D. V. Sadananda Gowda: ಮಾಜಿ ಸಿಎಂ ಸದಾನಂದ ಗೌಡ ಬ್ಯಾಂಕ್ ಖಾತೆ ಹ್ಯಾಕ್; 3 ಲಕ್ಷ ದೋಚಿದ ಸೈಬರ್ ಖದೀಮರು!
cyber crime: ನೆನ್ನೆ ನನ್ನ 3 ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಎಗರಿಸಿದ್ದಾರೆ. ಸುಮಾರು 3 ಲಕ್ಷ ರೂ. ಹಣ ಹೋಗಿದೆ. ಎಚ್‌ಡಿಎಫ್‌ಸಿ, ಎಸ್‌ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ ಎಂದು ಮಾಜಿ ಸಿಎಂ ಸದಾನಂದ ಗೌಡ ತಿಳಿಸಿದ್ದಾರೆ.
-
Prabhakara R
Sep 17, 2025 2:01 PM
ಬೆಂಗಳೂರು: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ (DV Sadananda Gowda) ಅವರ ಬ್ಯಾಂಕ್ ಖಾತೆ ಹ್ಯಾಕ್ ಆಗಿದ್ದು, ಸೈಬರ್ ಕಳ್ಳರು 3 ಲಕ್ಷ ರೂ. ಹಣವನ್ನು ದೋಚಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಆರ್‌ಎಂವಿ ಎಕ್ಸ್‌ಟೆನ್ಷನ್‌ನ ಬಿಬಿಎಂಪಿ ಪಾರ್ಕ್‌ನಲ್ಲಿ ಆಯೋಜಿಸಿದ್ದ75 ಪೌರ ಕಾರ್ಮಿಕರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಈ ಬಗ್ಗೆ ಮಾತನಾಡಿದ್ದಾರೆ.
ನೆನ್ನೆ ನನ್ನ 3 ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಎಗರಿಸಿದ್ದಾರೆ. ಸುಮಾರು 3 ಲಕ್ಷ ರೂ. ಹಣ ಹೋಗಿದೆ. ಎಚ್‌ಡಿಎಫ್‌ಸಿ, ಎಸ್‌ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್‌ಗೆ ದೂರು ನೀಡುತ್ತೇನೆ ಎಂದು ಹೇಳಿದರು.
ದಲಿತ ಮಹಿಳೆಯರಿಗೆ ಅಪಮಾನ ಆರೋಪ; ಶಾಸಕ ಯತ್ನಾಳ್ ವಿರುದ್ಧ ಅಟ್ರಾಸಿಟಿ ಕೇಸ್
ಕೊಪ್ಪಳ: ದಲಿತ ಮಹಿಳೆಯರಿಗೆ ಅಪಮಾನ ಮಾಡಿದ ಆರೋಪದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೊಪ್ಪಳದಲ್ಲಿ ಎಫ್ಐಆರ್ ದಾಖಲಾಗಿದೆ. ಚಾಮುಂಡಿ ತಾಯಿಗೆ ಹೂ ಮುಡಿಸಲು ಸನಾತನ ಧರ್ಮದವರಿಗೆ ಮಾತ್ರ ಅವಕಾಶ ಇದೆ. ಸಾಮಾನ್ಯ ದಲಿತ ಮಹಿಳೆಗೂ ಅವಕಾಶ ಇಲ್ಲ ಎಂಬ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಯತ್ನಾಳ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ.
ದಲಿತ ವಿಮೋಚನೆಯ ಮಾನವ ಹಕ್ಕು ಹೋರಾಟ ವೇದಿಕೆಯ ಕೊಪ್ಪಳ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ್ ಪೂಜಾರ ನೀಡಿದ ದೂರಿನ ಮೇರೆಗೆ ಶಾಸಕ ಯತ್ನಾಳ್ ವಿರುದ್ಧ ಎಸ್‌ಸಿ.ಎಸ್‌ಟಿ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | Basangouda Patil Yatnal: ಮದ್ದೂರಿನಲ್ಲಿ ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಗರ್ಜನೆ; ಹೊಸ ಪಕ್ಷ ಘೋಷಣೆ
ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಭಾನು ಮುಷ್ತಾಕ್ ಅವರ ಆಯ್ಕೆ ವಿರೋಧಿಸಿ ಮಾತನಾಡುವ ವೇಳೆ, ಸನಾತನ ಧರ್ಮದವರು ಮಾತ್ರ ಚಾಮುಂಡಿಗೆ ಪೂಜಿಸಬೇಕು. ಸಾಮಾನ್ಯ ದಲಿತ ಮಹಿಳೆಗೂ ಯತ್ನಾಳ್ ಅವಕಾಶ ಇಲ್ಲ ಅಂತ ಯತ್ನಾಳ್ ಹೇಳಿಕೆ ನೀಡಿದ್ದಾರೆ. ದಲಿತ ಮಹಿಳೆಯರಿಗೆ ಅಪಮಾನ ಮಾಡಿರುವ ಶಾಸಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಲಾಗಿತ್ತು. ಹೀಗಾಗಿ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲು ಮಾಡಲಾಗಿದೆ.