ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಶ್ರೀ ಅಖಿಲ ಹವ್ಯಕ ಮಹಾಸಭಾ ಅಧ್ಯಕ್ಷರಾಗಿ ಡಾ.ಗಿರಿಧರ ಕಜೆ 12ನೇ ಬಾರಿ ಪುನರಾಯ್ಕೆ

Dr Giridhara Kaje: ಕಾರ್ಯಕ್ರಮಗಳು ಹೆಚ್ಚಾಗಿ ನಡೆದಾಗ ಸಮಾಜವು ನಮ್ಮನ್ನು ಗುರುತಿಸುತ್ತದೆ ಹಾಗೂ ನಾವು ಹೆಚ್ಚು ಜನರನ್ನು ತಲುಪಲು ಸಾಧ್ಯ. ಹವ್ಯಕ ಮಹಾಸಭೆಯು ಈ ದಿಸೆಯಲ್ಲಿ ಪ್ರಾದೇಶಿಕವಾಗಿಯೂ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಜಾತಿಯನ್ನೂ ಮೀರಿ ಸಮಷ್ಟಿ ಸಮಾಜಕ್ಕೆ ಉಪಕಾರಿಯಾದ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ಡಾ. ಗಿರಿಧರ ಕಜೆ ತಿಳಿಸಿದ್ದಾರೆ.

ಅಖಿಲ ಹವ್ಯಕ ಮಹಾಸಭಾ ಅಧ್ಯಕ್ಷರಾಗಿ ಡಾ.ಗಿರಿಧರ ಕಜೆ ಪುನರಾಯ್ಕೆ

-

Profile
Siddalinga Swamy Oct 2, 2026 7:30 PM

ಬೆಂಗಳೂರು, ಅ.02: ಡಾ. ಗಿರಿಧರ ಕಜೆ ಅವರು ಶ್ರೀ ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷರಾಗಿ 12ನೇ ಬಾರಿಗೆ ಸರ್ವಾನುಮತದಿಂದ ಪುನರಾಯ್ಕೆಯಾದರು. ನಗರದ ಮಲ್ಲೇಶ್ವರದಲ್ಲಿರುವ ಹವ್ಯಕ ಭವನದಲ್ಲಿ ಶುಕ್ರವಾರ ನಡೆದ ಶ್ರೀ ಅಖಿಲ ಹವ್ಯಕ ಮಹಾಸಭೆಯ 83ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದೆ.

ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಗಿರಿಧರ ಕಜೆ (Dr Giridhara Kaje) ಅವರು, ಸಂಘಸಂಸ್ಥೆಗಳು ಸಕ್ರಿಯವಾಗಿದ್ದಾಗ ಸಮಾಜದಿಂದ ಸಹಜವಾಗಿ ಬೆಂಬಲ ವ್ಯಕ್ತವಾಗುತ್ತದೆ. ಕಾರ್ಯಕ್ರಮಗಳು ಹೆಚ್ಚಾಗಿ ನಡೆದಾಗ ಸಮಾಜವು ನಮ್ಮನ್ನು ಗುರುತಿಸುತ್ತದೆ ಹಾಗೂ ನಾವು ಹೆಚ್ಚು ಜನರನ್ನು ತಲುಪಲು ಸಾಧ್ಯ. ಹವ್ಯಕ ಮಹಾಸಭೆಯು ಈ ದಿಸೆಯಲ್ಲಿ ಪ್ರಾದೇಶಿಕವಾಗಿಯೂ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಜಾತಿಯನ್ನೂ ಮೀರಿ ಸಮಷ್ಟಿ ಸಮಾಜಕ್ಕೆ ಉಪಕಾರಿಯಾದ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದರು.

ಮಹಿಳೆಯರು ಸಕ್ರಿಯರಾದಾಗ ಮಾತ್ರ ಸಮಗ್ರ ಸಮಾಜದ ಜಾಗೃತಿ ಸಾಧ್ಯ. ಈ ಹಿನ್ನೆಲೆಯಲ್ಲಿ ಮಹಿಳಾ ಸಂಘಟನೆಯನ್ನು ಬಲಗೊಳಿಸಲಾಗುತ್ತಿದ್ದು, ಹವ್ಯಕರು ಹೆಚ್ಚಿನ ಸಂಖ್ಯೆಯಲ್ಲಿರುವ 83 ಪ್ರಾಂತ್ಯಗಳಲ್ಲಿ ಹವ್ಯಕ ಮಹಿಳಾ ವೇದಿಕೆಯನ್ನು ಪ್ರಾರಂಭಿಸಲಾಗುತ್ತಿದೆ. ಡಿಸೆಂಬರ್ 20 ರಂದು ಬೃಹತ್ ಹವ್ಯಕ ಮಹಿಳಾ ಸಮಾವೇಶವನ್ನು ಆಯೋಜಿಸಲಾಗುವುದು. ಮುಂದಿನ ವರ್ಷ ಯುವಕರ ಸಂಘಟನೆಗೆ ಯೋಜಿಸಲಾಗಿದ್ದು, ದೇಶ - ಹೊರದೇಶಗಳ 84 ಪ್ರಾಂತ್ಯಗಳಲ್ಲಿ ಹವ್ಯಕ ಯುವ ವೇದಿಕೆ ಕಾರ್ಯಾರಂಭ ಮಾಡಲಿದೆ. ಮಹಿಳೆಯರು ಹಾಗೂ ಯುವಕರು ಸಂಘಟಿತರಾದಾಗ ಬಲಿಷ್ಠ ಸಂಘಟನೆ ನಿರ್ಮಾಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

