Bowring Hospital wall collapse: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ; ಸಾವಿನ ಸಂಖ್ಯೆ 8ಕ್ಕೆ ಏರಿಕೆ, ಸ್ಥಳಕ್ಕೆ ಸಿಎಂ ಭೇಟಿ
Bengaluru Rains: ಬೆಂಗಳೂರಿನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದ ಘಟನೆಯಲ್ಲಿ ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹಲವರು ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ. -
ಬೆಂಗಳೂರು: ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯಲ್ಲಿ (Bowring Hospital wall collapse) ಬುಧವಾರ ಸಂಜೆ ಕಾಂಪೌಂಡ್ ಗೋಡೆ ಕುಸಿದು ನಡೆದ ದುರಂತದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಇನ್ನು ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ಘಟನೆಯ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.
ಕಾಂಪೌಂಡ್ ಗೋಡೆ ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟವರೆಲ್ಲ ಬೀದಿ ವ್ಯಾಪಾರಿಗಳು ಎಂದು ತಿಳಿದುಬಂದಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಅವರು, ಘಟನೆಯಲ್ಲಿ ಗಾಯಗೊಂಡಿರುವವರಿಗೆ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವೈದ್ಯರಿಗೆ ಸೂಚಿಸಿದ್ದಾರೆ.
ಅಧಿಕಾರಿಗಳಿಗೆ ಸಿಎಂ ತರಾಟೆ
ಹಳೆ ಗೋಡೆಯನ್ನು ತೆರವು ಮಾಡದೆ ಬಿಟ್ಟಿದ್ದು ಯಾಕೆ? ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ತರಾಟೆ ತೆಗೆದುಕೊಂಡಿದ್ದಾರೆ. ಚೀಫ್ ಎಂಜಿನಿಯರ್ ಯಾರು?, ಸ್ಥಳಕ್ಕೆ ಕರೆಸಿ ಎಂದು ಜಿಬಿಎ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಗೋಡೆ ಬಳಿ ಮಣ್ಣು ಹಾಕಿದ್ದರು, ಇದರಿಂದ ಗೋಡೆ ಕುಸಿದಿರಬಹುದು ಎಂದು ಅಧಿಕಾರಿಯೊಬ್ಬರು ಹೇಳಿದಾಗ, ಸ್ಥಳಕ್ಕೆ ಹೋಗಿ ನೋಡಬೇಕಿತ್ತು. ಇದೇ ರೀತಿನಾ ನೀವು ಕೆಲಸ ಮಾಡೋದು ಎಂದು ಸಿಎಂ ಗರಂ ಆಗಿದ್ದಾರೆ.
ಮುಂದಿನ 4 ದಿನ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!
ಬೆಂಗಳೂರಿನ ವಿವಿಧೆಡೆ ಮಳೆ ಆರ್ಭಟ
ನಗರದ ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೋರಮಂಗಲ, ಮಲ್ಲೇಶ್ವರಂ, ಶಿವಾನಂದ ಸರ್ಕಲ್, ಗುಟ್ಟಹಳ್ಳಿ, ವಸಂತನಗರ, ಶಾಂತಿನಗರ, ಆರ್.ಟಿ.ನಗರ, ಜಯನಗರ, ಜೆ.ಪಿ ನಗರ, ಹೆಬ್ಬಾಳ, ಶಿವಾಜಿ ನಗರ, ಬನಶಂಕರಿ, ಸದಾಶಿವನಗರ, ವಿಲ್ಸನ್ ಗಾರ್ಡನ್, ಲಾಲ್ ಬಾಗ್, ಡಬಲ್ ರೋಡ್, ರಿಚ್ಮಂಡ್ ಸರ್ಕಲ್ ಮತ್ತು ವಿಧಾನಸೌಧದ ಸುತ್ತಮುತ್ತ ಮಳೆ ಆರ್ಭಟಿಸಿದೆ.
ದಿಢೀರ್ ಸುರಿದ ಮಳೆಯಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಅಕಾಲಿಕ ಮಳೆ ಅಬ್ಬರಕ್ಕೆ ಕೆಲವೆಡೆ ಬೃಹತ್ ಮರಗಳು ಧರೆಗುರುಳಿವೆ. ಮರ ಬಿದ್ದು ಶೇಷಾದ್ರಿಪುರಂ-ಮಲ್ಲೇಶ್ವರಂ ರಸ್ತೆ ಬಂದ್ ಆಗಿದೆ. ಗೊರಗುಂಟೆಪಾಳ್ಯದಲ್ಲಿ ಭಾರಿ ಗಾಳಿ ಮಳೆಯಿಂದಾಗಿ ಮರ ಬಿದ್ದ ಹಿನ್ನೆಲೆ ರಸ್ತೆ ಬದಿ ನಿಲ್ಲಿಸಿದ್ದ ಕಾರು ಜಖಂಗೊಂಡಿದೆ.