ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಕೆಶಿ

ಬೆಂಗಳೂರಿನಲ್ಲಿ ನಡೆದ ಮೊದಲ ಆವೃತ್ತಿಯ ಕ್ವಾಂಟಮ್ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಬಹಳ ಸಂತೋಷವಾಗಿದೆ. ತಂತ್ರಜ್ಞಾನವೇ ಭವಿಷ್ಯ. ಕರ್ನಾಟಕ ಅತ್ಯಂತ ಪ್ರತಿಭಾವಂತ ಮಾನವ ಸಂಪನ್ಮೂಲ ಹೊಂದಿರುವ ರಾಜ್ಯ. ಇಲ್ಲಿನ ಮಾನವ ಸಂಪನ್ಮೂಲಕ್ಕೆ ದೇಶದ ಯಾವುದೇ ಇತರ ನಗರಗಳು ಅಥವಾ ರಾಜ್ಯ ಪೈಪೋಟಿ ನೀಡಲು ಸಾಧ್ಯವಿಲ್ಲ. ನಾವು ನಮ್ಮ ನೆರೆ ರಾಜ್ಯಗಳ ಜತೆಗೆ ಮಾತ್ರ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಬೇರೆ ದೇಶಗಳ ಜತೆ ಸ್ಪರ್ಧೆ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿ: ಡಿಕೆಶಿ ಭವಿಷ್ಯ

Profile Siddalinga Swamy Jul 31, 2025 6:23 PM

ಬೆಂಗಳೂರು: ಬೆಂಗಳೂರಿನಲ್ಲಿ ಕ್ವಾಂಟಮ್ ಕ್ಲಸ್ಟರ್ ಆರಂಭಿಸಲಾಗುತ್ತಿದ್ದು, ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಕ್ವಾಂಟಮ್ ಇಂಡಿಯಾ ಬೆಂಗಳೂರು ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದ ಅವರು, ಮೊದಲ ಆವೃತ್ತಿಯ ಕ್ವಾಂಟಮ್ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಬಹಳ ಸಂತೋಷವಾಗಿದೆ. ತಂತ್ರಜ್ಞಾನವೇ ಭವಿಷ್ಯ. ಕರ್ನಾಟಕ ಅತ್ಯಂತ ಪ್ರತಿಭಾವಂತ ಮಾನವ ಸಂಪನ್ಮೂಲ ಹೊಂದಿರುವ ರಾಜ್ಯ. ಇಲ್ಲಿನ ಮಾನವ ಸಂಪನ್ಮೂಲಕ್ಕೆ ದೇಶದ ಯಾವುದೇ ಇತರೆ ನಗರಗಳು ಅಥವಾ ರಾಜ್ಯ ಪೈಪೋಟಿ ನೀಡಲು ಸಾಧ್ಯವಿಲ್ಲ. ನಾವು ನಮ್ಮ ನೆರೆ ರಾಜ್ಯಗಳ ಜತೆಗೆ ಮಾತ್ರ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಬೇರೆ ದೇಶಗಳ ಜತೆ ಸ್ಪರ್ಧೆ ಮಾಡುತ್ತಿದ್ದೇವೆ ಎಂದು ಹೇಳಿದರು.

ನಾವು ಬೆಂಗಳೂರಿನಲ್ಲಿ ಭದ್ರ ಬುನಾದಿ ನಿರ್ಮಿಸಿದ್ದು, ಹೀಗಾಗಿ ವಿಶ್ವದ ಎಲ್ಲ ಕಡೆಯಿಂದ ಜನರು ಇಲ್ಲಿಗೆ ಆಕರ್ಷಿತರಾಗಿ ಬರುತ್ತಿದ್ದಾರೆ. ನಿಮಗೆ ಅಗತ್ಯವಿರುವ ಬೆಂಬಲವನ್ನು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. 20 ವರ್ಷಗಳ ಹಿಂದೆ ಎಸ್.ಎಂ. ಕೃಷ್ಣ ಅವರ ಸರ್ಕಾರದಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ನೂತನ ಐಟಿ ನೀತಿ ಜಾರಿಗೆ ತಂದೆವು. ಅದರ ಪರಿಣಾಮವಾಗಿ ಇಂದು ಬೆಂಗಳೂರು ಬೆಳೆದಿದೆ. ವಿಶ್ವ ಬೆಂಗಳೂರಿನತ್ತ ತಿರುಗಿ ನೋಡುತ್ತಿದೆ. ಇದು ನಮ್ಮ ಶಕ್ತಿ ಎಂದು ಹೇಳಿದರು.

ನಮ್ಮ ಎರಡು ಹಾಗೂ ಮೂರನೇ ಹಂತದ ನಗರಗಳು ಕೂಡ ಅತ್ಯುತ್ತಮ ಮಾನವ ಸಂಪನ್ಮೂಲ ಹಾಗೂ ಮೂಲಸೌಕರ್ಯ ನೀಡಲಿದ್ದು, ನೀವು ಈ ಭಾಗಗಳತ್ತ ಗಮನಹರಿಸಬಹುದು. ನಮ್ಮ ರಾಜ್ಯದಲ್ಲಿ ಸುಮಾರು 300ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳಿವೆ. ದಶಕಗಳ ಹಿಂದೆಯೇ ಭಾರತೀಯ ವಿಜ್ಞಾನ ಸಂಸ್ಥೆ ನಮ್ಮಲ್ಲಿ ಆರಂಭವಾಗಿತ್ತು. ಜವಾಹರ್ ಲಾಲ್ ನೆಹರೂ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಾರ್ವಜನಿಕ ಉದ್ದಿಮಗಳನ್ನು ಆರಂಭಿಸಿ ಹೊಸ ಕ್ರಾಂತಿ ಆರಂಭಿಸಲಾಯಿತು. ಹೀಗಾಗಿ ನಾವು ಬಲಿಷ್ಠವಾಗಿ ಬೆಳೆದಿದ್ದೇವೆ ಎಂದರು.

ಈ ಸುದ್ದಿಯನ್ನೂ ಓದಿ | Bengaluru News: ಅಖಿಲ ಭಾರತ ಕರಾಟೆ ಸ್ಪರ್ಧೆಯಲ್ಲಿ ಸುಡೋಕನ್ ಮಾರ್ಷಲ್ ಆರ್ಟ್ಸ್ ಅಕಾಡೆಮಿಗೆ ಚಾಂಪಿಯನ್‌ಶಿಪ್

ನಾವೆಲ್ಲರೂ ಸೇರಿ ಇಂದಿನಿಂದಲೇ ಕ್ವಾಂಟಮ್ ಯುಗದತ್ತ ಸಾಗೋಣ. ಈ ಕ್ಷೇತ್ರದಿಂದ ಸಾರ್ವಜನಿಕರ ಉದ್ದೇಶ ಈಡೇರಲಿ. ನಾವೆಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡೋಣ, ತಂತ್ರಜ್ಞಾನ ಆವಿಷ್ಕಾರದಲ್ಲಿ ಮುಂದೆ ಸಾಗೋಣ. ನಿಮಗೆ ಶಕ್ತಿ ತುಂಬುವಂತಹ ನೀತಿಗಳನ್ನು ನಮ್ಮ ಸರ್ಕಾರ ರೂಪಿಸಲಿದೆ. ಈ ಮೂಲಕ ಬೆಂಗಳೂರಿನಲ್ಲಿ ಹೊಸ ಕ್ರಾಂತಿಗೆ ಸಿದ್ಧರಾಗೋಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಕರೆ ನೀಡಿದರು.