ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಫೇಸ್‌ಬುಕ್ ಖಾತೆಗಳ ವಿರುದ್ಧ FIR
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಕೆಲವು ಫೇಸ್‌ಬುಕ್ ಖಾತೆಗಳ ನಿರ್ವಾಹಕರ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (CM DK Shivakumar) ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಕೆಲವು ಫೇಸ್‌ಬುಕ್ ಖಾತೆಗಳ ನಿರ್ವಾಹಕರ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಜೂನ್ 20ರಂದು ವಕೀಲ ದೀಪು ಸಿ.ಆರ್. ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ.
ಎಫ್‌ಐಆರ್ ಪ್ರಕಾರ, ಜೂನ್ 17ರಂದು 'Kumaraswamy for CM' ಹಾಗೂ 'Janata Dal Secular' ಹೆಸರಿನ ಫೇಸ್‌ಬುಕ್ ಖಾತೆಗಳಲ್ಲಿ "ಹಳೆಯ ಚಾಳಿ ಮತ್ತೆ ಆರಂಭ; ಹುಟ್ಟುಗುಣ ಸುಟ್ಟಲೂ ಹೋಗಲ್ಲ ಎಂಬ ಶೀರ್ಷಿಕೆಯಡಿ ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿ ಹಾಗೂ ಸುಳ್ಳು ಮಾಹಿತಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 192ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪೋಸ್ಟ್‌ಗಳ ಮೂಲ, ಅವುಗಳನ್ನು ಪ್ರಕಟಿಸಿದ ವ್ಯಕ್ತಿಗಳು ಹಾಗೂ ಅದರ ಹಿಂದಿರುವ ಉದ್ದೇಶದ ಕುರಿತು ತನಿಖೆ ಆರಂಭಿಸಿದ್ದಾರೆ. ಇದೇ ವೇಳೆ ಈ ಸಾಮಾಜಿಕ ಜಾಲತಾಣ ಖಾತೆಗಳ ನಿರ್ವಾಹಕರನ್ನು ಗುರುತಿಸುವ ಕಾರ್ಯವನ್ನು ಮುಂದುವರೆಸಿದ್ದಾರೆಂದು ತಿಳಿದುಬಂದಿದೆ.
ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಆಕ್ಷೇಪಾರ್ಹ ಹೇಳಿಕೆಗಳೊಂದಿಗೆ ಬಿಜೆಪಿ ಮುಖಂಡರ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದತಿ ಕೋರಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
Bidadi Township: ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ. ಶಿವಕುಮಾರ್
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಸಾಮಾಜಿಕ ಜಾಲತಾಣ ಖಾತೆಯ ಮೂಲಕ ಆಕ್ಷೇಪಾರ್ಹ ಪೋಸ್ಟ್ಗಳನ್ನು ಹಾಕಲಾಗಿದೆ ಎಂಬ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದೆ. ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರು ಪೋಸ್ಟ್ ಅಪ್ಲೋಡ್ ಮಾಡಿದ್ದಾರೆ. ಆದರೆ, ಅರ್ಜಿದಾರರು ಕೆಪಿಸಿಸಿ ಅಧ್ಯಕ್ಷರಾಗಿದ್ದ ಪರಿಣಾಮ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಅರ್ಜಿದಾರರ ವಾದವನ್ನು ಪುರಸ್ಕರಿಸಿದ ನ್ಯಾಯಪೀಠ, ಪ್ರಕರಣ ರದ್ದುಪಡಿಸಿ ಆದೇಶಿಸಿದೆ.