T20 World Cup Final: ಟೀಂ ಇಂಡಿಯಾ ಗೆಲುವು; ಬೆಂಗಳೂರು ಸೇರಿ ರಾಜ್ಯಾದ್ಯಂತ ಮುಗಿಲುಮುಟ್ಟಿದ ಅಭಿಮಾನಿಗಳ ಸಂಭ್ರಮ
ಟಿ20 ವಿಶ್ವಕಪ್ ಫೈನಲ್ ಹಿನ್ನೆಲೆಯಲ್ಲಿ ಹಲವೆಡೆ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿತ್ತು. ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಗೆಲುವು ಸಾಧಿಸುತ್ತಲೇ ರಾಜ್ಯದಲ್ಲಿ ವಿವಿಧೆಡೆ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಇನ್ನು ಟೀಂ ಇಂಡಿಯಾ ಗೆಲುವಿಗೆ ಸಿಎಂ ಸಿದ್ದರಾಮಯ್ಯ ಸೇರಿ ಹಲವು ರಾಜಕೀಯ ನಾಯಕರು, ವಿವಿಧ ಕ್ಷೇತ್ರಗಳ ಪ್ರಮುಖರು ಅಭಿನಂದನೆ ಸಲ್ಲಿಸಿದ್ದಾರೆ.
ಭಾರತೀಯ ಕ್ರಿಕೆಟ್ ಅಭಿಮಾನಿಗಳ ಸಂಭ್ರಮಾಚರಣೆ. -
ಬೆಂಗಳೂರು: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ (T20 World Cup Final) ನ್ಯೂಜಿಲೆಂಡ್ ತಂಡದ ವಿರುದ್ಧ ಟೀಂ ಇಂಡಿಯಾ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು, ಮೈಸೂರು, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ ಸೇರಿ ವಿವಿಧೆಡೆ ಕ್ರಿಕೆಟ್ ಅಭಿಮಾನಿಗಳ (Fans celebration) ಸಂಭ್ರಮ ಮುಗಿಲುಮುಟ್ಟಿತ್ತು. ಭಾನುವಾರ ರಾತ್ರಿ ರಸ್ತೆಗಳಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.
ಟಿ20 ವಿಶ್ವಕಪ್ ಫೈನಲ್ ಹಿನ್ನೆಲೆಯಲ್ಲಿ ಹಲವೆಡೆ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿತ್ತು. ಭಾರತ ತಂಡ ಗೆಲುವು ಸಾಧಿಸುತ್ತಲೇ ರಾಜ್ಯದಲ್ಲಿ ವಿವಿಧೆಡೆ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಇನ್ನು ಟೀಂ ಇಂಡಿಯಾ ಗೆಲುವಿಗೆ ಸಿಎಂ ಸಿದ್ದರಾಮಯ್ಯ ಸೇರಿ ಹಲವು ರಾಜಕೀಯ ನಾಯಕರು, ವಿವಿಧ ಕ್ಷೇತ್ರಗಳ ಪ್ರಮುಖರು ಅಭಿನಂದನೆ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅಭಿನಂದನೆ
ಭಾರತ ಕ್ರಿಕೆಟ್ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ವಿಶ್ವ ವಿಜೇತ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಟಿ20 ವಿಶ್ವಕಪ್ ಪಂದ್ಯಾವಳಿಯ ಮೊದಲ ದಿನದಿಂದಲೇ ಚಾಂಪಿಯನ್ ಆಟವಾಡುತ್ತಾ ಬಂದಿದ್ದ ನಮ್ಮ ತಂಡ ಪ್ರಶಸ್ತಿಗೆ ಅತ್ಯಂತ ಅರ್ಹ ತಂಡವಾಗಿತ್ತು. ಯುವ ಆಟಗಾರರಿಂದಲೇ ತುಂಬಿದ್ದ ಈ ತಂಡ ಅನುಭವದಲ್ಲಿ ಕಡಿಮೆಯಿದ್ದರೂ, ಪ್ರತಿಭಾಶಾಲಿಗಳಿಂದ ಕೂಡಿತ್ತು. ತವರು ಪ್ರೇಕ್ಷಕರ ಬೆಂಬಲ, ಆಟಗಾರರ ಶ್ರಮ ಮತ್ತು ಕೋಟ್ಯಂತರ ಭಾರತೀಯರ ಹಾರೈಕೆ ವಿಶ್ವಕಪ್ ಕಿರೀಟವಾಗಿ ನಮ್ಮವರ ಮುಡಿ ಸೇರಿದೆ.
ವಿಶ್ವ ವಿಜೇತ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಟಿ20 ವಿಶ್ವಕಪ್ ಪಂದ್ಯಾವಳಿಯ ಮೊದಲ ದಿನದಿಂದಲೇ ಚಾಂಪಿಯನ್ ಆಟವಾಡುತ್ತಾ ಬಂದಿದ್ದ ನಮ್ಮ ತಂಡ ಪ್ರಶಸ್ತಿಗೆ ಅತ್ಯಂತ ಅರ್ಹ ತಂಡವಾಗಿತ್ತು. ಯುವ ಆಟಗಾರರಿಂದಲೇ ತುಂಬಿದ್ದ ಈ ತಂಡ ಅನುಭವದಲ್ಲಿ ಕಡಿಮೆಯಿದ್ದರೂ, ಪ್ರತಿಭಾಶಾಲಿಗಳಿಂದ ಕೂಡಿತ್ತು. ತವರು ಪ್ರೇಕ್ಷಕರ ಬೆಂಬಲ, ಆಟಗಾರರ ಶ್ರಮ… pic.twitter.com/Bcoem7aTGS
— Siddaramaiah (@siddaramaiah) March 8, 2026
ಇಂದಿನ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್, ಅದ್ಭುತ ಬೌಲಿಂಗ್, ಅತ್ಯುತ್ತಮ ಕ್ಷೇತ್ರರಕ್ಷಣೆ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲೂ ಭಾರತ ತಂಡ ಶ್ರೇಷ್ಠ ಪ್ರದರ್ಶನ ತೋರಿದೆ. ಉತ್ತಮ ಪ್ರದರ್ಶನ ನೀಡುತ್ತಾ ಫೈನಲ್ ಪಂದ್ಯದ ವರೆಗೆ ಬಂದಿರುವ ನ್ಯೂಜಿಲೆಂಡ್ ತಂಡದ ಸಾಧನೆ ಕೂಡ ಕಡಿಮೆಯೇನಲ್ಲ. ಅವರಿಗೂ ನನ್ನ ಅಭಿನಂದನೆಗಳು. ಕ್ರಿಕೆಟ್ ಜಗತ್ತಿನಲ್ಲಿ ಭಾರತದ ಕೀರ್ತಿ ಪತಾಕೆ ಮತ್ತೆ ಮುಗಿಲೆತ್ತರದಲ್ಲಿ ರಾರಾಜಿಸುತ್ತಿದೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಇದೊಂದು ಅವಿಸ್ಮರಣೀಯ ದಿನ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.