ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bus fare hike: ನ.3 ರಂದು ಸಾರಿಗೆ ನಿಗಮಗಳೊಂದಿಗೆ ಸಭೆ, ಮೊದಲ ವಾರದಲ್ಲಿ ಬಸ್ ಪ್ರಯಾಣ ದರ ಏರಿಕೆ ನಿರ್ಧಾರ: ಬೈರತಿ ಸುರೇಶ್

ಕೇಂದ್ರ ಸರ್ಕಾರ ಕಳೆದ ಒಂದು ವರ್ಷದಲ್ಲಿ ಐದು ಬಾರಿ ಡೀಸೆಲ್ ಮತ್ತು ಇತರ ತೈಲೋತ್ಪನ್ನಗಳ ದರವನ್ನು ಹೆಚ್ಚಳ ಮಾಡಿದೆ. ಇದರಿಂದ ಸರ್ಕಾರದ ನಾಲ್ಕೂ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಆರ್ಥಿಕ ಹೊರೆಯನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿ ರಾಜ್ಯದ ಜನರಿಗೆ ಉತ್ತಮ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ದೃಷ್ಟಿಯಿಂದ ಈಗಾಗಲೇ ನಾವು ಬಸ್ ಪ್ರಯಾಣದ ದರ ಹೆಚ್ಚಳ ಮಾಡಬೇಕೆಂದು ತೀರ್ಮಾನ ಮಾಡಿದ್ದೇವೆ

ನವೆಂಬರ್ ಮೊದಲ ವಾರದಲ್ಲಿ ಬಸ್ ಪ್ರಯಾಣ ದರ ಏರಿಕೆ ನಿರ್ಧಾರ

-

Profile
Ashok Nayak Oct 29, 2026 7:45 PM

ಬೆಂಗಳೂರು: ನವೆಂಬರ್ ತಿಂಗಳ ಮೊದಲ ವಾರದಲ್ಲಿ ಸರ್ಕಾರಿ ಬಸ್ ಪ್ರಯಾಣ ದರ(Bus fare Hike) ಹೆಚ್ಚಳ ಮಾಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ (Byrati Suresh) ತಿಳಿಸಿದ್ದಾರೆ.

ಗುರುವಾರ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ವಿಚಾರದ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಕಳೆದ ಒಂದು ವರ್ಷದಲ್ಲಿ ಐದು ಬಾರಿ ಡೀಸೆಲ್ ಮತ್ತು ಇತರ ತೈಲೋತ್ಪನ್ನಗಳ ದರವನ್ನು ಹೆಚ್ಚಳ ಮಾಡಿದೆ. ಇದರಿಂದ ಸರ್ಕಾರದ ನಾಲ್ಕೂ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಆರ್ಥಿಕ ಹೊರೆಯನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿ ರಾಜ್ಯದ ಜನರಿಗೆ ಉತ್ತಮ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ದೃಷ್ಟಿಯಿಂದ ಈಗಾಗಲೇ ನಾವು ಬಸ್ ಪ್ರಯಾಣದ ದರ ಹೆಚ್ಚಳ ಮಾಡಬೇಕೆಂದು ತೀರ್ಮಾನ ಮಾಡಿದ್ದೇವೆ. ಅದರಂತೆ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(D K Shivakumar) ಅವರು ಈ ಬಗ್ಗೆ ಎಲ್ಲಾ ಸಚಿವರ ಜೊತೆ ಚರ್ಚೆ ನಡೆಸಿದರು ಎಂದು ಸುರೇಶ್ ಹೇಳಿದರು.

ಇದನ್ನೂ ಓದಿ: Bus Fare Hike: ರಾಜ್ಯದ ಜನತೆಗೆ ಶೀಘ್ರದಲ್ಲೇ ಬಸ್ ಟಿಕೆಟ್‌ ದರ ಏರಿಕೆ ಶಾಕ್‌; ಸಾರಿಗೆ ಸಚಿವ ಬೈರತಿ ಸುರೇಶ್ ಸುಳಿವು!

ದರ ಏರಿಕೆ ಇಲಾಖೆಗೆ ಹೊಣೆ

ಎಲ್ಲಾ ಸಚಿವರ ಅಭಿಪ್ರಾಯ ಪಡೆದ ನಂತರ ಮುಖ್ಯಮಂತ್ರಿಗಳು ಪ್ರಯಾಣ ದರ ಏರಿಕೆ ಮಾಡುವ ನಿರ್ಧಾರವನ್ನು ನಮ್ಮ ಸಾರಿಗೆ ಇಲಾಖೆಗೇ ವಹಿಸಿದ್ದಾರೆ ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿಗಳು ನೀಡಿರುವ ಜವಾಬ್ದಾರಿ ಹಿನ್ನೆಲೆಯಲ್ಲಿ ನವೆಂಬರ್ 3 ರಂದು ಎಲ್ಲಾ ನಾಲ್ಕೂ ಸಾರಿಗೆ ನಿಗಮಗಳ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ನವೆಂಬರ್ 4 ರಂದು ಈ ಬಗ್ಗೆ ಅಂತಿಮ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ವಿಪಕ್ಷಗಳ ಷಡ್ಯಂತ್ರ

ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದಂತೆ ಸ್ಟಿಂಗ್ ಆಪರೇಷನ್ ಪ್ರಕರಣದ ಬಗ್ಗೆ ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದ ಸಾರಿಗೆ ಸಚಿವ ಬೈರತಿ ಸುರೇಶ್, ಇದು ವಿರೋಧ ಪಕ್ಷಗಳ ಷಡ್ಯಂತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ನಾಡು ಕಂಡ ಧೀಮಂತ ನಾಯಕ ಸಿದ್ದರಾಮಯ್ಯ(Siddaramaiah). ಅವರನ್ನು ತೇಜೋವಧೆ ಮಾಡಬೇಕೆಂಬ ಉದ್ದೇಶದಿಂದ ವಿರೋಧ ಪಕ್ಷದವರು ಷಡ್ಯಂತ್ರ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರದು ಯಾವುದೇ ತಪ್ಪಿಲ್ಲ. ಅವರು ನಿಷ್ಕಳಂಕಿತರು ಎಂಬುದು ಸಾಬೀತಾಗಿದೆ ಎಂದರು.

ಈ ಬಗ್ಗೆ ಪಾರದರ್ಶಕವಾದ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ ಎಂದೂ ಅವರು ಹೇಳಿದರು.