Karnataka Weather: ಹವಾಮಾನ ವರದಿ; ನಾಳೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಒಣ ಹವೆ
ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಶುಕ್ರವಾರ ಕಲಬುರಗಿ, ಹಾಸನ ಎಡಬ್ಲ್ಯೂಎಸ್, ಶಕ್ತಿ ನಗರದಲ್ಲಿ ಗರಿಷ್ಠ ತಾಪಮಾನ 31.8 ಡಿಗ್ರಿ ಸೆ. ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಲ್ಲಿ ಮೈಸೂರಿನಲ್ಲಿ ಅತಿ ಕನಿಷ್ಠ ತಾಪಮಾನ 16.0 ಡಿಗ್ರಿ ಸೆ. ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
-
Prabhakara R
Nov 1, 2025 7:02 PM
ಬೆಂಗಳೂರು, ನ.1: ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಶುಕ್ರವಾರ, ಈಶಾನ್ಯ ಮಾನ್ಸೂನ್ ಸಾಮಾನ್ಯವಾಗಿತ್ತು. ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಇದರಿಂದ ಕರಾವಳಿ ಕರ್ನಾಟಕದ ಹಲವೆಡೆ, ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಇತ್ತು. ಇದೇ ರೀತಿ ನ.2ರಂದು ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ (Karnataka Weather) ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಇದೇ ರೀತಿಯ ವಾತಾವರಣ ಇರಲಿದೆ.
ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಬಹುತೇಕ ಶುಭ್ರ ಆಕಾಶ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 19°C ಇರುವ ಸಾಧ್ಯತೆ ಇದೆ.
ಮೈಸೂರಿನಲ್ಲಿ ಕನಿಷ್ಠ ತಾಪಮಾನ
ರಾಜ್ಯದಲ್ಲಿ ಶುಕ್ರವಾರ ಕಲಬುರಗಿ, ಹಾಸನ ಎಡಬ್ಲ್ಯೂಎಸ್, ಶಕ್ತಿ ನಗರದಲ್ಲಿ ಗರಿಷ್ಠ ತಾಪಮಾನ 31.8 ಡಿಗ್ರಿ ಸೆ. ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಲ್ಲಿ ಮೈಸೂರಿನಲ್ಲಿ ಅತಿ ಕನಿಷ್ಠ ತಾಪಮಾನ 16.0 ಡಿಗ್ರಿ ಸೆ. ದಾಖಲಾಗಿದೆ.
ನ.7ವರೆಗಿನ ಹವಾಮಾನ ವರದಿ ಇಲ್ಲಿದೆ
ನ. 3ರಂದು ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.
ನ.4ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ನ.5ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Health Tips: ಮಹಿಳೆಯರಿಗೆ ಬೇಕಾಗುವ ಈ ಸತ್ವಗಳು ನಿಮ್ಮ ಆಹಾರದಲ್ಲೂ ಇದೆಯೇ?
ನ.6 ಮತ್ತು 7ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳು ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.