ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Janivara Row: ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣದ ವಿಚಾರಣೆಗೆ ತನಿಖಾ ತಂಡ ರಚನೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಹಳ ಸ್ಪಷ್ಟವಾಗಿ ವಸ್ತ್ರ, ಸಂಹಿತೆಯ ಬಗ್ಗೆ ವಿವರಿಸಿದೆ. ಆದರೂ ಇಂತಹ ಘಟನೆ ನಡೆದಿರುವುದು ಉದ್ದೇಶ ಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಪ್ರಕರಣದ ತನಿಖೆಗಾಗಿ ತಂಡ ರಚಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜನಿವಾರ ತೆಗೆಸಿದ ಪ್ರಕರಣದ ವಿಚಾರಣೆಗೆ ತನಿಖಾ ತಂಡ ರಚನೆ

ಸಾಂದರ್ಭಿಕ ಚಿತ್ರ -

Prabhakara R
Prabhakara R Apr 24, 2026 10:53 PM

ಬೆಂಗಳೂರು: ಸಿಇಟಿ ಪರೀಕ್ಷೆ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಘಟನೆ (Janivara Case) ಕುರಿತು ವಿಚಾರಣೆ ನಡೆಸಲು ತನಿಖಾ ತಂಡ ರಚಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತನಿಖಾ ತಂಡ ರಚಿಸಲಾಗಿದೆ.

ಏಪ್ರಿಲ್ 23ರಂದು 2026 ನೇ ಸಾಲಿನ ಸಿಇಟಿ ಪರೀಕ್ಷೆಯನ್ನು ಭೌತಶಾಸ್ತ್ರ, ಮತ್ತು ರಸಾಯನಶಾಸ್ತ್ರ ವಿಷಯಗಳಿಗೆ ನಡೆಸಲಾಗಿದೆ. ಪರೀಕ್ಷೆಗೆ ನಿಗದಿಪಡಿಸಿದ 745 ಕೇಂದ್ರಗಳಲ್ಲಿ ಬೆಂಗಳೂರಿನ ಕೃಪಾನಿಧಿ ಪಿಯು ಕಾಲೇಜು ಸಹ ಒಂದು ಪರೀಕ್ಷಾ ಕೇಂದ್ರವಾಗಿದೆ. ಈ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಲು ಬಂದಿದ್ದ ಕೆಲವು ಅಭ್ಯರ್ಥಿಗಳ ಜನಿವಾರವನ್ನು ತೆಗೆಸಿ ನಂತರ ಪರೀಕ್ಷೆಗೆ ಅನುಮತಿ ನೀಡಿರುವುದು ಮಾಧ್ಯಮಗಳ ಮೂಲಕ ತಿಳಿದುಬಂದಿರುತ್ತದೆ.

ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಹಳ ಸ್ಪಷ್ಟವಾಗಿ ವಸ್ತ್ರ, ಸಂಹಿತೆಯ ಬಗ್ಗೆ ವಿವರಿಸಿದೆ. ಆದರೂ ಇಂತಹ ಘಟನೆ ನಡೆದಿರುವುದು ಉದ್ದೇಶ ಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಆದ್ದರಿಂದ ಈ ವಿಷಯ ಬಗ್ಗೆ ಹಿರಿಯ ಅಧಿಕಾರಿಗಳಿಂದ ವಿಚಾರಣೆ ನಡೆಸಿ ನಿಯಮಾನುಸಾರ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಕೋರಿದ್ದಾರೆ.

ಆದ್ದರಿಂದ ಈ ಘಟನೆಯ ಕುರಿತು ವಿಚಾರಣೆ ನಡೆಸುವ ಸಲುವಾಗಿ ಈ ಕೆಳಕಂಡ ಅಧಿಕಾರಿಗಳನ್ನೊಳಗೊಂಡ ತನಿಖಾ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ವಿಚಾರಣೆ ನಡೆಸಿ ಎರಡು ದಿನಗೊಳಗಾಗಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Janivara Row: ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ವಶಕ್ಕೆ

ತನಿಖಾ ಸಮಿತಿಯಲ್ಲಿ ಯಾರಿದ್ದಾರೆ?

  • ಬೆಂಗಳೂರು ನಗರ ಜಿಲ್ಲೆ ಅಪರ ಜಿಲ್ಲಾಧಿಕಾರಿಗಳು-ಅಧ್ಯಕ್ಷರು
  • ಬೆಂಗಳೂರು ದಕ್ಷಿಣ ವಲಯದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು-ಸದಸ್ಯ ಕಾರ್ಯದರ್ಶಿ
  • ಜಿಲ್ಲಾಧಿಕಾರಿಗಳ ಕಚೇರಿ ಕಚೇರಿ ಸಹಾಯಕರು-ಸದಸ್ಯ
  • ಬೆಂಗಳೂರು ದಕ್ಷಿಣ ತಾಲೂಕು ತಹಸೀಲ್ದಾರ್-ಸದಸ್ಯ