ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

DK Shivakumar: ಬಿಜೆಪಿಯವರು ಅತ್ಯಂತ ಪ್ರಾಮಾಣಿಕರಲ್ಲವೇ: ಡಿ.ಕೆ. ಶಿವಕುಮಾರ್ ಲೇವಡಿ

DK Shivakumar: ಬಿಜೆಪಿ ಶಾಸಕ ಲಂಚ ಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಿ ಬಿದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ ಎಂದು ಲೇವಡಿ ಮಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಬಿಜೆಪಿಯವರು ಅತ್ಯಂತ ಪ್ರಾಮಾಣಿಕರಲ್ಲವೇ: ಡಿಕೆಶಿ ಲೇವಡಿ

ಡಿಸಿಎಂ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ) -

Profile
Siddalinga Swamy Feb 21, 2026 8:59 PM

ಬೆಂಗಳೂರು, ಫೆ.21: ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಲೇವಡಿ ಮಾಡಿದ್ದಾರೆ. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಶಾಸಕ ಲಂಚ ಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಿ ಬಿದ್ದಿರುವ ಬಗ್ಗೆ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.

ಬಿಜೆಪಿಯವರು ಭ್ರಷ್ಟಾಚಾರಿಗಳಾಗಿರುವುದಿಲ್ಲವಲ್ಲವೇ. ನಿಮಗೆ ಯಾರೋ ತಪ್ಪು ಮಾಹಿತಿ ನೀಡಿರಬೇಕು. ಲೋಕಾಯುಕ್ತದವರು ಏನು ಹೇಳುತ್ತಾರೆ ಕಾದು ನೋಡೋಣ. ಆನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ ಎಂದು ನಯವಾಗಿ ಹರಿಹಾಯ್ದರು.

ಎಐ ಸಮ್ಮೇಳನದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯನ್ನು ದೇಶ ವಿರೋಧಿ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, ‘ಈ ವಿಚಾರವಾಗಿ ನಮ್ಮ ಪಕ್ಷದ ಹಿರಿಯ ನಾಯಕರ ನಿಲುವು ಏನೆಂದು ತಿಳಿದು, ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಮತದಾರರ ಪಟ್ಟಿ ದೋಷ ಸರಿಪಡಿಸಲು ಚುನಾವಣಾ ಆಯೋಗಕ್ಕೆ ಡಿ.ಕೆ. ಶಿವಕುಮಾರ್ ಸಲಹೆ

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಚುನಾವಣಾ ಮತದಾರರ ಪಟ್ಟಿಯಲ್ಲಿ ಲೋಪದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ಸರಿಪಡಿಸಲು ಬೀದಿವಾರು, ಮನೆವಾರು ಮ್ಯಾಪಿಂಗ್ ಮಾಡಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್, ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಮತದಾರರ ಪಟ್ಟಿಯಲ್ಲಿ ಒಂದೇ ಕುಟುಂಬದ ಮತದಾರರನ್ನು ಬೇರೆ ಬೇರೆ ಮತಗಟ್ಟೆಗಳು ಹಾಗೂ ಬೇರೆ ವಾರ್ಡ್ ಗಳಿಗೆ ವಿಂಗಡಿಸಲಾಗಿದೆ, ಮತದಾರರ ವಿಳಾಸದಲ್ಲಿ ಮನೆ ಸಂಖ್ಯೆ ತಪ್ಪಾಗಿರುವುದು, ರಸ್ತೆ ಸಂಖ್ಯೆ ತಪ್ಪಾಗಿ ನಮೂದಿಸಲಾಗಿದೆ. ಮತದಾರರ ಹೆಸರು ಎರಡು ಹಾಗೂ ಹೆಚ್ಚು ಬಾರಿ ಸೇರ್ಪಡೆ, ಮತ್ತೆ ಕೆಲವರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಇಷ್ಟೇ ಅಲ್ಲದೇ, ಕೆಲವು ಬೀದಿಗಳಲ್ಲಿ ಇರುವ ಮತದಾರರ ಹೆಸರುಗಳೇ ಪಟ್ಟಿಯಲ್ಲಿ ಕಣ್ಮರೆಯಾಗಿವೆ. ಮತ್ತೆ ಕೆಲವು ಮತದಾರರ ವಿಳಾಸ ಸರಿಯಾಗಿದ್ದರೂ ಅವರನ್ನು ಬೇರೆ ವಾರ್ಡ್‌ಗಳಿಗೆ ಹಾಕಲಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಈ ತಪ್ಪುಗಳು ಕಣ್ತಪ್ಪಿನಿಂದ ಆಗಿರುವಂತೆ ಕಾಣುತ್ತಿಲ್ಲ. ಉದ್ದೇಶಪೂರ್ವಕವಾಗಿ ಮತದಾರರು ಹಾಗೂ ಬಿಎಲ್ಒಗಳು, ರಾಜಕೀಯ ಪಕ್ಷಗಳಲ್ಲಿ ಗೊಂದಲ ಮೂಡಿಸಲು ವ್ಯವಸ್ಥಿತವಾಗಿ ನಡೆಸಿರುವಂತಿದೆ. ಇದರಿಂದ ಮತದಾರರ ಪಟ್ಟಿಯ ವಿಶ್ವಾಸಾರ್ಹತೆಗೆ ಧಕ್ಕೆಯುಂಟು ಮಾಡಲಿದೆ. ಈ ಪ್ರಮಾದಗಳನ್ನು ಪಾರದರ್ಶಕವಾಗಿ ಹಾಗೂ ಶಾಶ್ವತವಾಗಿ ಸರಿಪಡಿಸಬೇಕಾಗಿದೆ. ಹೀಗಾಗಿ ಬೀದಿವಾರು ಹಾಗೂ ಮನೆವಾರು ಮ್ಯಾಪಿಂಗ್ ಮಾಡುವ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು ಎಂದು ಆಯೋಗಕ್ಕೆ ನಿರ್ದೇಶನ ನೀಡುತ್ತೇನೆ ಎಂದು ಆಗ್ರಹಿಸಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾಗೆ ಈಗಲೇ ಸೋಲಿನ ಭೀತಿ ಕಾಡುತ್ತಿದೆ: ಡಿ.ಕೆ. ಶಿವಕುಮಾರ್ ವಾಗ್ದಾಳಿ

ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿರುವ ಎಲ್ಲ ಬೀದಿಗಳು, ಪ್ರತಿ ಬೀದಿಗಳಲ್ಲಿರುವ ಎಲ್ಲ ಮನೆಗಳು, ಪ್ರತಿ ಮನೆಯಲ್ಲಿರುವ ಎಲ್ಲ ಮತದಾರರನ್ನು ಮ್ಯಾಪಿಂಗ್ ಮಾಡಬೇಕು. ಇದರಿಂದ ಮತದಾರರ ಪಟ್ಟಿ ನಿಖರತೆ ಕಾಪಾಡಿ, ನಕಲಿ ಮತದಾರರನ್ನು ತೆಗೆಯಲು ಹಾಗೂ ಕೈಬಿಡಲಾಗಿರುವ ಮತದಾರರನ್ನು ಮತ್ತೆ ಸೇರಿಸಲು ನೆರವಾಗಲಿದೆ. ಅರ್ಹ ಮತದಾರರು ಮತದಾನದ ಅವಕಾಶದಿಂದ ವಂಚಿತರಾಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗವು ವಿಶೇಷವಾಗಿ ಪರಿಷ್ಕರಣ ಅಭಿಯಾನ ನಡೆಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.