ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Minister Eshwar Khandre: ಮೂರು ಎಕರೆಗಿಂತ ಒಳಗಿನ ಅರಣ್ಯ ಭೂ ಒತ್ತುವರಿದಾರರ ಹಿತ ರಕ್ಷಣೆಗೆ ಬದ್ಧ : ಸಚಿವ ಈಶ್ವರ ಖಂಡ್ರೆ

ಉತ್ತರಕನ್ನಡ ಮತ್ತು ಮಲೆನಾಡಿನ ಕೆಲವು ಪ್ರದೇಶದಲ್ಲಿ ಪ್ರತಿಶತ 80ರಷ್ಟು ಅರಣ್ಯ ಭೂಮಿ ಇರುವು ದರಿಂದ ಆ ಭಾಗದ ನೆರೆಸಂತ್ರಸ್ತರ ಪುನರ್ವಸತಿ, ವಸತಿ ಮತ್ತು ಜೀವನೋಪಾಯಕ್ಕೆ ಅಲ್ಲಿನ ಬಡಜನರು ಅರಣ್ಯ ಭೂಮಿಯನ್ನು ಅವಲಂಬಿಸುವುದು ಅನಿವಾರ್ಯವಾಗಿತ್ತು. ವಿವಿಧ ಯೋಜನೆಗಳಿಂದ ನಿರಾಶ್ರಿತರಾದವರ ಸಮಸ್ಯೆ ಮತ್ತು ಅಭಿವ್ರದ್ಧಿ ಕೆಲಸಗಳಿಗೆ ಅರಣ್ಯ ಭೂಮಿಯ ಅವಶ್ಯಕತೆ ಇರುವುದು ಕೂಡ ಸರ್ಕಾರದ ಗಮನದಲ್ಲಿದೆ

ಮೂರು ಎಕರೆಗಿಂತ ಒಳಗಿನ ಅರಣ್ಯ ಭೂ ಒತ್ತುವರಿದಾರರ ಹಿತ ರಕ್ಷಣೆಗೆ ಬದ್ಧ

-

Ashok Nayak Ashok Nayak Oct 10, 2025 11:31 PM

ಬೆಂಗಳೂರು: ಕಳೆದ 2005 ರ ಪೂರ್ವದಲ್ಲಿ ಮೂರು ಎಕರೆ ಒಳಗಿನ ಅರಣ್ಯ ಭೂಮಿಯಲ್ಲಿನ ಒತ್ತುವರಿದಾರರ ಹಿತರಕ್ಷಣೆಗೆ ಸರಕಾರ ಬದ್ಧವಾಗಿದೆ. ಆದರೆ ಮೂರು ಎಕರೆಗಿಂತ ಹೆಚ್ಚಿನ ಇತ್ತೀಚಿನ ಒತ್ತುವರಿಗಳಿಗೆ ರಕ್ಷಣೆ ನೀಡಲಾಗದು ಮತ್ತು ಹೊಸ ಒತ್ತುವರಿಗೆ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ (Minister Eshwar Khandre) ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾಂತ ಕೊಚರೇಕರ ನೇತೃತ್ವದ ನಿಯೋಗದಿಂದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಉತ್ತರಕನ್ನಡ ಮತ್ತು ಮಲೆನಾಡಿನ ಕೆಲವು ಪ್ರದೇಶದಲ್ಲಿ ಪ್ರತಿಶತ 80ರಷ್ಟು ಅರಣ್ಯ ಭೂಮಿ ಇರುವುದರಿಂದ ಆ ಭಾಗದ ನೆರೆಸಂತ್ರಸ್ತರ ಪುನರ್ವಸತಿ, ವಸತಿ ಮತ್ತು ಜೀವನೋಪಾಯಕ್ಕೆ ಅಲ್ಲಿನ ಬಡಜನರು ಅರಣ್ಯ ಭೂಮಿಯನ್ನು ಅವಲಂಬಿಸುವುದು ಅನಿವಾರ್ಯವಾಗಿತ್ತು. ವಿವಿಧ ಯೋಜನೆಗಳಿಂದ ನಿರಾಶ್ರಿತರಾದವರ ಸಮಸ್ಯೆ ಮತ್ತು ಅಭಿವ್ರದ್ಧಿ ಕೆಲಸಗಳಿಗೆ ಅರಣ್ಯ ಭೂಮಿಯ ಅವಶ್ಯಕತೆ ಇರುವುದು ಕೂಡ ಸರ್ಕಾರದ ಗಮನದಲ್ಲಿದೆ.

