ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕುಡಿದ ಮತ್ತಿನಲ್ಲಿ ಭಾರೀ ಅನಾಹುತ; ಪೆಟ್ರೋಲ್ ಬಂಕ್‌ಗೆ ಜಾಗ್ವಾರ್ ಡಿಕ್ಕಿ, ಹೊತ್ತಿ ಉರಿದ ಕಾರು

ಕುಡಿದ ಮತ್ತಿನಲ್ಲಿ ಅತಿವೇಗವಾಗಿ ಬಂದ ಜಾಗ್ವಾರ್ ಕಾರೊಂದು ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಹಾಗೂ ಪೆಟ್ರೋಲ್ ಪಂಪ್ ಕ್ಷಣಾರ್ಧದಲ್ಲಿ ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದಲ್ಲಿ ನಡೆದಿದೆ.

ಕುಡಿದ ಮತ್ತಿನಲ್ಲಿ ಭಾರೀ ಅನಾಹುತ;  ಪೆಟ್ರೋಲ್ ಬಂಕ್‌ಗೆ ಜಾಗ್ವಾರ್ ಡಿಕ್ಕಿ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Oct 8, 2026 10:03 AM

ಬೆಂಗಳೂರು: ಕುಡಿದ ಮತ್ತಿನಲ್ಲಿ ಅತಿವೇಗವಾಗಿ ಬಂದ ಜಾಗ್ವಾರ್ ಕಾರೊಂದು ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಹಾಗೂ ಪೆಟ್ರೋಲ್ ಪಂಪ್ ಕ್ಷಣಾರ್ಧದಲ್ಲಿ ಬೆಂಕಿಗೆ (Fire Accident) ಆಹುತಿಯಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದಲ್ಲಿ ನಡೆದಿದೆ. ಅತ್ತಿಬೆಲೆಯ ಹೆಚ್‌ಪಿ (HP) ಪೆಟ್ರೋಲ್ ಬಂಕ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಜಾಗ್ವಾರ್‌ ಕಾರಿನಲ್ಲಿದ್ದ ಸಂಜಯ್ ಎಂಬಾತ ಯುವತಿಯೊಬ್ಬಳ ಜೊತೆ ಜಾಗ್ವಾರ್ ಕಾರಿನಲ್ಲಿ ಬಂದಿದ್ದು, ಕುಡಿದ ಮತ್ತಿನಲ್ಲಿ ಏಕಾಏಕಿ ಕಾರನ್ನು ಪೆಟ್ರೋಲ್ ಬಂಕ್ ಸಿಬ್ಬಂದಿ ಗುಡ್ಡು ಕುಮಾರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ನಿಯಂತ್ರಣ ತಪ್ಪಿದ ಕಾರು ನೇರವಾಗಿ ಪೆಟ್ರೋಲ್ ಪಂಪ್‌ಗೆ ಅಪ್ಪಳಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಿಡಿ ಹೊತ್ತಿಕೊಂಡು ಕ್ಷಣಾರ್ಧದಲ್ಲೇ ಕಾರು ಹಾಗೂ ಪೆಟ್ರೋಲ್ ಪಂಪ್‌ಗೆ ಬೆಂಕಿ ವ್ಯಾಪಿಸಿದೆ. ಕಾರಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಯುವಕ ಹಾಗೂ ಯುವತಿ ಕಾರಿನಿಂದ ಕೆಳಕ್ಕಿಳಿದು ಪ್ರಾಣ ರಕ್ಷಿಸಿಕೊಂಡಿದ್ದಾನೆ.

ಕಾರು ಡಿಕ್ಕಿಯಾದ ರಭಸಕ್ಕೆ ಗಾಯಗೊಂಡ ಪೆಟ್ರೋಲ್ ಬಂಕ್ ಸಿಬ್ಬಂದಿ ಗುಡ್ಡು ಕುಮಾರ್ ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ, ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿ ಭಾರೀ ದುರಂತವನ್ನು ತಪ್ಪಿಸಿವೆ.

ಘಟನೆ ಸಂಬಂಧ ಕಾರು ಚಾಲನೆ ಮಾಡುತ್ತಿದ್ದ ಸಂಜಯ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

cholesterol: ಎಲ್‌ಡಿಎಲ್ ಕೊಲೆಸ್ಟ್ರಾಲ್ ಅಥವಾ ಕೆಟ್ಟ ಕೊಲೆಸ್ಟ್ರಾಲ್ ಕುರಿತು ಪ್ರತಿಯೊಬ್ಬರೂ ವೈದ್ಯರನ್ನು ಕೇಳಬೇಕಾದ 3 ಪ್ರಮುಖ ಪ್ರಶ್ನೆಗಳು

ಖಾಸಗಿ ಬಸ್‌ಗೆ ಬೆಂಕಿ

ಬೆಂಗಳೂರಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ ಹೊತ್ತಿ ಉರಿದ ಘಟನೆ ಆನಂದಪುರ ಬಳಿಯ ಮುಂಬಾಳು ಗ್ರಾಮದಲ್ಲಿ ನಡೆದಿದೆ. ಬಸ್‌ NH-206 ಮಾರ್ಗದಲ್ಲಿ ಬಸ್‌ ಸಂಚರಿಸುತ್ತಿತ್ತು. ಈ ವೇಳೆ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ನೋಡ ನೋಡುತ್ತಿದ್ದಂತೆ ಬಸ್‌ ಸುಟ್ಟು ಕರಕಲಾಗಿದೆ.‌ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಚಾಲಕ, ಹಾಗೂ ಕ್ಲೀನರ್‌ ತಕ್ಷಣ ಕೆಳಗಿಳಿಸಿದ್ದಾರೆ. ಇದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.