ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಗಣೇಶ ಚತುರ್ಥಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ, ಪ್ರಾಣಿವಧೆ ಸಂಪೂರ್ಣ ನಿಷೇಧ

ಗಣೇಶ ಚತುರ್ಥಿ ಹಬ್ಬದ ದಿನದಂದು ಬೆಂಗಳೂರಿನಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಆದೇಶ ಹೊರಡಿಸಿದೆ. ಸೆಪ್ಟೆಂಬರ್ 14ರ ಸೋಮವಾರದಂದು ಹಬ್ಬದ ಆಚರಣೆ ನಡೆಯುವ ಹಿನ್ನಲೆಯಲ್ಲಿ ನಿಷೇಧಿಸಲಾಗಿದೆ.

ಗಣೇಶ ಚತುರ್ಥಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ, ಪ್ರಾಣಿವಧೆ ನಿಷೇಧ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Sep 12, 2026 10:47 AM

ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ದಿನದಂದು ಬೆಂಗಳೂರಿನಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಆದೇಶ ಹೊರಡಿಸಿದೆ. ಸೆಪ್ಟೆಂಬರ್ 14ರ ಸೋಮವಾರದಂದು ಹಬ್ಬದ ಆಚರಣೆ ನಡೆಯುವ ಹಿನ್ನಲೆಯಲ್ಲಿ ನಿಷೇಧಿಸಲಾಗಿದೆ. ಜಿಬಿಎ ವ್ಯಾಪ್ತಿಯ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವುದನ್ನು ಹಾಗೂ ಮಾಂಸದ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಹಬ್ಬದ ದಿನದಂದು ಸಾರ್ವಜನಿಕರು ಹಾಗೂ ವ್ಯಾಪಾರಿಗಳು ನಿಷೇಧದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಒಂದು ವೇಳೆ ಆದೇಶ ಉಲ್ಲಂಘಿಸಿ ಅಕ್ರಮವಾಗಿ ಪ್ರಾಣಿವಧೆ ಅಥವಾ ಮಾಂಸ ಮಾರಾಟ ಮಾಡಿದ್ದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬೆಂಗಳೂರಿನಲ್ಲಿ ಗಣೇಶ ವಿಸರ್ಜನೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಹೊರಡಿಸಿವೆ. ಪರಿಸರ ಮಾಲಿನ್ಯವನ್ನು ತಡೆಗಟ್ಟಲು ಈ ಬಾರಿ ಜಲಮೂಲಗಳ ರಕ್ಷಣೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಪ್ರಮುಖ ಕೆರೆಗಳ ಆವರಣದಲ್ಲಿ (ಉದಾಹರಣೆಗೆ ಹಲಸೂರು ಕೆರೆ, ಸ್ಯಾಂಕಿ ಕೆರೆ, ಯಡಿಯೂರು ಕೆರೆ, ಅಲ್ಲಾಲಸಂದ್ರ ಕೆರೆ) ಕೃತಕ ಕಲ್ಯಾಣಿಗಳನ್ನು ನಿರ್ಮಿಸಲಾಗಿದೆ. ಮೂರ್ತಿಗಳನ್ನು ನೇರವಾಗಿ ಕೆರೆಯ ನೀರಿಗೆ ಹಾಕುವಂತಿಲ್ಲ ಎಂದು ಆದೇಶಿಸಲಾಗಿದೆ.

Krishna Pingala Sankashti Chaturthi 2026: ಕೃಷ್ಣ ಪಿಂಗಳ ಸಂಕಷ್ಟ ಚತುರ್ಥಿ ಮಹತ್ವ, ಶುಭ ಮುಹೂರ್ತ, ಪೂಜಾ ವಿಧಾನ, ಮಂತ್ರಗಳು ಮತ್ತು ವ್ರತದ ಸಂಪೂರ್ಣ ಮಾಹಿತಿ ಇಲ್ಲಿದೆ

ಗೃಹಬಳಕೆಯ ಸಣ್ಣ ಗಣಪತಿ ಮೂರ್ತಿಗಳ ವಿಸರ್ಜನೆಗಾಗಿ ಬಿಬಿಎಂಪಿ ವಾರ್ಡ್‌ವಾರು ನೂರಾರು ಮೊಬೈಲ್ ಟ್ಯಾಂಕ್ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಇನ್ನು ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಮತ್ತು ರಾಸಾಯನಿಕ ಬಣ್ಣದ ಮೂರ್ತಿಗಳ ವಿಸರ್ಜನೆಗೆ ಜಲಮೂಲಗಳಲ್ಲಿ ಸಂಪೂರ್ಣ ನಿಷೇಧವಿದೆ. ಕೇವಲ ನೈಸರ್ಗಿಕ ಜೇಡಿಮಣ್ಣಿನ ಗಣಪತಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೆರೆಗಳ ಸುತ್ತಮುತ್ತ ಪಟಾಕಿ ಸಿಡಿಸುವುದು ಮತ್ತು ತಡರಾತ್ರಿ ಜೋರಾಗಿ ಡಿಜೆ/ಧ್ವನಿವರ್ಧಕ ಬಳಸಿ ಶಬ್ದ ಮಾಲಿನ್ಯ ಮಾಡುವುದನ್ನು ನಿರ್ಬಂಧಿಸಲಾಗಿದೆ.