ಇದನ್ನೂ ಓದಿ: Eshwar Khandre: ಅರಣ್ಯಗಳಲ್ಲಿ ಹೊರ ರಾಜ್ಯದವರ ಜಾನುವಾರು ಮೇಯಿಸಲು ಮಾತ್ರ ನಿಷೇಧ: ಈಶ್ವರ ಖಂಡ್ರೆ ಸ್ಪಷ್ಟನೆ

ಆದ್ದರಿಂದ 2005 ರ ಪೂರ್ವದಿಂದ ಕೃಷಿ ಮತ್ತು ತೋಟಗಾರಿಕೆ ಇಲಾಖೆಯೊಂದಿಗೆ ಅರಣ್ಯ ಭೂಮಿಯಲ್ಲಿ ಬದುಕನ್ನು ಕಟ್ಟಿಕೊಂಡವರು ಆತಂಕ ಪಡುವ ಅಗತ್ಯವಿಲ್ಲ. ಸಣ್ಣ ಹಿಡುವಳಿ ದಾರರ ಹಿತರಕ್ಷಣೆ ಮಾಡಲಾಗುವುದು. ಆದರೆ ಅತಿಯಾದರೆ ಅಮೃತವೂ ವಿಷವಾಗುತ್ತದೆ ಎನ್ನುವ ಮೂಲಕ ಮೂರು ಎಕರೆಗಿಂತ ಹೆಚ್ಚಿನ ಒತ್ತುವರಿದಾರರಿಗೆ ಪರೋಕ್ಷ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ತಮ್ಮನ್ನು ಭೇಟಿಯಾದ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಮಂಕಾಳವೈದ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ, ಅರಣ್ಯ ಭೂಮಿಸಾಗುವಳಿದಾರರ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾಂತ ಕೊಚರೇಕರ ನೇತ್ರತ್ವದ ಜಂಟಿ ನಿಯೋಗದ ಅಹವಾಲು ಆಲಿಸಿದ ಬಳಿಕ ಅರಣ್ಯಭೂಮಿ ಸಕ್ರಮದ ಕುರಿತು ಸರ್ಕಾರದ ನಿಲುವನ್ನು ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.

ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾಂತ ಕೊಚರೇಕರ ಅವರು ಜಿಲ್ಲೆಯ ಅರಣ್ಯ ಭೂಮಿಯಲ್ಲಿನ ಸಣ್ಣ ಹಿಡುವಳಿದಾರರ 2005ರ ಪೂರ್ವದ ಒತ್ತುವರಿಯ ಸಕ್ರಮದ ಅಗತ್ಯದ ಕುರಿತು ವಿವರಿಸಿ, ಪ್ರತಿಶತ 84ರಷ್ಟು ಅರಣ್ಯ ಭೂಮಿ ಹೊಂದಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ನೆರೆಸಂತ್ರಸ್ತರ ಪುನರ್ವಸತಿಗೆ, ನಿವೇಶನರಹಿತರ ವಸತಿಗೆ, ಮತ್ತು ಬಡಜನರು ತಮ್ಮ ಜೀವನೋಪಾ ಯಕ್ಕೆ ಕ್ರಷಿ ಮತ್ತು ತೋಟಗಾರಿಕೆಗೆ ಅರಣ್ಯ ಭೂಮಿಯನ್ನು ಅವಲಂಬಿಸಿರುವ ಅನಿವಾರ್ಯ ಕಾರಣಗಳನ್ನು ವಿವರಿಸಿ ಸಣ್ಣ ಹಿಡುವಳಿದಾರರ ಒತ್ತುವರಿಯನ್ನು ಸಕ್ರಮ ಪಡಿಸಲು ಸರ್ಕಾರ ಇಚ್ಛಾಶಕ್ತಿ ತೋರಬೇಕು.

ಈ ದಿಸೆಯಲ್ಲಿ ನೈಜ ಸಮೀಕ್ಷೆಯಿಂದ 2005ರ ಪೂರ್ವದ ಒತ್ತುವರಿದಾರರಿಗೆ ಅರಣ್ಯ ಸಂರಕ್ಷಣಾ ಕಾಯ್ದೆ ಮತ್ತು ಅರಣ್ಯ ಹಕ್ಕು ಮಾನ್ಯತೆ ಕಾಯ್ದೆಯಡಿ ಭೂಮಿಯ ಹಕ್ಕು ನೀಡಲು ಪರಿಗಣಿಸಬೇಕು ಎಂದು ಅವರು ಸಚಿವರಲ್ಲಿ ಮನವಿ ಮಾಡಿದ್ದರು.

ನಿಯೋಗದಲ್ಲಿ ಮಾಜಿ ಜಿ.ಪಂ.ಸದಸ್ಯ ಮತ್ತು ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಜಿ.ಎಂ.ಶೆಟ್ಟಿ ಅಚಿವೆ ಸಂಚಾಲಕ ಪಿ.ಟಿ.ನಾಯ್ಕ, ಗಣೇಶ ಜಿ.ನಾಯ್ಕ, ಮತ್ತಿತರರು ಉಪಸ್ಥಿತರಿದ್ದರು.