ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪ್ರಮಾಣವಚನಕ್ಕೂ ಮುನ್ನಾ ದೇವೇಗೌಡ, ಯಡಿಯೂರಪ್ಪರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಡಿಕೆಶಿ

DK Shivakumar oath ceremony: ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ 4.05ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ಡಿಕೆಶಿ ಅವರೊಂದಿಗೆ 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ದೇವೇಗೌಡ, ಯಡಿಯೂರಪ್ಪರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಡಿಕೆಶಿ

ಎಚ್‌.ಡಿ.ದೇವೇಗೌಡ ಮತ್ತು ಬಿ.ಎಸ್‌.ಯಡಿಯೂರಪ್ಪ ಅವರ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್.‌ -

Prabhakara R
Prabhakara R Jun 3, 2026 2:13 PM

ಬೆಂಗಳೂರು: ನೂತನ ಸಿಎಂ ಆಗಿ ಪ್ರಮಾಣ (DK Shivakumar oath ceremony) ಸ್ವೀಕರಿಸುವುದಕ್ಕೂ ಮುನ್ನ ಡಿ.ಕೆ.ಶಿವಕುಮಾರ್ ಅವರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಬಿಜೆಪಿ ನಾಯಕ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬುಧವಾರ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಇದೇ ವೇಳೆ ರಾಜ್ಯದ ಹಿರಿಯ ರಾಜಕೀಯ ನಾಯಕರನ್ನು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬರುವಂತೆ ಡಿಕೆಶಿ ಆಹ್ವಾನಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ 4.05ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ಡಿಕೆಶಿ ಅವರೊಂದಿಗೆ 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.



ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿ ವಿವಿಧ ಗಣ್ಯರು ಆಗಮಿಸಲಿದ್ದಾರೆ.