ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Nepal Gen Z Protest: ನೇಪಾಳದಲ್ಲಿ ಹಿಂಸಾಚಾರ; 39 ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

CM Siddaramaiah: ನೇಪಾಳದಲ್ಲಿ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.

ನೇಪಾಳದಲ್ಲಿ ಸಿಲುಕಿರುವ 39 ಕನ್ನಡಿಗರ ರಕ್ಷಣೆಗೆ ಸಿಎಂ ಸೂಚನೆ

-

Prabhakara R Prabhakara R Sep 9, 2025 9:21 PM

ಬೆಂಗಳೂರು: ನೇಪಾಳದಲ್ಲಿ ವಿದ್ಯಾರ್ಥಿ, ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ (Nepal Gen Z Protest) ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.

ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮಕ್ಕೆ‌ ಮುಂದಾಗಿದ್ದಾರೆ.

ನೇಪಾಳದಲ್ಲಿ ಭುಗಿಲೆದ್ದ ಪ್ರತಿಭಟನಾಕಾರರ ಆಕ್ರೋಶ; ಮಾಜಿ ಪ್ರಧಾನಿ ಪತ್ನಿ ಸಜೀವ ದಹನ

ಕಠ್ಮಂಡು: ಜೆನ್‌ ಝಿ ತಲೆಮಾರು ನಡೆಸಿದ ಕಂಡು ಕೇರಳರಿಯದ ಹೋರಾಟಕ್ಕೆ ನೇಪಾಳ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಪ್ರತಿಟನಾಕಾರರು ನೇಪಾಳದ ಮಾಜಿ ಪ್ರಧಾನಿ ಜಲನಾಥ್‌ ಖನಾಲ್‌ (Jhalanath Khanal) ನಿವಾಸಕ್ಕೆ ಬೆಂಕಿ ಹಚ್ಚಿದ್ದು, ಅವರ ಪತ್ನಿ ರಾಜಲಕ್ಷ್ಮೀ ಚಿತ್ರಾಕರ್‌ (Rajyalaxmi Chitrakar) ಜೀವಂತವಾಗಿ ಸುಟ್ಟು ಹೋಗಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಪ್ರತಿಭನಾಕಾರರು ಮನೆಗೆ ಬೆಂಕಿ ಹಚ್ಚಿದ ವೇಳೆ ರಾಜಲಕ್ಷ್ಮೀ ಅದರೊಳಗೆ ಸಿಕ್ಕಿ ಹಾಕಿಕೊಂಡಿದ್ದರು. ಜಲನಾತ್‌ ಖನಲ್‌ ಅದೃಷ್ಟವಶಾತ್‌ ಪಾರಾಗಿದ್ದಾರೆ.

ನೇಪಾಳ ರಾಜಧಾನಿ ಕಠ್ಮಂಡುವಿನ ಡಲ್ಲು ಪ್ರದೇಶದಲ್ಲಿರುವ ಜಲನಾಥ್‌ ಖನಾಲ್‌ ಮನೆಗೆ ಮಂಗಳವಾರ (ಸೆಪ್ಟೆಂಬರ್‌ 9) ಪ್ರತಿಭಟನಾಕಾರರು ಮುತ್ತಿಗೆ ಹಾಕಿ ಬೆಂಕಿ ಹಚ್ಚಿದ್ದರು. ಗಾಯಗೊಂಡ ರಾಜಲಕ್ಷ್ಮೀ ಚಿತ್ರಾಕರ್‌ ಅವರನ್ನು ಕೂಡಲೇ ಕೀರ್ತಿಪುರ ಬರ್ನ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸೋಶಿಯಲ್‌ ಮೀಡಿಯಾದ ಮೇಲೆ ಸರ್ಕಾರ ಹೇರಿರುವ ನಿರ್ಬಂಧವನ್ನು ಪ್ರಶ್ನಿಸಿ ಮತ್ತು ಭಷ್ಟಾಚಾರವನ್ನು ವಿರೋಧಿಸಿ ಸಾವಿರಾರು ಮಂದಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈಗಾಗಲೇ ಪ್ರದಾನಿ ಕೆ.ಪಿ. ಶರ್ಮಾ ಒಲಿ ಮತ್ತು ಅಧ್ಯಕ್ಷ ರಾಮಚಂದ್ರ ಪೌಡೆಲ್‌ (Ram Chandra Poudel) ರಾಜೀನಾಮೆ ನೀಡಿದ್ದಾರೆ. ಜತೆಗೆ ಸೋಶಿಯಲ್‌ ಮೀಡಿಯಾ ಮೇಲಿನ ನಿರ್ಬಂಧವನ್ನು ಹಿಂಪಡೆಯಲಾಗಿದೆ.

ಒಲಿ ಸರ್ಕಾರದ ವಿತ್ತ ಸಚಿವ ಬಿಷ್ಣು ಪ್ರಸಾದ್‌ ಪೌಡೆಲ್‌ ಅವರನ್ನು ಪ್ರತಿಭಟನಾಕಾರರು ಬೀದಿಯಲ್ಲಿ ಅಟ್ಟಾಡಿಸಿಕೊಂಡು ಹೋಗುವ ವಿಡಿಯೊ ವೈರಲ್‌ ಆಗಿದೆ. ಅವರನ್ನು ಕಿಕ್ ಮಾಡುವ, ಎಳೆದಾಡುವ ದೃಶ್ಯ ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿದೆ. ಈಗಾಗಲೇ ಹಿಂಸಾತ್ಮಕ ಪ್ರತಿಭಟನೆಗೆ 21 ಮಂದಿ ಅಸುನೀಗಿದ್ದಾರೆ.



ಸೋಮವಾರ ರಾತ್ರಿಯೇ ಸೋಶಿಯಲ್‌ ಮೀಡಿಯಾದಲ್ಲಿನ ನಿಷೇಧವನ್ನು ತೆಗೆದುಹಾಕಲಾಯಿತಾದರೂ ಪ್ರತಿಭಟನೆ ಮುಂದುವರಿದಿದೆ. ಪ್ರತಿಭಟನಾಕಾರರು ನೇಪಾಳದ ಕೆಲವು ಉನ್ನತ ನಾಯಕರ ಮನೆಗಳಿಗೆ ಮತ್ತು ಸಂಸತ್ತಿನ ಕಟ್ಟಡಕ್ಕೆ ಬೆಂಕಿ ಹಚ್ಚಿದ್ದಾರೆ. ಕಠ್ಮಂಡುವಿನ ರಾಜಧಾನಿಯಲ್ಲಿರುವ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ ಮತ್ತು ಸೇನಾ ಹೆಲಿಕಾಪ್ಟರ್‌ಗಳು ಕೆಲವು ಸಚಿವರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ದಿವೆ.