ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬರದ ನಡುವೆ ರಾಜ್ಯಕ್ಕೆ ಶಾಕ್; ತಮಿಳುನಾಡಿಗೆ ನಿತ್ಯ 4,000 ಕ್ಯುಸೆಕ್ ಕಾವೇರಿ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಶಿಫಾರಸು

Cauvery Water Dispute: ದೆಹಲಿಯಲ್ಲಿ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಆದೇಶದಿಂದಾಗಿ ಕರ್ನಾಟಕವು ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 4 ಸಾವಿರ ಕ್ಯೂಸೆಕ್‌ ನೀರು ಹರಿಸಬೇಕಾಗಿದೆ.

ತಮಿಳುನಾಡಿಗೆ ನಿತ್ಯ 4,000 ಕ್ಯುಸೆಕ್ ಕಾವೇರಿ ನೀರು ಹರಿಸಲು ನಿರ್ದೇಶನ

-

Prabhakara R
Prabhakara R Sep 24, 2026 3:38 PM

ನವದೆಹಲಿ: ಕಾವೇರಿ ನದಿ ನೀರು ಬಿಡುಗಡೆ (Cauvery Water Dispute) ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ತೀವ್ರ ಹಿನ್ನಡೆಯಾಗಿದೆ. ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 4,000 ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಗುರುವಾರ ಶಿಫಾರಸು ಮಾಡಿದೆ.

ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ಕರ್ನಾಟಕವು ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 4 ಸಾವಿರ ಕ್ಯೂಸೆಕ್‌ ನೀರು ಹರಿಸಬೇಕಾಗಿದೆ. ಈಗಾಗಲೇ ಬರದಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಈ ಆದೇಶ ಗಾಯದ ಮೇಲೆ ಬರೆ ಎಳೆದಿದೆ.

ಸಭೆಯಲ್ಲಿ ಕರ್ನಾಟಕದಿಂದ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಹಾಗೂ ತಮಿಳುನಾಡು ಅಧಿಕಾರಿಗಳು ಭಾಗಿಯಾಗಿದ್ದರು.

ಸುಪ್ರೀಂ ಕೋರ್ಟ್‌ನಲ್ಲೂ ನಿರಾಸೆ ರಾಜ್ಯಕ್ಕೆ ನಿರಾಸೆ

ಮತ್ತೊಂದೆಡೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್‌ನಲ್ಲೂ ನಿರಾಸೆಯಾಗಿದೆ. ತಮಿಳುನಾಡಿಗೆ ನೀರು ಹರಿಸುವ ಸಂಬಂಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಪಾಲಿಸುವಂತೆ ಕರ್ನಾಟಕಕ್ಕೆ ಸರ್ವೋಚ್ಚ ನ್ಯಾಯಾಲಯ ಸೂಚಿಸಿದೆ. ಇದೇ ವೇಳೆ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 12ಕ್ಕೆ ಮುಂದೂಡಿದೆ.

ಹಿಂದೆ ಪೂರೈಕೆಯಾಗದ ನೀರಿನ ಕೊರತೆಯನ್ನು ಭರ್ತಿ ಮಾಡಲು ನೀರು ಬಿಡುಗಡೆ ಕೋರಿ ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿತು. ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಸಂದೀಪ್ ಮೆಹ್ರಾ ಮತ್ತು ನ್ಯಾಯಮೂರ್ತಿ ವಿಜಯ್ ಬಿಷ್ಟೋಯ್ ಅವರಿದ್ದ ಪೀಠ ವಿಚಾರಣೆ ನಡೆಸಿ CWMA ಆದೇಶ ಪಾಲನೆಗೆ ಸೂಚನೆ ಕೊಟ್ಟಿದೆ.