Bengaluru Metro fire: ಬೆಂಗಳೂರಿನ ನಾಗಸಂದ್ರ ಮೆಟ್ರೋ ಸ್ಟೇಷನ್‌ನಲ್ಲಿ ಬೆಂಕಿ ಅವಘಡ; ಆತಂಕದ ಸ್ಥಿತಿ ನಿರ್ಮಾಣ
Namma Metro: ಬೆಂಗಳೂರಿನ ಹಸಿರು ಮಾರ್ಗದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದೆ. ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದರಿಂದ ನಂದಿಸಲು ಸಿಬ್ಬಂದಿ ಹರಸಾಹಸಪಟ್ಟರು.
ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ. -
ಬೆಂಗಳೂರು: ನಗರದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದೆ. ಇದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದರಿಂದ ನಂದಿಸಲು ಸಿಬ್ಬಂದಿ ಹರಸಾಹಸಪಟ್ಟರು.
ಮಾದಾವರ- ಸಿಲ್ಕ್ ಇನ್ಸ್ಟಿಟ್ಯೂಟ್ ಮಾರ್ಗದಲ್ಲಿ (ಹಸಿರು ಮಾರ್ಗ) ಬರುವ ಮೆಟ್ರೋ ಸ್ಟೇಷನ್ ಬೆಂಕಿ ಅವಘಡ ಸಂಭವಿಸಿದೆ. ಮೆಟ್ರೋ ನಿಲ್ದಾಣದ ನೇಮ್ ಬೋರ್ಡ್ ಹೊತ್ತಿ ಉರಿದಿದ್ದು, ಇದರಿಂದ ಪ್ರಯಾಣಿಕರು ಆತಂಕಗೊಂಡಿದ್ದಾರೆ. ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
#WATCH | Bengaluru, Karnataka: A minor fire incident occurred today at around 1:30 PM near the Emergency Exit area of Nagasandra Metro Station, involving a signboard. The Operations and Fire Response Teams immediately attended the site and promptly extinguished the fire. The… pic.twitter.com/snkCUsaiqg
— ANI (@ANI) June 21, 2026
ಬೆಂಕಿ ಅವಘಡದ ಬಗ್ಗೆ ಬಿಎಂಆರ್‌ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಇಂದು ಮಧ್ಯಾಹ್ನ ಸುಮಾರು 1:30ಕ್ಕೆ ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ಪ್ರದೇಶದ ಸಮೀಪ ಅಳವಡಿಸಲಾಗಿದ್ದ ಸೂಚನಾ ಫಲಕದಲ್ಲಿ ಸಣ್ಣ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ದೊರೆಯುತ್ತಿದ್ದಂತೆಯೇ ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ತಕ್ಷಣ ಧಾವಿಸಿ ಬೆಂಕಿ ನಂದಿಸಿವೆ. ಪ್ರಸ್ತುತ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಈ ಘಟನೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿದೆ.
ಮೆಟ್ರೋ ರೈಲು ಸಂಚಾರ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಎಲ್ಲಾ ಮೆಟ್ರೋ ಸೇವೆಗಳು ಎಂದಿನಂತೆ ಸುಗಮವಾಗಿ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.