ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಚುನಾವಣಾ ಆಯೋಗಕ್ಕೆ ಸರಕಾರ ಸಾಥ್‌, ಜಿಬಿಎ ಎಲೆಕ್ಷನ್‌ ಮುಂದಕ್ಕೆ ?

ಜಿಬಿಎ ಚುನಾವಣೆ(GBA Election) ವಿಚಾರದಲ್ಲಿ ಚುನಾವಣಾ ಆಯೋಗ ಸುಪ್ರಿಂ ಕೋರ್ಟ(Supreme Court) ಕದ ತಟ್ಟಿರುವ ನಡುವೆಯೇ ರಾಜ್ಯ ಸರಕಾರ ಕೂಡ ಚುನಾವಣೆಗೆ ಮತ್ತಷ್ಟು ಸಮಯ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ನಡೆಸಲು ನಿಗದಿಪಡಿಸಿರುವ ಕಾಲಮಿತಿಯನ್ನು ವಿಸ್ತರಿಸುವಂತೆ ಕೋರಿ ರಾಜ್ಯ ಸರಕಾರ ಸುಪ್ರಿಂ ಕೋರ್ಟ್ ಮೊರೆ ಹೋಗಿದೆ.

ಚುನಾವಣಾ ಆಯೋಗಕ್ಕೆ ಸರಕಾರ ಸಾಥ್‌, ಜಿಬಿಎ ಎಲೆಕ್ಷನ್‌ ಮುಂದಕ್ಕೆ ?

-

Profile
Ashok Nayak Nov 19, 2026 10:26 AM

ಬೆಂಗಳೂರು: ಜಿಬಿಎ ಚುನಾವಣೆ(GBA Election) ವಿಚಾರದಲ್ಲಿ ಚುನಾವಣಾ ಆಯೋಗ ಸುಪ್ರಿಂ ಕೋರ್ಟ(Supreme Court) ಕದ ತಟ್ಟಿರುವ ನಡುವೆಯೇ ರಾಜ್ಯ ಸರಕಾರ ಕೂಡ ಚುನಾವಣೆಗೆ ಮತ್ತಷ್ಟು ಸಮಯ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ನಡೆಸಲು ನಿಗದಿಪಡಿಸಿರುವ ಕಾಲಮಿತಿಯನ್ನು ವಿಸ್ತರಿಸುವಂತೆ ಕೋರಿ ರಾಜ್ಯ ಸರಕಾರ ಸುಪ್ರಿಂ ಕೋರ್ಟ್ ಮೊರೆ ಹೋಗಿದೆ.

2026ರ ಡಿಸೆಂಬರ್ ಅಂತ್ಯದೊಳಗೆ ಚುನಾವಣೆ ನಡೆಸುವ ಬದಲಿಗೆ 2027ರ ಜನವರಿ 31ರೊಳಗೆ ಚುನಾವಣೆ ಪೂರ್ಣಗೊಳಿಸಲು ಅನುಮತಿ ನೀಡುವಂತೆ ಸರಕಾರ ಮನವಿ ಮಾಡಿದೆ. ರಾಜ್ಯ ಚುನಾವಣಾ ಆಯೋಗವು ಸಲ್ಲಿಸಿರುವ ಕಾಲಾವಕಾಶ ವಿಸ್ತರಣೆಯ ಅರ್ಜಿಯನ್ನು ಬೆಂಬಲಿಸಿ ರಾಜ್ಯ ಸರಕಾರವೂ ಸುಪ್ರಿಂಕೋರ್ಟ್‌ಗೆ ಪ್ರತ್ಯೆಕ ಅರ್ಜಿ ಸಲ್ಲಿಸಿದೆ. ಜತೆಗೆ, ಹೊಸದಾಗಿ ಮತದಾರರ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆಗೆ ಹೆಚ್ಚಿನ ಸಮಯ ಬೇಕಾಗುವುದರಿಂದ ಹಳೆಯ ಮತದಾರರ ಪಟ್ಟಿಯನ್ನೆ ಆಧರಿಸಿ ಚುನಾವಣೆ ನಡೆಸಲು ಅವಕಾಶ ನೀಡುವಂತೆ ಕೋರಿದೆ.

