದ ನಂತರ ವರದಿ ಬಂದ ಮೇಲೆ ಘಟನೆಗೆ ನಿಜವಾದ ಕಾರಣ ತಿಳಿಯಲಿದೆ. ಮೇಲ್ನೋಟಕ್ಕೆ ಸಿಲಿಂಡರ್ ಸ್ಫೋಟವಾಗಿದೆ ಎಂದು ತಿಳಿದುಬಂದಿದೆ ಎಂದರು.