Hebbala Flyover: ಹೆಬ್ಬಾಳ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
CM Siddaramaiah: 700 ಮೀಟರ್ ಉದ್ದದ ಹೆಬ್ಬಾಳ ಪ್ಲೈ ಓವರ್ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಈ ಫ್ಲೈಓವರ್ ಕೆ.ಆರ್ ಪುರಂ ಕಡೆಯಿಂದ ಮೇಖ್ರಿ ಸರ್ಕಲ್ ವರೆಗೆ ನಿರ್ಮಾಣ ಮಾಡಲಾಗಿದೆ. ಇದರ ಕಾಮಗಾರಿಯು 2023ರಲ್ಲಿ ಆರಂಭ ಆಗಿದ್ದು, ಒಂದೂವರೆ ವರ್ಷಗಳ ಬಳಿಕ ಫ್ಲೈಓವರ್ ಕಾರ್ಯ ಪೂರ್ಣಗೊಂಡಿದೆ.


ಬೆಂಗಳೂರು: ಸುಮಾರು 80 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಬೆಂಗಳೂರಿನ (Bengaluru) ಹೆಬ್ಬಾಳ ಹೊಸ ಮೇಲ್ಸೇತುವೆಯನ್ನು (Hebbala Flyover) ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಉದ್ಘಾಟಿಸಿದ್ದಾರೆ. ಉದ್ಘಾಟನೆಗೆ ಮೊದಲು 2 ದಿನಗಳ ಟ್ರಯಲ್ ರನ್ ನಡೆಸಲಾಗಿದೆ. ನಾಗವಾರದಿಂದ ಬರುವ ವಾಹನಗಳು ಸಿಗ್ನಲ್ ತಪ್ಪಿಸಿ ರ್ಯಾಂಪ್ ಮೂಲಕ ಸುಲಭವಾಗಿ ಹೋಗಲು ಈ ರ್ಯಾಂಪ್ ಸಹಾಯ ಮಾಡುತ್ತದೆ. ಆದರೆ, ಇದರಿಂದ ಮೆಖ್ರಿ ಸರ್ಕಲ್‌ನಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗಬಹುದು ಎಂದು ಟ್ರಯಲ್ ರನ್‌ನಲ್ಲಿ ತಿಳಿದುಬಂದಿದೆ.
700 ಮೀಟರ್ ಉದ್ದದ ಹೆಬ್ಬಾಳ ಪ್ಲೈ ಓವರ್ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಈ ಫ್ಲೈಓವರ್ ಕೆ.ಆರ್ ಪುರಂ ಕಡೆಯಿಂದ ಮೇಖ್ರಿ ಸರ್ಕಲ್ ವರೆಗೆ ನಿರ್ಮಾಣ ಮಾಡಲಾಗಿದೆ. ಇದರ ಕಾಮಗಾರಿಯು 2023ರಲ್ಲಿ ಆರಂಭ ಆಗಿದ್ದು, ಒಂದೂವರೆ ವರ್ಷಗಳ ಬಳಿಕ ಫ್ಲೈಓವರ್ ಕಾರ್ಯ ಪೂರ್ಣಗೊಂಡಿದೆ.
ಮೇಖ್ರಿ ಸರ್ಕಲ್ ರಸ್ತೆಯನ್ನು ವಿಸ್ತರಿಸಲು ಬಿಬಿಎಂಪಿ ಈಗಾಗಲೇ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ಗುರುತಿಸಿದೆ. ರಸ್ತೆ ವಿಸ್ತರಣೆಯಾದರೆ, ಆರ್.ಟಿ.ನಗರ, ಜಯಮಹಲ್ ಮತ್ತು ವಸಂತ ನಗರದ ಕಡೆಗೆ ಹೋಗುವ ವಾಹನಗಳು ಮೇಖ್ರಿ ಸರ್ಕಲ್‌ನಲ್ಲಿ ಫ್ರೀ ಲೆಫ್ಟ್ ತೆಗೆದುಕೊಳ್ಳಬಹುದು. ಇದರಿಂದ ಟ್ರಾಫಿಕ್ ಕಡಿಮೆಯಾಗುತ್ತದೆ. ಏರ್‌ಪೋರ್ಟ್, ನಾಗವಾರ (ಹೊಸ ರಾಂಪ್ ಮೂಲಕ) ಮತ್ತು ಭೂಪಸಂದ್ರದಿಂದ ಬರುವ ಟ್ರಾಫಿಕ್ ಬ್ಯಾಪ್ಟಿಸ್ಟ್ ಆಸ್ಪತ್ರೆ ಬಳಿ ಸೇರುವುದರಿಂದ ಅಲ್ಲಿಯೂ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: ಬೆಂಗಳೂರಿನ ಮಾಹೆಯಲ್ಲಿ ‘ನಶೆ ಮುಕ್ತ ಕರ್ನಾಟಕ’ ಮಹತ್ವದ ಜಾಗೃತಿ ಅಭಿಯಾನ ಉದ್ಘಾಟನೆ
ಹೆಬ್ಬಾಳ ಜಂಕ್ಷನ್‌ನಲ್ಲಿ ರಾಂಪ್ ನಿರ್ಮಾಣದಿಂದ ಟ್ರಾಫಿಕ್ ಕಡಿಮೆಯಾಗಲಿದೆ. ಆದರೆ, ಮೆಖ್ರಿ ಸರ್ಕಲ್‌ನಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆಯಿದೆ ಎಂದು ಸಂಚಾರ ಪೊಲೀಸರು ಹೇಳಿದ್ದಾರೆ. “ರಾಂಪ್ ತೆರೆಯುವುದರಿಂದ ವಾಹನಗಳು ಹೆಬ್ಬಾಳ ಜಂಕ್ಷನ್ ಅನ್ನು ಸುಲಭವಾಗಿ ದಾಟಲು ಸಹಾಯವಾಗುತ್ತದೆ. ಆದರೆ, ಟ್ರಯಲ್ ರನ್ ಸಮಯದಲ್ಲಿ, ಮೇಖ್ರಿ ಸರ್ಕಲ್ ಅಂಡರ್‌ಪಾಸ್ ಬಳಿ ಟ್ರಾಫಿಕ್ ಜಾಮ್ ಉಂಟಾಗುವುದನ್ನು ನಾವು ಗಮನಿಸಿದ್ದೇವೆ. ಇದು ಇತರ ರಸ್ತೆಗಳ ಮೇಲೆ ಪರಿಣಾಮ ಬೀರೀತು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.