ಇದನ್ನೂ ಓದಿ: Bangalore News: ​ಶ್ರೀ ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾದಲ್ಲಿ ಫ್ರೆಷರ್ಸ್ ಡೇ ಹಾಗೂ ಕನ್ನಡ ರಾಜ್ಯೋತ್ಸವ

ಮತದಾರರ ಪಟ್ಟಿ ಪರಿಷ್ಕರಣೆ ಸವಾಲು: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಿಂದ ಬೆಂಗಳೂರಿನಲ್ಲಿ 43 ಲಕ್ಷಕ್ಕೂ ಅಧಿಕ ಮತದಾರರ ಹೆಸರುಗಳು ಕಡಿತಗೊಂಡಿರುವುದನ್ನು ಸರಕಾರ ತನ್ನ ಅರ್ಜಿಯಲ್ಲಿ ಉಖಿಸಿದೆ. ಈ ಹಿನ್ನೆಲೆಯಲ್ಲಿ ಹೊಸದಾಗಿ ವಾಡ್ ವಾರು ಮತದಾರರ ಪಟ್ಟಿ ಯನ್ನು ಸಿದ್ಧಪಡಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ತಿಳಿಸಿದೆ.

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗಾಗಿ ಹೊಸದಾಗಿ ವಾರ್ಡ್‌ವಾರು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಕನಿಷ್ಠ ಎರಡು ತಿಂಗಳ ಕಾಲಾವಕಾಶ ಅಗತ್ಯವಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ನಿಗದಿತ ಅವಧಿಯೊಳಗೆ ಚುನಾವಣೆ ನಡೆಸುವುದು ಕಷ್ಟಸಾಧ್ಯ ವಾಗಿರುವುದರಿಂದ ಕಾಲಾವಕಾಶ ವಿಸ್ತರಿ ಞಸುವ ಅಗತ್ಯವಿದೆ ಎಂಬುದು ಸರಕಾರದ ವಾದವಾಗಿದೆ.

ಚುನಾವಣೆ ಮುಂದೂಡಿಕೆ, ಹೊಸ ಮತದಾರರ ಪಟ್ಟಿ ಸಿದ್ಧಪಡಿಸುವ ಅವಧಿ ಹಾಗೂ ಹಳೆಯ ಪಟ್ಟಿಯ ಬಳಕೆಗೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ. ನ್ಯಾಯಾಲಯದ ತೀರ್ಪಿನ ಬಳಿಕ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣಾ ವೇಳಾಪಟ್ಟಿ ಮತ್ತು ಮತದಾರರ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆಯ ಮುಂದಿನ ನಡೆ ಸ್ಪಷ್ಟವಾಗಲಿದೆ.

ಹಳೆಯ ಮತ ಪಟ್ಟಿಯಲ್ಲಿ 88.95 ಲಕ ಮತದಾರರು ಹಳೆಯ ಮತದಾರರ ಪಟ್ಟಿಯಲ್ಲಿ ಒಟ್ಟು 88.95 ಲಕ್ಷ ಮತದಾರರ ಹೆಸರುಗಳಿದ್ದು, ಇದೇ ಪಟ್ಟಿಯನ್ನು ಬಳಸಿಕೊಂಡು ಚುನಾವಣೆ ನಡೆಸಲು ಅನುಮತಿ ನೀಡುವಂತೆ ರಾಜ್ಯ ಸರಕಾರ ಮನವಿ ಮಾಡಿದೆ. ಹೊಸ ಮತದಾರರ ಪಟ್ಟಿ ಸಿದ್ಧಪಡಿಸುವುದರಿಂದ ಎದುರಾಗಬಹುದಾದ ವಿಳಂಬವನ್ನು ತಪ್ಪಿಸಿ ಚುನಾವಣಾ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಲು ಹಳೆಯ ಪಟ್ಟಿಯ ಬಳಕೆ ಸಹಕಾರಿ ಯಾಗಲಿದೆ ಎಂಬ ಅಭಿಪ್ರಾಯವನ್ನು ಸರಕಾರ ಮುಂದಿಟ್ಟಿದೆ.

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗಳನ್ನು ಮುಕ್ತ ಹಾಗೂ ನ್ಯಾಯಸಮ್ಮತ ವಾಗಿ ನಡೆಸಲು ಅಗತ್ಯವಿರುವ ಎಲ್ಲ ಸಹಕಾರವನ್ನು ರಾಜ್ಯ ಸರಕಾರ ನೀಡಲಿದೆ ಎಂದು ಅರ್ಜಿಯಲ್ಲಿ ಭರವಸೆ ನೀಡಿದೆ.