ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ ಎಂದ ಡಿ.ಕೆ.ಶಿವಕುಮಾರ್

DK Shivakumar: ಈ ಹಿಂದೆ ನನ್ನ ಮೇಲೂ ಇಡಿ ಪ್ರಕರಣ ದಾಖಲಿಸಿತ್ತು. ಅದು ಏನಾಯ್ತು? ನಮ್ಮ ರಕ್ಷಣೆಗೆ ಯಾರೂ ಬರಲಿಲ್ಲ. ಕೊನೆಗೆ ನಮಗೆ ರಕ್ಷಣೆ ನೀಡಿದ್ದು ನ್ಯಾಯಾಂಗ ವ್ಯವಸ್ಥೆ. ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನ ಬಂದಾಗ ಅವರನ್ನು ಭೇಟಿ ಮಾಡುವುದು ಸಹಜ. ಇಡಿ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಲು ಸುರೇಶ್ ತಯಾರಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ ಎಂದ ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್.

Profile Siddalinga Swamy Jun 23, 2025 5:03 PM

ಬೆಂಗಳೂರು: ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ. ಯಾರದ್ದೋ ಹೇಳಿಕೆ ಮೇಲೆ ಡಿ.ಕೆ. ಸುರೇಶ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ. ಇದನ್ನು ಮಾಧ್ಯಮಗಳು ವೈಭವೀಕರಿಸುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ತಿಳಿಸಿದರು. ಐಶ್ವರ್ಯಾ ಗೌಡ ಅವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಸುರೇಶ್ ಅವರನ್ನು ಇಡಿ ವಿಚಾರಣೆ ಕರೆದಿರುವ ಬಗ್ಗೆ ಸದಾಶಿವನಗರ ನಿವಾಸದ ಬಳಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.

ಈ ಹಿಂದೆ ನನ್ನ ಮೇಲೂ ಇಡಿ ಪ್ರಕರಣ ದಾಖಲಿಸಿತ್ತು. ಅದು ಏನಾಯ್ತು? ನಮ್ಮ ರಕ್ಷಣೆಗೆ ಯಾರೂ ಬರಲಿಲ್ಲ. ಕೊನೆಗೆ ನಮಗೆ ರಕ್ಷಣೆ ನೀಡಿದ್ದು ನ್ಯಾಯಾಂಗ ವ್ಯವಸ್ಥೆ. ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನ ಬಂದಾಗ ಅವರನ್ನು ಭೇಟಿ ಮಾಡುವುದು ಸಹಜ. ಇಡಿ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಲು ಸುರೇಶ್ ತಯಾರಿದ್ದಾರೆ. ಮಾಧ್ಯಮಗಳು ಹೆಚ್ಚು ಆದ್ಯತೆ ನೀಡಬೇಕಾದ ಪ್ರಕರಣಗಳನ್ನು ಬಿಟ್ಟು, ಇದನ್ನು ಹೆಚ್ಚು ಬಿಂಬಿಸಲು ಮುಂದಾಗಿದ್ದೀರಿ. ಇದರ ಅಗತ್ಯವಿಲ್ಲ ಎಂದು ತಿಳಿಸಿದರು.

ಶಾಸಕ ಬಿ.ಆರ್. ಪಾಟೀಲ್ ಅವರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಕೂಡ ಅಧಿಕಾರಿಗಳು ಹಣ ಪಡೆದಿದ್ದಾರೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, ʼನಾನು ಈ ವಿಚಾರವಾಗಿ ಏನು ಹೇಳಬೇಕೋ ಹೇಳಿದ್ದೇನೆ. ಉಳಿದಂತೆ ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ವಸತಿ ಸಚಿವರು ಸ್ಪಷ್ಟನೆ ನೀಡುತ್ತಾರೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Karnataka Rains: ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ಅಬ್ಬರಿಸಲಿದೆ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ಶಾಸಕರ ಗಮನಕ್ಕೆ ಬಾರದೇ ಅನುದಾನ ತೆಗೆದುಕೊಂಡು ಹೋಗಲಾಗುತ್ತಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, ʼಈ ವಿಚಾರವಾಗಿ ಯಾರು ಏನು ಹೇಳಿದ್ದಾರೆ ಎಂದು ನನಗೆ ಮಾಹಿತಿ ಇಲ್ಲʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.