ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೆಂಗಳೂರಿನಲ್ಲಿ ಲೆಕ್ಚರರ್‌ ಕಿರುಕುಳಕ್ಕೆ ಬೇಸತ್ತು ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರಿನ ಬೊಮ್ಮನಹಳ್ಳಿಯ ಆಕ್ಸ್‌ಫರ್ಡ್ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜಿನಲ್ಲಿ ಲೆಕ್ಚರರ್‌ ಕಿರುಕುಳದಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಶರಣಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಲೆಕ್ಚರರ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿನಿಯ ಪೋಷಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದಾರೆ.

ಲೆಕ್ಚರರ್‌ ಕಿರುಕುಳಕ್ಕೆ ಬೇಸತ್ತು ಡೆಂಟಲ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಯಶಸ್ವಿನಿ. -

Prabhakara R
Prabhakara R Jan 9, 2026 2:57 PM

ಬೆಂಗಳೂರು: ಡೆಂಟಲ್‌ ಕಾಲೇಜಿನಲ್ಲಿ ಲೆಕ್ಚರರ್‌ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ (23) ನೇಣಿಗೆ ಶರಣಾಗಿದ್ದಾಳೆ. ಪರಿಮಳ ಹಾಗೂ ಭೂದೇವಯ್ಯ ದಂಪತಿಯ ಏಕೈಕ ಪುತ್ರಿಯಾಗಿರುವ ಯಶಸ್ವಿನಿ ಮೃತ ವಿದ್ಯಾರ್ಥಿನಿ.

ಕಾಲೇಜಿನಲ್ಲಿ ಲೆಕ್ಚರರ್‌ ಕಿರುಕುಳದಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಶರಣಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಬೊಮ್ಮನಹಳ್ಳಿಯ ಆಕ್ಸ್‌ಫರ್ಡ್ ಡೆಂಟಲ್ ಕಾಲೇಜಿನ ವಿದ್ಯಾರ್ಥಿಯಾಗಿರುವ ಯಶಸ್ವಿನಿ, ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿ ವಿಭಾಗದಲ್ಲಿ ಮೂರನೇ ವರ್ಷದ ವಿದ್ಯಾರ್ಥಿನಿಯಾಗಿ ಓದುತ್ತಿದ್ದಳು.

ಕಣ್ಣು ನೋವಾಗಿದ್ದರಿಂದ ಯಶಸ್ವಿನಿ ಬುಧವಾರ ಕಾಲೇಜಿಗೆ ರಜೆ ಹಾಕಿದ್ದಳು. ಗುರುವಾರ ಕಾಲೇಜಿಗೆ ಹೋದಾಗ ವಿದ್ಯಾರ್ಥಿಗಳ ಮುಂದೆ ಆಕೆಗೆ ಅವಮಾನ ಮಾಡಲಾಗಿದೆ. ಕಣ್ಣಿಗೆ ಯಾವ ಡ್ರಾಪ್ಸ್ ಬಳಸಿದೆ, ಎಷ್ಟು ಹನಿ ಹಾಕಿಕೊಂಡೆ ಎಂದು ಪ್ರಶ್ನಿಸಿದ್ದಾರೆ. ಇಡೀ ಬಾಟಲಿ ಸುರಿದುಕೊಂಡಾ ಎಂದು ಉಪನ್ಯಾಸಕ ಅವಮಾನಿಸಿದ್ದಾರೆ. ಅಲ್ಲದೇ ಸೆಮಿನಾರ್‌ಗೆ ಅವಕಾಶ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ ಮನನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಾಯಿ ಪರಿಮಳ ಆರೋಪಿಸಿದ್ದಾರೆ.

Self Harming: ಇನ್ನೊಬ್ಬ ಪೇದೆಯಿಂದ ಕಿರುಕುಳ, ಪೊಲೀಸ್‌ ಪೇದೆ ಆತ್ಮಹತ್ಯೆ

ಕಿರುಕುಳ ಕೊಟ್ಟ ಲೆಕ್ಚರರ್‌ ಹಾಗೂ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಶವಾಗಾರದ ಮುಂದೆ ಯಶಸ್ವಿನಿ ಪೋಷಕರ ಜತೆಗೆ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ.

ಖಾಸಗಿ ಶಾಲೆ ಸಿಬ್ಬಂದಿಯಿಂದಲೇ 4 ಕೋಟಿ ರೂ. ವಂಚನೆ: ಇಬ್ಬರ ಬಂಧನ

ಬೆಂಗಳೂರು: ನಗರದ ಖಾಸಗಿ ಶಾಲೆಯಲ್ಲಿ 4 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಾಗರ್ ಮತ್ತು ಮನೋಜ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಶಾಲೆಗೆ ಆರೋಪಿಗಳು 2017ರಿಂದ 4 ಕೋಟಿ ರೂ. ವಂಚಿಸಿದ್ದರು. ವಿದ್ಯಾರ್ಥಿಗಳ ಶುಲ್ಕದ ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದರು. ಶಾಲೆ ಮತ್ತು ಟ್ರಸ್ಟ್‌ನಲ್ಲಿ ಅಕೌಂಟೆಂಟ್‌, ಟ್ರಾನ್ಸ್‌ಪೋರ್ಟ್ ಇನ್‌ಚಾರ್ಜ್ ಆಗಿದ್ದ ಸಾಗರ್, ಮುರುಳಿ, ಮನೋಜ್, ಮೋಹನ್ ಮತ್ತು ಕಿಶೋರ್ ಎಂಬುವವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸಿಸಿಬಿಗೆ ದೂರು ನೀಡಿದ್ದರು. ದೂರಿನಡಿ ಎಫ್‍ಐಆರ್ ದಾಖಲಿಸಿಕೊಂಡು, ಸಾಗರ್ ಮತ್ತು ಮನೋಜ್‍ನನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಲಾಗುತ್ತಿದೆ.