Sri Akhila Havyaka Mahasabha

ವೈವಾಹಿಕ ಸಮಸ್ಯೆಗಳು ಸೇರಿ ಸಮಾಜದ ಅನೇಕ ಜ್ವಲಂತ ಸಮಸ್ಯೆಗಳಿಗೆ ಸಂಘಟನೆಯೇ ಪರಿಹಾರವಾಗಿದ್ದು, ಸಂಘಟನೆ ಬಲಿಷ್ಠವಾದಾಗ ಸಮಾಜ ಸುಭಿಕ್ಷೆಯಿಂದ ಇರಲು ಸಾಧ್ಯ ಎಂದರು.

ನಮ್ಮ ಮೂಲ ನೆಲೆಗಳು ನದಿ ತಿರುವು ಯೋಜನೆ, ಪರಿಸರ ಹಾನಿ ಮುಂತಾದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅಕ್ಟೋಬರ್ 10 ರಂದು ಈ ಕುರಿತಾಗಿ ಬೃಹತ್ ಪ್ರತಿಭಟನೆ ನಡೆಯಲಿದೆ. ಇದರಲ್ಲಿ ನಾವೆಲ್ಲರೂ ಕೈಜೋಡಿಸೋಣ ಎಂದು ಅವರು ಕರೆ ನೀಡಿದರು.

ವಾರ್ಷಿಕ ಮಹಾಸಭೆಯಲ್ಲಿ ಪದಾಧಿಕಾರಿಗಳು ಹಾಗೂ ಸಾಗರ, ಮಂಗಳೂರು, ಬೆಂಗಳೂರು, ಉತ್ತರ ಕನ್ನಡ, ಕಾಸರಗೋಡು ಸೇರಿದಂತೆ ಬೇರೆಬೇರೆ ಪ್ರಾಂತಗಳ ನಿರ್ದೇಶಕರು - ಸದಸ್ಯರು ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ ಭಾಗವಹಿಸಿದ್ದರು.

ನಾಡಹಬ್ಬ ದಸರಾದಲ್ಲಿ ಈ ಬಾರಿ ಇಡೀ ಸ್ಯಾಂಡಲ್‌ವುಡ್ ಭಾಗಿ; 2 ದಿನ ಶೂಟಿಂಗ್ ಬಂದ್, ಅರಮನೆಯಲ್ಲಿ ಕಲಾವಿದರಿಗೆ ವಿಶೇಷ ವ್ಯವಸ್ಥೆ!

ಡಾ. ಗಿರಿಧರ ಕಜೆ 12ನೇ ಬಾರಿಗೆ ಸರ್ವಾನುಮತದಿಂದ ಪುನರಾಯ್ಕೆ

ಡಾ. ಗಿರಿಧರ ಕಜೆ ಅವರು ಶ್ರೀ ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷರಾಗಿ 12ನೇ ಬಾರಿಗೆ ಸರ್ವಾನುಮತದಿಂದ ಪುನರಾಯ್ಕೆಯಾದರು.

ನೂತನ ಆಡಳಿತ ಮಂಡಳಿ ಪದಾಧಿಕಾರಿಗಳು

  • ಡಾ. ಗಿರಿಧರ ಕಜೆ - ಅಧ್ಯಕ್ಷರು
  • ಆರ್ ಎಂ ಹೆಗಡೆ ಬಾಳೆಸರ - ಉಪಾಧ್ಯಕ್ಷರು
  • ಶ್ರೀಧರ ಜೆ ಭಟ್ಟ ಕೆಕ್ಕಾರು - ಉಪಾಧ್ಯಕ್ಷರು
  • ಸಿಎ. ವೇಣುವಿಘ್ನೇಶ ಸಂಪ - ಪ್ರಧಾನ ಕಾರ್ಯದರ್ಶಿ
  • ಪ್ರಶಾಂತ ಕುಮಾರ ಭಟ್ಟ ಮಲವಳ್ಳಿ - ಕಾರ್ಯದರ್ಶಿ
  • ಆದಿತ್ಯ ಹೆಗಡೆ ಕಲಗಾರು - ಕಾರ್ಯದರ್ಶಿ
  • ಕೃಷ್ಣಮೂರ್ತಿ ಎಸ್. ಭಟ್ ಯಲಹಂಕ - ಕೋಶಾಧಿಕಾರಿ