ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಹುಲ್ ಗಾಂಧಿ ಅಸಂಬದ್ಧ, ಬೇಜವಾಬ್ದಾರಿಯ ಹೇಳಿಕೆ ಖಂಡನೀಯ: ಬಿ.ವೈ. ರಾಘವೇಂದ್ರ

BY Raghavendra: ಮೇಲಿಂದ ಮೇಲೆ ಚುನಾವಣಾ ಸೋಲುಗಳನ್ನು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಜನರ ಅಚಲ ನಂಬಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಾಗದೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮತ್ತೆ ತಮ್ಮ ಅದೇ ನಿಂದನೀಯ ಮತ್ತು ಬೇಜವಾಬ್ದಾರಿಯುತ ನಾಲಿಗೆಯನ್ನು ಹರಿ ಬಿಟ್ಟಿದ್ದಾರೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆ ಖಂಡನೀಯ: ಬಿ.ವೈ. ರಾಘವೇಂದ್ರ

ಸಂಸದ ಬಿ.ವೈ. ರಾಘವೇಂದ್ರ (ಸಂಗ್ರಹ ಚಿತ್ರ) -

Profile
Siddalinga Swamy May 21, 2026 5:27 PM

ಬೆಂಗಳೂರು, ಮೇ 21: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಸಂಬದ್ಧ ಬೇಜವಾಬ್ದಾರಿ ಹೇಳಿಕೆ ಖಂಡನೀಯ. ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಷ್ಟ್ರವನ್ನು ದುರ್ಬಲಗೊಳಿಸುವ ಅವರ ಕೀಳು ಪ್ರಯತ್ನವನ್ನು ದೇಶದ ಜನತೆ ಕ್ಷಮಿಸುವುದಿಲ್ಲ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ (BY Raghavendra) ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮೇಲಿಂದ ಮೇಲೆ ಚುನಾವಣಾ ಸೋಲುಗಳನ್ನು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಜನರ ಅಚಲ ನಂಬಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಾಗದೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೆ ತಮ್ಮ ಅದೇ ನಿಂದನೀಯ ಮತ್ತು ಬೇಜವಾಬ್ದಾರಿಯುತ ನಾಲಿಗೆಯನ್ನು ಹರಿಯ ಬಿಟ್ಟಿದ್ದಾರೆ ಎಂದು ಟೀಕಿಸಿದ್ದಾರೆ.

ವಿದೇಶಿ ನೆಲದಲ್ಲಿ ಭಾರತವನ್ನು ಪದೇ ಪದೇ ಅವಮಾನಿಸುವ ರಾಹುಲ್ ಗಾಂಧಿ ಅವರಿಗೆ, ದೇಶಭಕ್ತಿ ಅಥವಾ ಪ್ರಜಾಪ್ರಭುತ್ವದ ಬಗ್ಗೆ ಯಾರಿಗೂ ಉಪನ್ಯಾಸ ನೀಡುವ ನೈತಿಕ ಅಧಿಕಾರವೇ ಉಳಿದಿಲ್ಲ. ದಶಕಗಳಿಂದ ಸಂವಿಧಾನವನ್ನು ಯಾರು ದುರ್ಬಲಗೊಳಿಸಿದ್ದಾರೆಂದು ದೇಶದ ಜನರಿಗೆ ಚೆನ್ನಾಗಿ ತಿಳಿದಿದೆ. ಕಳೆದ ಹತ್ತು ವರ್ಷಗಳಿಂದ ಅದರ ಪಾವಿತ್ರ್ಯವನ್ನು ಪುನಃಸ್ಥಾಪಿಸಲು, ಬಡವರನ್ನು ಸಬಲೀಕರಣಗೊಳಿಸಲು ಮತ್ತು ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಕನಸನ್ನು ನನಸು ಮಾಡಲು ಅವಿಶ್ರಾಂತವಾಗಿ ಶ್ರಮಿಸಿದ ನಾಯಕತ್ವವನ್ನು ಅವರು ಗುರುತಿಸಿದ್ದಾರೆ ಮತ್ತು ಅದಕ್ಕಾಗಿಯೇ ಅವರು ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಸರ್ಕಾರವನ್ನು ಸತತ ಮೂರನೇ ಬಾರಿಗೆ ಜನಾದೇಶ ನೀಡಿ ಆಶೀರ್ವದಿಸಿದ್ದಾರೆ ಎಂದು ತಿಳಿಸಿದ್ದಾರೆ.‌

ಜನರ ಜೇಬಿಗೆ ಕತ್ತರಿ ಹಾಕುತ್ತಲೇ 3 ವರ್ಷ ಸವೆಸಿದ್ದು ಒಂದು ಸಾಧನೆಯೇ?: ಜೋಶಿ ಕಿಡಿ

ಇಡೀ ಜಗತ್ತೇ ಗಂಭೀರ ಜಾಗತಿಕ ಅಸ್ಥಿರತೆ ಮತ್ತು ಸಂಘರ್ಷವನ್ನು ಎದುರಿಸುತ್ತಿರುವ ಸೂಕ್ಷ್ಮ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತದ ರಾಷ್ಟ್ರೀಯ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಲು ಮುಂದೆ ನಿಂತು ದೇಶವನ್ನು ಮುನ್ನಡೆಸುತ್ತಿದ್ದಾರೆ. ಇಡೀ ದೇಶ ಮೋದಿ ಅವರ ನಿರ್ಣಾಯಕ ನಾಯಕತ್ವದ ಹಿಂದೆ ಒಗ್ಗಟ್ಟಾಗಿ ನಿಂತಿದ್ದರೂ, ಕೆಲವು ಸಂಕುಚಿತ ಮನಸ್ಸಿನ ನಾಯಕರು ತಮ್ಮ ರಾಜಕೀಯ ಲಾಭಕ್ಕಾಗಿ, ರಾಷ್ಟ್ರೀಯ ಏಕತೆಯನ್ನು ದುರ್ಬಲಗೊಳಿಸುವ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಲೇ ಇರುವುದು ಸರಿಯಲ್ಲ. ಭಾರತದ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಮತ್ತು ಅಂತಹ ಕೀಳು ರಾಜಕೀಯಕ್ಕೆ ಅವರೇ ಸೂಕ್ತ ಪ್ರತ್ಯುತ್ತರ ನೀಡುತ್ತಾರೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.